PUC ಮತ್ತು SSLC ಅಂತಿಮ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ!

November 6, 2025 | Siddesh
PUC ಮತ್ತು SSLC ಅಂತಿಮ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ!
Share Now:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ಎಸ್.ಎಸ್.ಎಲ್.ಸಿ(SSLC) ಮತ್ತು ಪಿಯುಸಿ(PUC) ಅಂತಿಮ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ.

2026ರ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು(PUC And SSLC Exam Time Table) ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲೇ ಹೇಗೆ ಡೌನ್ಲೋಡ್ ಮಾಡಿಕೊಳ್ಳಬಹುದು? ದಿನಾಂಕವಾಗಿ ಪರೀಕ್ಷೆ ದಿನಾಂಕಗಳ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ.

ಇದನ್ನೂ ಓದಿ: Narega Scheme Subsidy-ನರೇಗಾ ಯೋಜನೆಯಡಿ 5.0 ಲಕ್ಷದವರೆಗೆ ಆರ್ಥಿಕ ನೆರವು! ಇಲ್ಲಿದೆ ಸಂಪೂರ್ಣ ಮಾಹಿತಿ!

ದ್ವಿತೀಯ ಪಿಯು ಪರೀಕ್ಷೆ 2026ರ ಫೆಬ್ರವರಿ 28 ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 18 ರಿಂದ ಆರಂಭವಾಗಲಿದ್ದು, ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ.

SSLC Exam Time Table-2026ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ:

ಮಾರ್ಚ್ 18: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ (ಪ್ರಥಮ ಭಾಷೆ),

ಮಾರ್ಚ್ 23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ

ಮಾರ್ಚ್ 25: ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆಗಳು)

ಮಾರ್ಚ್ 28: ಗಣಿತ, ಸಮಾಜಶಾಸ್ತ್ರ

ಮಾರ್ಚ್ 30: ಹಿಂದಿ, ಕನ್ನಡ, ಇಂಗ್ಲಿಷ್, ಸಂಸ್ಕೃತ, ಅರೇಬಿಕ್, ಉರ್ದು, ಕೊಂಕಣಿ, ತುಳು, ಮರಾಠಿ (ತೃತೀಯ ಭಾಷೆಗಳು) ಮತ್ತು ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಬ್ಯೂಟಿ ಆ್ಯಂಡ್ ವೆಲ್‌ನೆಸ್, ಅಪರೆಲ್ ಮೇಡ್ ಅಪ್ಸ್ ಆ್ಯಂಡ್ ಹೋಮ್ ಫರ್ನೀಷಿಂಗ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಹಾರ್ಡ್‌ ವೇರ್

ಇದನ್ನೂ ಓದಿ: SSLC Exam Registration-ಎಸ್​ಎಸ್​ಎಲ್​​ಸಿ ಪರೀಕ್ಷೆ-1 ನೋಂದಣಿಗೆ ಕೊನೆಯ ದಿನಾಂಕ ವಿಸ್ತರಣೆ!

ಏಪ್ರಿಲ್ 1: ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟಿಕಲ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಎಎನ್.ಎಸ್.ಐ"ಸಿ"'

ಏಪ್ರಿಲ್ 2: ಸಮಾಜ ವಿಜ್ಞಾನ

PUC Exam Time Table-2026ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ:

ಫೆಬ್ರವರಿ 28: ಕನ್ನಡ, ಅರೇಬಿಕ್

ಮಾರ್ಚ್ 02: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 03: ಇಂಗ್ಲಿಷ್

ಮಾರ್ಚ್ 04: ಸಂಸ್ಕೃತ, ಉರ್ದು, ತೆಲುಗು, ತಮಿಳು, ಮಲಯಾಳಂ, ಮರಾಠಿ, ಫ್ರೆಂಚ್

ಮಾರ್ಚ್ 05: ಇತಿಹಾಸ

ಮಾರ್ಚ್ 06: ಭೌತಶಾಸ್ತ್ರ

ಮಾರ್ಚ್ 07: ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ

ಇದನ್ನೂ ಓದಿ: Chaff Cutter Subsidy-ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ಖರೀದಿಗೆ ಅರ್ಜಿ ಆಹ್ವಾನ!

ಮಾರ್ಚ್ 09: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ

ಮಾರ್ಚ್ 10: ಅರ್ಥಶಾಸ್ತ್ರ,

ಮಾರ್ಚ್ 11: ಗೃಹವಿಜ್ಞಾನ, ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ

ಮಾರ್ಚ್ 12: ಹಿಂದಿ

ಮಾರ್ಚ್ 13: ರಾಜ್ಯಶಾಸ್ತ್ರ

ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ

ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 17: ಮಾಹಿತಿ ತಂತ್ರಜ್ಞಾನ, ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ರೀಟೇಲ್, ಆಟೋಮೊಬೈಲ್, ಆರೋಗ, ರಕಣೆ, ಬ್ಯೂಟಿ ಆಂಡ್ ವೆಲ್‌ನೆಸ್.

ಇದನ್ನೂ ಓದಿ: High School Scholarship: 9-12 ತರಗತಿ ವಿದ್ಯಾರ್ಥಿಗಳಿಗೆ ರೂ 15,000/ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

SSLC Exam Time Table

PUC And SSLC Exam Time Table 2026-ಅಧಿಕೃತ ಪ್ರಕಟಣೆ ಪ್ರತಿಯನ್ನು ಡೌನ್ಲೋಡ್ ಮಾಡುವುದು ಹೇಗೆ?

ವಿದ್ಯಾರ್ಥಿಗಳು PUC ಮತ್ತು SSLC ಅಂತಿಮ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ತಮ್ಮ ಮೊಬೈಲ್ ನಲ್ಲೇ ಈ ಕೆಳಗೆ ವಿವರಿಸಿರುವ ಹಂತವನ್ನು ಅನುಸರಿಸಿ ಡೌನ್ಲೋಡ್ ಮಾಡಿಕೊಳ್ಳಬಹುದು.

Step-1: ಮೊದಲಿಗೆ PUC And SSLC Exam Time Table ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಕೆಂಪು ಬಣ್ಣದಲ್ಲಿ ಕಾಣುವ "ಮತ್ತಷ್ಟು ಓದಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ "SSLC ಮತ್ತು PUC ಅಂತಿಮ ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ" ಎನ್ನುವ ಆಯ್ಕೆಗಳು ಕಾಣಿಸುತ್ತವೆ ಇದರ ಮೇಲೆ ಕ್ಲಿಕ್ ಮಾಡಿದರೆ ಅಧಿಕೃತ ವೇಳಾಪಟ್ಟಿ ತೆರೆದುಕೊಳ್ಳುತ್ತದೆ ಇಲ್ಲಿ "Download" ಬಟನ್ ಮೇಲೆ ಕ್ಲಿಕ್ ಮಾಡಿ ವೇಳಾಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.

Board Website-ಹೆಚ್ಚಿನ ಮಾಹಿತಿಯನ್ನು ಪಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್- Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: