ನಿನ್ನೆ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ತಂದೆ-ತಾಯಿಯನ್ನು(Property Rights Act) ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ ಎನ್ನವ ಕಾಯ್ದೆಯ ಕುರಿತು ವಿವರಣೆ ಸಹಿತ ಉತ್ತರವನ್ನು ಕೃಷ್ಣ ಬೈರೇಗೌಡ(Krishna Byre Gowda) ಕಂದಾಯ ಸಚಿವರು ನೀಡಿರುವ ಮಾಹಿತಿ ಮತ್ತು ಈ ಕುರಿತು ಸುಪ್ರೀಂ ಕೋರ್ಟನ ಪ್ರಕರಣ ಒಂದರ ತೀರ್ಪಿನ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.
ಪ್ರಸ್ತುತ ಡಿಜಿಟಲ್ ಯುಗದಲ್ಲಿ ಎಲ್ಲವೂ ಅತೀ ವೇಗವಾಗಿಯೇ ನಡೆಯಬೇಕು ಮಾನವನಿಗೆ ತಾಳ್ಮೆ ಅನ್ನುವ ಅಭ್ಯಾಸ ದಿನೇ ದಿನೇ ದೂರ ಸಾಗುತ್ತಿದೆ ಕೆಲಸ ಒತ್ತಡ ಆಧುನಿಕ ಜೀವನ ಶೈಲಿಯಲ್ಲಿ ಸಂಬಂಧಗಳ ಬೆಲೆಯು ಕ್ರಮೇಣ ಕಡಿಮೆಯಾಗುತ್ತ ಸಾಗುತ್ತಿದ್ದು ಮಕ್ಕಳು ತಮ್ಮ ವಯಸ್ಸಾದ ತಂದೆ-ತಾಯಿಗಳನ್ನು(Land Ownership) ಆರೈಕೆ ಮಾಡಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ: Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ
ವಯಸ್ಸಾದ ತಂದೆ-ತಾಯಿಯನ್ನು ಆರೈಕೆ ಮಾಡಲು ಹಿಂದೆ ಸರಿಯುವ ಮಕ್ಕಳಿಗೆ ಅವರ ಆಸ್ತಿಯಲ್ಲಿ ಮಾತ್ರ ಸರಿಯಾಗಿ ಪಾಲು ಬೇಕು, ಇದರ ಜೊತೆಗೆ ತಂದೆ-ತಾಯಿಯನ್ನು ವೃದ್ಧಾಶ್ರಮಗಳಿಗೆ ಸೇರಿಸುವವರ ಸಂಖ್ಯೆಯು ಸಹ ದಿನೇ ದಿನೇ ಏರುಗತಿಯಲ್ಲೇ ಸಾಗುತ್ತಿದೆ ಈ ಎಲ್ಲಾ ಕ್ರಮಗಳಿಗೆ ಕಾನೂನಿನ ಮೂಲಕ ಕೊಂಚ ಬ್ರೇಕ್ ಹಾಕಲು ಕೇಂದ್ರ ಸರಕಾರ(Central government) ಕಾಯ್ದೆಯನ್ನು ಜಾರಿಗೆ ತಂದಿದೆ ಇದಲ್ಲದೇ ಸುಪ್ರೀಂ ಕೋರ್ಟ(Supreme court) ಸಹ ಈ ನಿಟ್ಟಿನಲ್ಲು ಪೂರಕ ತೀರ್ಪುಗಳ ಪ್ರಕಟಿಸಿದೆ.
Property rights transfer-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ!
ಕೇಂದ್ರ ಸರ್ಕಾರದ “ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ದಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ” ಎಂದು ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಕೃಷ್ಣ ಬೈರೇಗೌಡ ಕಂದಾಯ ಸಚಿವರು ಮಾಹಿತಿ ಹಂಚಿಕೊಂದಿದ್ದಾರೆ.
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ಧಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007″(MAINTENANCE AND WELFARE OF PARENTS AND SENIOR CITIZENS ACT, 2007) ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.
ಇದನ್ನೂ ಓದಿ: BPL Ration Card- ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ನೂತನ ಕ್ರಮ!

PARENTS AND SENIOR CITIZENS ACT-ಅನೇಕರಿಗೆ ಈ ಕಾಯ್ದೆಯ ಕುರಿತು ಮಾಹಿತಿಯೇ ಇಲ್ಲ:
ಕೇಂದ್ರ ಸರ್ಕಾರ 2007 ರಲ್ಲೇ ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ’ ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್‍ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ.
ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರೀಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು.
ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರೀಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.
ಇದನ್ನೂ ಓದಿ: Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!
ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೆÇೀಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ.
ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲೂ ಸಹ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ ಎಂದು ಮಾಹಿತಿಯನ್ನು ಸದನದಲ್ಲಿ ಸಚಿವರು ತಿಳಿಸಿದರು.
PARENTS AND SENIOR CITIZENS ACT, 2007 PDF-ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007 ಯ ಸಂಪೂರ್ಣ ಮಾಹಿತಿಯ ಕೈಪಿಡಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್- Download Now
ಇದನ್ನೂ ಓದಿ: Job Fair- ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!
Supreme court Property rights Case -ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸುಪ್ರೀಂ ಕೋರ್ಟ
ವಯಸ್ಸಾದ ತಂದೆ-ತಾಯಿಗಳನ್ನು ವೃದ್ಧಾಶ್ರಮಗಳಿಗೆ ಕಳುಹಿಸುವವರಿಗೆ ಹಾಗೂ ಅವರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಂಡು ತಂದೆ-ತಾಯಿಗಳನ್ನು ನೋಡಿಕೊಳ್ಳದವರಿಗೆ ಕೊಂಚ ಕಡಿವಾಣ ಹಾಕಲು ಸುಪ್ರೀಂ ಕೋರ್ಟನಿಂದ ಇತ್ತೀಚೆಗೆ ಮಹತ್ವದ ತೀರ್ಪು ಅನ್ನು ಪ್ರಕರಣ ಒಂದರಲ್ಲಿ ಪ್ರಕಟಿಸಲಾಗಿದೆ.
ತಂದೆ-ತಾಯಿಗಳ ಉತ್ತಮ ರೀತಿಯಲ್ಲಿ ಆರೈಕೆ ಮಾಡುವುದಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟನಲ್ಲಿ(Property rights transfer) ದಾಖಲಾದ ಪ್ರಕರಣ ಒಂದರ ತೀರ್ಪಿನಲ್ಲಿ ವಯಸ್ಸಾದ ತಂದೆ-ತಾಯಿಯನ್ನು ನೋಡಿಕೊಳ್ಳದ ಮಕ್ಕಳು ತಂದೆ-ತಾಯಿಯ ಆಸ್ತಿಯಲ್ಲಿ ಪಾಲಾ ಕೇಳುವ ಹಕ್ಕು ಇರುವುದಿಲ್ಲ ಎಂದು ಎಂದು ಮಹತ್ವದ ತೀರ್ಪನ್ನು ಕೋರ್ಟ ಹೊರಡಿಸಿದೆ.
ಇದನ್ನೂ ಓದಿ: Business loan-ಸ್ವಂತ ಉದ್ದಿಮೆಯನ್ನು ಮಾಡಲು 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
Property rights transfer- ಒತ್ತಡಕ್ಕೆ ಮಣಿದು ಮುಂಚಿತವಾಗಿ ಮಕ್ಕಳ ಹೆಸರಿಗೆ ಆಸ್ತಿ ವರ್ಗಾವಣೆ ಮಾಡಿಕೊಳ್ಳಬೇಡಿ:
ವಯಸ್ಸಾದ ತಂದೆ-ತಾಯಿಗಳು ತಮ್ಮ ಮಕ್ಕಳ ಹೆಸರಿಗೆ ಯಾವುದೇ ಒತ್ತಡಕ್ಕೆ ಮಣಿದು ಅವಸರದಲ್ಲಿ ಮುಂಚಿತವಾಗಿ ತಮ್ಮ ಮಕ್ಕಳ ಹೆಸರಿಗೆ ಆಸ್ತಿಯನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬೇಡಿ ಆರೈಕೆ/ಪೋಷಣೆ ಕುರಿತು ಯಾವುದೇ ಸಮಸ್ಯೆಯಿದ್ದಲ್ಲಿ ನಿಮ್ಮ ಹತ್ತಿರದ ಉಪ ವಿಭಾಗಾಧಿಕಾರಿಗಳ ಕಚೇರಿಯನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಿ ಸೂಕ್ತ ಸಲಹೆಯನ್ನು ಪಡೆದುಕೊಳ್ಳಿ.