Ration Card-ಸರ್ಕಾರದಿಂದ ರೇಷನ್ ಕಾರ್ಡದಾರರಿಗೆ ಮತ್ತೊಂದು ಸಿಹಿ ಸುದ್ದಿ!

April 24, 2025 | Siddesh
Ration Card-ಸರ್ಕಾರದಿಂದ ರೇಷನ್ ಕಾರ್ಡದಾರರಿಗೆ ಮತ್ತೊಂದು ಸಿಹಿ ಸುದ್ದಿ!
Share Now:

ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ(Ration Card) ಹೊಂದಿರುವ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದ್ದು, ಇದರ ಕುರಿತು ಆಹಾರ ಇಲಾಖೆ(Ahara ilake)ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ಆಹಾರ ಇಲಾಖೆಯಿಂದ(Ration Card Details) ಈಗಾಗಲೇ ಪ್ರತಿ ತಿಂಗಳು ಕಾರ್ಡನಲ್ಲಿರುವ ಸದಸ್ಯರ ಸಂಖ್ಯೆಯ ಅನುಗುಣವಾಗಿ ಅಕ್ಕಿಯನ್ನು ನ್ಯಾಯ ಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡಲಾಗುತ್ತಿದೆ ಇದರೊಟ್ಟಿಗೆ ಹೆಚ್ಚುವರಿಯಾಗಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವ ಧಾನ್ಯವನ್ನು ರೇಶನ್ ಕಾರ್ಡದಾರರಿಗೆ ವಿತರಣೆ ಮಾಡಲು ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: Karnataka Male Mahiti-ರಾಜ್ಯದ ಮಳೆ ಮುನ್ಸೂಚನೆ!ಈ ದಿನದ ನಂತರ ಉತ್ತಮ ಮಳೆ ಸಾಧ್ಯತೆ!

ಇದರ ಜೊತೆಗೆ ಈ ಅಂಕಣದಲ್ಲಿ ರೇಷನ್ ಕಾರ್ಡ ಹೊಂದಿರುವ ಗ್ರಾಹಕರು ತಪ್ಪದೇ ಯಾವೆಲ್ಲ ಅಗತ್ಯ ಕ್ರಮಗಳನ್ನು ಅನುಸರಿಸಬೇಕು ಅಂದರೆ ರ‍ೇಷನ್ ಕಾರ್ಡ ಇ-ಕೆವೈಸಿ(Ration Card e-kyc) ಮತ್ತು ರೇಷನ್ ಕಾರ್ಡ ತಿದ್ದುಪಡಿ ಕುರಿತು ಅಗತ್ಯ ಮಾಹಿತಿಯನ್ನು ಸಹ ತಿಳಿಸಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ನಮ್ಮ ಪುಟವನ್ನು ಬೆಂಬಲಿಸಿ.

Ration Card Latest News-ಅಕ್ಕಿಯ ಜೊತೆಗೆ ರೇಷನ್ ಕಾರ್ಡದಾರರಿಗೆ ಜೋಳ ವಿತರಣೆಗೆ ಕ್ರಮ:

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಬಿಳಿ ಜೋಳವನ್ನು ಖರೀದಿ ಮಾಡಲು ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ರೈತರಿಂದ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿರುವ ಬಿಳಿ ಜೋಳವನ್ನು ಉತ್ತರ ಕರ್ನಾಟಕ ಭಾಗದ ಗ್ರಾಹಕರಿಗೆ ಪ್ರತಿ ತಿಂಗಳು ನೀಡುವ ಅಕ್ಕಿಯ ಜೊತೆಗೆ ಜೋಳವನ್ನು ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ಸಚಿವ ಕೆ ಹೆಚ್ ಮುನಿಯಪ್ಪ ಅವರು ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: Cyber Crime Portal-ಮೊಬೈಲ್ ಬಳಕೆದಾರರು ತಪ್ಪದೇ ಈ ಮಾಹಿತಿ ತಿಳಿಯಿರಿ!

Karnataka Food Department-ಪ್ರತಿ ತಿಂಗಳು 3 ಕೆಜಿ ಜೋಳ ವಿತರಣೆ:

ಪ್ರಸ್ತುತ ರೇಷನ್ ಕಾರ್ಡ ಅನ್ನು ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದ್ದು ಇದರೊಟ್ಟಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 3 ಕೆಜಿ ಜೋಳವನ್ನು ಉತ್ತರಕರ್ನಾಟಕ ಭಾಗದ ಗ್ರಾಹಕರಿಗೆ ವಿತರಣೆ ಮಾಡಲು ರಾಜ್ಯ ಸರ್ಕಾರದಿಂದ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.

Ration Card E-kyc Status-ರೇಷನ್ ಕಾರ್ಡ ಇ-ಕೆವೈಸಿ ಅಗಿಲ್ಲದ್ದಿದರೆ ಸದಸ್ಯತ್ವ ರದ್ದು:

ರೇಷನ್ ಕಾರ್ಡ ಅನ್ನು ಹೊಂದಿರುವ ಗ್ರಾಹಕರು ತಮ್ಮ ಪಡಿತರ ಚೀಟಿಯಲ್ಲಿನ ಎಲ್ಲ ಸದಸ್ಯರ ಇ-ಕೆವೈಸಿಯನ್ನು ಕಡ್ದಾಯವಾಗಿ ಮಾಡಿಕೊಳ್ಳಬೇಕು ಎಂದು ಆಹಾರ ಇಲಾಖೆಯಿಂದ ಅಂತಿಮ ಸೂಚನೆಯನ್ನು ನೀಡಲಾಗಿದ್ದು ಈ ನಿಯಮ ಪ್ರಕಾರ ಇಲ್ಲಿಯವರೆಗೆ ಇ-ಕೆವೈಸಿಯನ್ನು ಮಾಡಿಕೊಳ್ಳದರು ಕೂಡಲೇ ನಿಮ್ಮ ಹತ್ತಿರ ನ್ಯಾಯಬೆಲೆ ಅಂಗಡಿಯನ್ನು ಭೇಟಿ ಮಾಡಿ ಇ-ಕೆವೈಸಿಯನ್ನು ಮಾಡಿಕೊಳ್ಳಿ.

ಇ-ಕೆವೈಸಿ ಅಗಿರುವುದನ್ನು ಚೆಕ್ ಮಾಡಿಕೊಳ್ಳಲು ಅಧಿಕೃತ ವೆಬ್ಸೈಟ್ ಲಿಂಕ್- Ration Card E-kyc Status Check

ಇದನ್ನೂ ಓದಿ: Male Nakshatragalu-2025: ಈ ವರ್ಷದ ಮಳೆ ನಕ್ಷತ್ರಗಳು! ಇಲ್ಲಿದೆ ಸಂಪೂರ್ಣ ಮಾಹಿತಿ!

Ration Card

ಇದನ್ನೂ ಓದಿ: Anganavadi Recruitment-558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!

Ration Card Tiddupadi-ರೇಷನ್ ಕಾರ್ಡ ತಿದ್ದುಪಡಿ ಮತ್ತು ಸದಸ್ಯರ ಸೇರ್ಪಡೆಗೆ ಅವಕಾಶ:

ಆಹಾರ ಇಲಾಖೆಯಿಂದ ರೇಷನ್ ಕಾರ್ಡ ಹೊಂದಿರುವ ಗ್ರಾಹಕರು ತಮ್ಮ ಕಾರ್ಡನಲ್ಲಿರುವ ಅಗತ್ಯ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ಮತ್ತು ಹೊಸ ಸದಸ್ಯರನ್ನು ಕಾರ್ಡಗೆ ಸೇರ್ಪಡೆ ಮಾಡಿಕೊಳ್ಳಲ, ವಿಳಾಸ ತಿದ್ದುಪಡಿ ಮತ್ತು ನ್ಯಾಯಬೆಲೆ ಅಂಗಡಿ ಬದಲಾವಣೆ ಮಾಡಿಕೊಳ್ಳಲು ಗ್ರಾಮ ಒನ್ ಕೇಂದ್ರಗಳ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ರೇಷನ್ ಕಾರ್ಡ ತಿದ್ದುಪಡಿ ಅರ್ಜಿ ಸ್ಥಿತಿಯನ್ನು ಚೆಕ್ ಮಾಡಲು ವೆಬ್ಸೈಟ್ ಲಿಂಕ್- Ration Card Application Status

Bembala Bele Yojane-ರೈತರಿಂದ ಬೆಂಬಲ ಬೆಲೆಯಲ್ಲಿ ಜೋಳ ಖರೀದಿ:

ಬೆಂಬಲ ಬೆಲೆ ಯೋಜನೆಯಡಿ ಜೋಳವನ್ನು ಅತೀ ಹೆಚ್ಚು ಪ್ರದೇಶದಲ್ಲಿ ಬೆಳೆಯುವ ಜಿಲ್ಲೆಗಳಾದ ಬಳ್ಳಾರಿ, ರಾಯಚೂರು, ವಿಜಯನಗರ ಸೇರಿದಂತೆ ಇನ್ನಿತರೆ ಜಿಲ್ಲೆಗಳಿಂದ ರೈತರಿಂದ ನೇರವಾಗಿ ಬಿಳಿ ಜೋಳವನ್ನು ಖರೀದಿ ಮಾಡಲು ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು, ಈ ವರ್ಷ 1 ಲಕ್ಷ ಕ್ವಿಂಟಾಲ್ ಜೋಳವನ್ನು ರೈತರಿಂದ ನೇರವಾಗಿ ಖರೀದಿ ಮಾಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Diploma Agriculture-ಒಂದು ವರ್ಷದ ಕೃಷಿ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ!

Jola Kharidi-ಜೋಳ ಖರೀದಿಗೆ ಬೆಂಬಲ ಬೆಲೆ:

ರೈತರಿಂದ ನೇರವಾಗಿ ಖರೀದಿ ಮಾಡುವ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ ಈ ಕೆಳಗಿನ ರೀತಿಯಲ್ಲಿ ಬೆಂಬಲ ಬೆಲೆಯನ್ನು ನಿಗದಿ ಮಾಡಲಾಗಿದೆ.

1) ಹೈಬ್ರೀಡ್- ₹3,371 ರೂ
2) ಮಾಲ್ದಂಡಿ- ₹3,421 ರೂ

MSP Scheme-ರೈತರು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವುದು ಹೇಗೆ?

ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬಿಳಿ ಜೋಳವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಮೊದಲಿಗೆ ಖರೀದಿ ಕೇಂದ್ರವನ್ನು ಅಗತ್ಯ ದಾಖಲಾತಿಗಳ ಸಮೇತ ಭೇಟಿ ಮಾಡಿ ನೋಂದಣಿಯನ್ನು ಮಾಡಿಕೊಳ್ಳಬೇಕು ಇದಾದ ಬಳಿಕ ನಿಗದಿಪಡಿಸಿದ ದಿನಾಂಕದಂದು ಜೋಳವನ್ನು ತೆಗೆದುಕೊಂಡು ಹೋಗಿ ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬೇಕು.

WhatsApp Group Join Now
Telegram Group Join Now
Share Now: