Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 29, 2025 | Siddesh
Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
Share Now:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಅಭಿವೃದ್ದಿ ಯೋಜನೆ ಅಡಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ನಿಗಮದಿಂದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ರೈತರಿಗೆ ಆರ್ಥಿಕವಾಗಿ ನೆರವು ನೀಡಲು "ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ" ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಒದಗಿಸಲಾಗಿದೆ.

ಇದನ್ನೂ ಓದಿ: Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ ಅಡಿ(Shramashakti Sala Yojane Application) ಸೌಲಭ್ಯವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ ವಿವರ:

ರೇಷ್ಮೆನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳನ್ನು ಪ್ರೋತ್ಸಾಹಿಸಿ ಅವರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವಸಲುವಾಗಿ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಅಗತ್ಯವಿರುವ ದುಡಿಮೆ ಬಂಡವಾಳ (working capital) ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸಲು ನಿಗಮದಿಂದ ರೂ.2.00ಲಕ್ಷದವರೆಗೆ ಸಾಲ ಸಹಾಯಧನ ಒದಗಿಸಲಾಗುವುದು. ಇದರಲ್ಲಿ ಶೇ.50 ಸಹಾಯಧನವಾಗಿರುತ್ತದೆ.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಸೆಪ್ಟೆಂಬರ್ 2025

ಇದನ್ನೂ ಓದಿ: Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

How Can Apply For Reshme Krishi Subsidy Scheme--ಅರ್ಜಿ ಸಲ್ಲಿಸಲು ಅರ್ಹರು:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪಟ್ಟಿ ಈ ಕೆಳಗಿನಂತಿದೆ:

  • ಫಲಾನುಭವಿಗಳು ರಾಜ್ಯದ ಮತೀಯ ಅಲ್ಪಸಂಖ್ಯಾತರಾಗಿರತಕ್ಕದ್ದು.
  • ಫಲಾನುಭವಿಗಳು ರಾಜ್ಯದ ಖಾಯಂ ನಿವಾಸಿಯಾಗಿರತಕ್ಕದ್ದು.
  • ಫಲಾನುಭವಿಗಳ ವಯಸ್ಸು 18 ರಿಂದ 55 ವರ್ಷಗಳಾಗಿರತಕ್ಕದ್ದು.
  • ಅರ್ಜಿದಾರರ ವಾರ್ಷಿಕ ಆದಾಯವು ರೂ. 6.00 ಲಕ್ಷ ಮೀರಿರಬಾರದು.
  • ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರು ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರಿಯಲ್ಲರಬಾರದು
  • ಅರ್ಜಿದಾರರ ಅಥವಾ ಅವರ ಕುಟುಂಬದ ಸದಸ್ಯರು (ಅರಿವು ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ) ಕಳೆದ 5 ವರ್ಷಗಳಲ್ಲಿ ನಿಗಮದಿಂದ ಯಾವುದೇ ಸಾಲ /ಸಹಾಯಧನ ಸೌಲಭ್ಯ ಪಡೆದಿರಬಾರದು.
  • ಅರ್ಜಿದಾರರು ನಿಗಮದ ಸುಸ್ಥಿದಾರರಾಗಿರಬಾರದು.

ಇದನ್ನೂ ಓದಿ: Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

Required Documents For Application-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ ಅಡಿಯಲ್ಲಿ ಪ್ರಯೋಜನವನ್ನು ಪಡೆಯಲು ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳ ಪಟ್ಟಿ:

  • ಫಲಾನುಭವಿಗಳ ಇತ್ತೀಚಿ ಪಾಸ್‌ ಪೋರ್ಟ್‌ ಭಾವ ಚಿತ್ರ.
  • ಚಾಲ್ತಿಯಲ್ಲಿರುವ ಅಲ್ಪಸಂಖ್ಯಾತ ಪ್ರಮಾಣ ಪತ್ರ.
  • ಆದಾಯ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ ಪ್ರತಿ.
  • ಫಲಾನುಭವಿಯ ಬ್ಯಾಂಕ್‌ ಪಾಸ್ ಬುಕ್‌ ಪ್ರತಿ.
  • ಯೋಜನಾ ವರದಿ.
  • ರೀಲರ್ ಪರವಾನಗಿ.
  • ಸ್ವಯಂ ಘೋಷಣೆ ಪತ್ರ.

Online Apply Method-ಅರ್ಜಿ ಸಲ್ಲಿಸುವುದು ಹೇಗೆ?

Step-1: ಮೊದಲಿಗೆ ಇಲ್ಲಿ ಕ್ಲಿಕ್ "Apply Now" ಮಾಡಿ ನಿಗಮದ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Caste Survey-ಮೊಬೈಲ್ ನಲ್ಲೇ ಜಾತಿಗಣತಿ ಸಮೀಕ್ಷೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Reshme Krishi Subsidy

Step-2: ನಂತರ ಇಲ್ಲಿ ಗೋಚರಿಸುವ "ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ" ಆಯ್ಕೆಯ ಮೇಲೆ ಕ್ಲಿಕ್ ಮಾಡಿಬೇಕು.

Step-3: ನಂತರ ಈ ಪುಟದಲ್ಲಿ ಕಾಣುವ "ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: