Ration card list-2024: 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ! ಇಲ್ಲಿದೆ ರದ್ದಾದ ರೇಷನ್ ಕಾರ್ಡ ಪಟ್ಟಿ!

October 25, 2024 | Siddesh
Ration card list-2024: 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ! ಇಲ್ಲಿದೆ ರದ್ದಾದ ರೇಷನ್ ಕಾರ್ಡ ಪಟ್ಟಿ!
Share Now:

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅರ್ಥಿಕವಾಗಿ ಹಿಂದುಳಿದ ಜನರಿಗೆ ನೀಡುತ್ತಿರುವ ರೇಶನ್ ಕಾರ್ಡ ಅನ್ನು ನಕಲಿ ದಾಖಲೆಯಗಳನ್ನು(Ineligible ration card list) ಸಲ್ಲಿಸಿ ಅನೇಕ ಜನರು ರೇಷನ್ ಕಾರ್ಡ ಪಡೆದಿರುವುದನ್ನು ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಹಾರ ಇಲಾಖೆಯಿಂದ ಪತ್ತೆ ಮಾಡಲಾಗಿದೆ.

ಇಲಾಖೆಯ ಮೂಲಗಳ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ ಮಾಡಲಾಗಿದೆ ಎನ್ನುವ ಮಾಹಿತಿ ಇದ್ದು ಆಹಾರ ಇಲಾಖೆ ಅಧಿಕಾರಿಗಳು ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯವನ್ನು ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದ್ದು ಪ್ರತಿ ತಿಂಗಳು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ರದ್ದಾದ ಪಡಿತರ ಚೀಟಿದಾರರ ಪಟ್ಟಿಯನ್ನು ಹಾಕಲಾಗುತ್ತದೆ.

ಇದನ್ನೂ ಓದಿ: Google Pay, Phone pe ನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಕಳಿಸಿದರೆ! ವಾಪಸ್ ಪಡೆಯುವುದು ಹೇಗೆ!

ಅನರ್ಹರು ರೇಶನ್ ಕಾರ್ಡ ಪಡೆದಿರುವ ಕುರಿತು ಮಾಹಿತಿ ಹಂಚಿಕೊಂಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಎಚ್ ಮುನಿಯಪ್ಪ ಇಲಾಖೆ ಅಧಿಕಾರಿಗಳು ಮಾರ್ಗಸೂಚಿ ಪ್ರಕಾರ ರೇಶನ್ ಕಾರ್ಡ ಪಡೆಯಲು ಅರ್ಹರಿಲ್ಲದೇ ಇರುವ ದೊಡ್ಡ ಸಂಖ್ಯೆ ಫಲಾನುಭವಿಗಳನ್ನು ಗುರುತಿಸಿದ್ದಾರೆ ಎಂದು ಇದರ ಅಂಕಿ-ಅಂಶದ ವಿವರವನ್ನು ಹಂಚಿಕೊಂಡಿದ್ದಾರೆ.

Ineligible ration card- 14 ಲಕ್ಷಕ್ಕೂ ಅಧಿಕ ಅನರ್ಹ ರೇಷನ್ ಕಾರ್ಡ ಪತ್ತೆ:

ರಾಜ್ಯದಲ್ಲಿ 4.35 ಕೋಟಿ ಫಲಾನುಭವಿಗಳು 1.51 ಕೋಟಿ ರ‍ೇಶನ್ ಕಾರ್ಡ ಮೂಲಕ ಸವಲತ್ತುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದರಲ್ಲಿ ಪ್ರಸ್ತುತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳ ಮಾಹಿತಿಯನ್ನು ಗುರುತಿಸಿದ್ದು, ಇವುಗಳಲ್ಲಿ 3.64 ಲಕ್ಷ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಸಚಿವ ಕೆ ಎಚ್ ಮುನಿಯಪ್ಪ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Best life insurance plan- ವರ್ಷಕ್ಕೆ ಕೇವಲ ರೂ 20 ಪಾವತಿ ಮಾಡಿ 2 ಲಕ್ಷ ವಿಮೆ ಪಡೆಯಿರಿ!

Ineligible ration card list-ರದ್ದಾದ ರೇಶನ್ ಕಾರ್ಡ ಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನ:

ಗ್ರಾಹಕರು ತಮ್ಮ ಮೊಬೈಲ್ ನಲ್ಲೇ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ನಿಮ್ಮ ಮನೆಯಲ್ಲೇ ಕುಳಿತು ಕೆಲವೇ ನಿಮಿಷಗಳಲ್ಲಿ ನಿಮ್ಮ ಮೊಬೈಲ್ ನಲ್ಲೇ ರದ್ದುಪಡಿಸಲಾದ ಪಡಿತರ ಚೀಟಿಯನ್ನು ಚೆಕ್ ಮಾಡಿಕೊಳ್ಳಬಹುದು.

Step-1: ಪ್ರಥಮದಲ್ಲಿ ಈ Ration card list ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಆಹಾರ ಇಲಾಖೆ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿದ ಬಳಿಕ ಇಲ್ಲಿ ಮುಖಪುಟದಲ್ಲಿ ಕಾಣುವ "ಇ-ಸೇವೆಗಳು" ಬಟನ್ ಮೇಲೆ ಕ್ಲಿಕ್ ಮಾಡಿ ಬಳಿಕ ಈ ಪೇಜ್ ನಲ್ಲಿ "ಇ-ಪಡಿತರ ಚೀಟಿ" ಬಟನ್ ಮೇಲೆ ಕ್ಲಿಕ್ ಮಾಡಿ ಇದಾದ ನಂತರ ಇಲ್ಲಿ "ರದ್ದುಗೊಳಿಸಲಾದ/ತಡೆಹಿಡಿಯಲಾದ ಪಟ್ಟಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

Ration card list

ಇದನ್ನೂ ಓದಿ: Online RTC-ಉಚಿತವಾಗಿ ನಿಮ್ಮ ಮೊಬೈಲ್ ನಲ್ಲೇ ಪಹಣಿ ನೋಡಿ! ಇಲ್ಲಿದೆ ವೆಬ್ಸೈಟ್ ಲಿಂಕ್!

Step-3: "ರದ್ದುಗೊಳಿಸಲಾದ/ತಡೆಹಿಡಿಯಲಾದ ಪಟ್ಟಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಂಡು ಈ ಪೇಜ್ ನಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು, ತಿಂಗಳು, ವರ್ಷ ಆಯ್ಕೆಯ ಮೇಲೆ ಕ್ಲಿಕ್ ಮಾಡಿ "Go" ಬಟನ್ ಮೇಲೆ ಕ್ಲಿಕ್ ಮಾಡಿದರೆ ಪ್ರತಿ ತಿಂಗಳುವಾರು ನಿಮ್ಮ ತಾಲ್ಲೂಕಿನಲ್ಲಿ ರದ್ದುಪಡಿಸಲಾದ ರೇಶನ್ ಕಾರ್ಡ ಪಟ್ಟಿ ತೋರಿಸುತ್ತದೆ.

ಅರ್ಹರಿದ್ದರು ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಏನು ಮಾಡಬೇಕು?

ಒಂದೊಮ್ಮೆ ಮೇಲಿನ ವಿಧಾನವನ್ನು ಅನುಸರಿಸಿ ರದ್ದಾದ ರೇಶನ್ ಕಾರ್ಡ ಪಟ್ಟಿಯನ್ನು ಚೆಕ್ ಮಾಡಿದಾಗ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದು ನೀವು ಆಹಾರ ಇಲಾಖೆಯ ಮಾರ್ಗಸೂಚಿಯ ಪ್ರಕಾರ ರೇಶನ್ ಕಾರ್ಡ ಪಡೆಯಲು ಅರ್ಹರಿದ್ದರೆ ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ತಾಲ್ಲೂಕಿನ ಆಹಾರ ಇಲಾಖೆಯ ಕಛೇರಿಯನ್ನು ಭೇಟಿ ಮಾಡಿ ನಿಮ್ಮ ಅರ್ಜಿಯನ್ನು ಪುನರ್ ಪರಿಶೀಲನೆಗೆ ಅರ್ಜಿ ಸಲ್ಲಿಸಿ.

WhatsApp Group Join Now
Telegram Group Join Now
Share Now: