Reliance Scholarships-2025: ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಸಂಸ್ಥೆಯಿಂದ ₹ 2.0 ಲಕ್ಷ ಸ್ಕಾಲರ್‌ಶಿಪ್‌!

September 8, 2025 | Siddesh
Reliance Scholarships-2025: ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಸಂಸ್ಥೆಯಿಂದ ₹ 2.0 ಲಕ್ಷ ಸ್ಕಾಲರ್‌ಶಿಪ್‌!
Share Now:

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತೇಜನ ನೀಡಲು ರಿಲಯನ್ಸ್ ಫೌಂಡೇಶನ್ ವತಿಯಿಂದ(Reliance Foundation Scholarship) ಎರಡು ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಿಲಯನ್ಸ್ ಫೌಂಡೇಶನ್ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌(Scholarship) ಪಡೆಯಲು ಅವಕಾಶವಿರುತ್ತದೆ ಇಂದಿನ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು(Reliance Scholarship Application 2025) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎರಡು ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಎಷ್ಟು ವಿದ್ಯಾರ್ಥಿವೇತವನ್ನು ನೀಡಲಾಗುತ್ತದೆ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇತರೆ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

Scholarships Application Last Date-ಅರ್ಜಿ ಸಲ್ಲಿಸಲು ಮುಖ್ಯ ದಿನಾಂಕಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ- 01 ಸೆಪ್ಟೆಂಬರ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 04 ಅಕ್ಟೋಬರ್ 2025

Scholarships Programme-ಎರಡು ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಜಿ ಆಹ್ವಾನ:

1) ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ವಿದ್ಯಾರ್ಥಿವೇತನ/Undergraduate Scholarship.
2) ರಿಲಯನ್ಸ್ ಫೌಂಡೇಶನ್ ಸ್ನಾತಕೋತ್ತರ ವಿದ್ಯಾರ್ಥಿವೇತನ/Postgraduate Scholarship.

ಇದನ್ನೂ ಓದಿ: District Industries Centre-ಜಿಲ್ಲಾ ಕೈಗಾರಿಕಾ ಕೇಂದ್ರಗಳಿಂದ ಉಚಿತವಾಗಿ ಸಲಕರಣೆ ವಿತರಣೆ!

Reliance Scholarships Amount-ಎಷ್ಟು ವಿದ್ಯಾರ್ಥಿವೇತನ ಒದಗಿಸಲಾಗುತ್ತದೆ?

ರಿಲಯನ್ಸ್ ಫೌಂಡೇಶನ್ ಸಂಸ್ಥೆಯಿಂದ ಒಟ್ಟೂ ಎರಡು ಕಾರ್ಯಕ್ರಮದಡಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಎರಡು ಕಾರ್ಯಕ್ರಮದಡಿ ಎಷ್ಟು ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ ಎನ್ನುವ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.

1) ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ವಿದ್ಯಾರ್ಥಿವೇತನ:

ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಅರ್ಹ ವಿದ್ಯಾರ್ಥಿಗಳಿಗೆ ರೂ ₹2.0 ಲಕ್ಷದ ವರೆಗೆ ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ.

ಇದನ್ನೂ ಓದಿ: Swachh Bharat Mission-ಶೌಚಾಲಯ ನಿರ್ಮಾಣಕ್ಕೆ ₹12,000/- ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

2) ರಿಲಯನ್ಸ್ ಫೌಂಡೇಶನ್ ಸ್ನಾತಕೋತ್ತರ ವಿದ್ಯಾರ್ಥಿವೇತನ:

ರಿಲಯನ್ಸ್ ಫೌಂಡೇಶನ್ ಸ್ನಾತಕೋತ್ತರ ವಿದ್ಯಾರ್ಥಿವೇತನ ಯೋಜನೆಯಡಿ ಮೊದಲ ವರ್ಷದ ಪದವಿಗೆ ಪ್ರವೇಶವನ್ನು ಪಡೆದಿರುವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಅರ್ಹ ವಿದ್ಯಾರ್ಥಿಗಳಿಗೆ ರೂ ₹6.0 ಲಕ್ಷದ ವರೆಗೆ ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ.

Reliance Foundation Scholarship Eligibility Criteria-ಅರ್ಜಿ ಸಲ್ಲಿಸಲು ಅರ್ಹರು:

ರಿಲಯನ್ಸ್ ಫೌಂಡೇಶನ್ ವತಿಯಿಂದ ಈ ಎರಡು ವಿದ್ಯಾರ್ಥಿವೇತನ ಕಾರ್ಯಕ್ರಮ ಅಡಿಯಲ್ಲಿ ಸ್ಕಾಲರ್‌ಶಿಪ್‌ ಪಡೆಯಲು ಕೆಳಗಿನ ಪಟ್ಟಿಯಲ್ಲಿನ ಅರ್ಹತೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

  • ಅರ್ಜಿದಾರ ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು.
  • ವಿದ್ಯಾರ್ಥಿಯು 12ನೇ ತರಗತಿಯಲ್ಲಿ ಕನಿಷ್ಠ 60% ಅಂಕವನ್ನು ಪಡೆದು ತೇರ್ಗಡೆಯಾಗಿರಬೇಕು.
  • ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
  • ಪ್ರಸ್ತುತ ಪದವಿ ವ್ಯಾಸಂಗಕ್ಕೆ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಮೊದಲ ವರ್ಷದ ಕೋರ್ಸ್ ಗೆ ದಾಖಲಾತಿಯನ್ನು ಪಡೆದಿರಬೇಕು.
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ₹ 15 ಲಕ್ಷದ ಒಳಗಿರಬೇಕು.

ಇದನ್ನೂ ಓದಿ: Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

Reliance Foundation Scholarship Selecation Procces-ವಿದ್ಯಾರ್ಥಿವೇತನಕ್ಕೆ ಆಯ್ಕೆ ವಿಧಾನ ಹೇಗಿರುತ್ತದೆ?

ರಿಲಯನ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ ಒದಗಿಸಲು ಸೂಕ್ತ ಮತ್ತು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಒಮ್ಮೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ ಬಳಿಕ ವಿದ್ಯಾರ್ಥಿಗಳೀಗೆ ಸಾಮರ್ಥ್ಯ ಪರೀಕ್ಷೆಯನ್ನು ಆಯೋಜನೆ ಮಾಡಲಾಗುತ್ತದೆ ಇಲ್ಲಿ ಆಯ್ಕೆಯಾಗುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ.

Scholarship Application-ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಉಪಯುಕ್ತ ಮಾಹಿತಿ:

ಅಧಿಕೃತ ವೆಬ್ಸೈಟ್Click Here
ಅರ್ಜಿ ಸಲ್ಲಿಸಲು ಲಿಂಕ್Apply Online
ಮಾದರಿ ಪ್ರಶ್ನೆ ಪತ್ರಿಕೆಗಳುClick Here
ವಾಟ್ಸಾಪ್ ಸಹಾಯವಾಣಿ 7977100100

ಇದನ್ನೂ ಓದಿ: New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

Reliance Foundation Scholarship Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ರಿಲಯನ್ಸ್ ಫೌಂಡೇಶನ್ ವತಿಯಿಂದ ಎರಡು ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ ಹೀಗಿದೆ:

Step-1: ಅರ್ಜಿದಾರ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿ ಈ "Reliance Foundation Online Scholarship" ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ.

Reliance scholarship

ಇದನ್ನೂ ಓದಿ: Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

Step-2: ನಂತರ ಇಲ್ಲಿ ಎರಡು ಯೋಜನೆಗಳು ಕಾಣಿಸುತ್ತದೆ 1) ರಿಲಯನ್ಸ್ ಫೌಂಡೇಶನ್ ಸ್ನಾತಕೋತ್ತರ ವಿದ್ಯಾರ್ಥಿವೇತನ. 2) ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ವಿದ್ಯಾರ್ಥಿವೇತನ. ನಿಮಗೆ ಅನ್ವಯಿಸುವ ಯೋಜನೆಯ ಮುಂದೆ ಕಾಣಿಸುವ "Apply Now" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: "Apply Now" ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಮೊಬೈಲ್ ನಂಬರ್ ಮತ್ತು ಹೆಸರು ಹಾಗೂ ಅಗತ್ಯ ವಿವರವನ್ನು ನಮೂದಿಸಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ಲಾಗಿನ್ ಅಗಬೇಕು.

Step-4: ಲಾಗಿನ್ ಅದ ನಂತರ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ "Submit" ಆಯ್ಕಯ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Required Documents For Scholarship-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳು ಅವಶ್ಯಕವಾಗಿವೆ.

  • ವಿದ್ಯಾರ್ಥಿಯ ಆಧಾರ್ ಕಾರ್ಡ ವಿವರ/Aadhar Card
  • ಅಂಕಪಟ್ಟಿ/Marks Card
  • ಬ್ಯಾಂಕ್ ಪಾಸ್ ಬುಕ್/Bank Pass Book
  • ಮೊಬೈಲ್ ನಂಬರ್/Mobile Number
  • ಇ-ಮೇಲ್ ವಿಳಾಸ/Email

Tags:
WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: