ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಕಂದಾಯ ಇಲಾಖೆಯ ಅಧಿಕಾರಿಗಳ(Karnataka Revenue Department) ಒಳಗೊಂಡಂತೆ ನಿನ್ನೆ ಬೆಂಗಳೂರಿನಲ್ಲಿ ನಡೆದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.
ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಥಾನ ಕುರಿತಂತೆ ಮತ್ತು ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತವನ್ನು ನೀಡುವ ದೇಸೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ(Revenue Department Meeting)ಪ್ರಗತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ.
ಅನಧಿಕೃತ ಬಡಾವಣೆಗಳಿಗೆ ಖಾತಾ(Khata) ನೀಡುವುದು, ಜಮೀನುಗ ಖಾತಾ(RTC) ಸಂಬಂಧಪಟ್ಟಂತೆ ಪ್ರಕರಣಗಳ ಅರ್ಜಿ ವಿಲೇವಾರಿ, ಸರಕಾರಿ ಜಮೀನಿನ ರಕ್ಷಣೆ, ಕಂದಾಯ ನ್ಯಾಯಲಯಗಳಲ್ಲಿನ ಪ್ರಕರಣಗಳ ವಿಲೇವಾರಿ ಕುರಿತು ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.
ಇದನ್ನೂ ಓದಿ: Education Assistance-ವಿದ್ಯಾರ್ಥಿಗಳಿಗೆ ₹20 ಸಾವಿರದ ವರೆಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ!
Karnataka Revenue Department-ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ನೀಡಿದ ಸೂಚನೆಗಳು:
ಅನಧಿಕೃತ ಬಡಾವಣೆಗಳಿಗೆ(NA Land) ಖಾತಾ ನೀಡುವುದನ್ನು ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಿದ್ದೇವೆ. ಒ೦ದು ಅವಧಿಗೆ ಬಿ ಖಾತಾ ನೀಡುವ ಪ್ರಕ್ರಿಯೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಇನ್ನು ಮುಂದೆ ಅನಧಿಕೃತ ಬಡಾವಣೆಗಳು ತಲೆ ಎತ್ತದಂತೆ ನೋಡಿಕೊಳ್ಳಬೇಕು.
ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಜಮೀನುಗಳ ಖಾತೆ ಇನ್ನೂ ನಿಧನ ಹೊಂದಿದವರ ಹೆಸರಿನಲ್ಲಿಯೇ ಇದೆ. ಪೌತಿ ಖಾತೆ ಅಭಿಯಾನದ ಮೂಲಕ ಮಾಲೀಕರ ಹೆಸರಿಗೆ ಜಮೀನು ನೋಂದಣಿ ಮಾಡುವ ಕಾರ್ಯವನ್ನು ತ್ವರಿತಗೊಳಿಸಬೇಕು.
ಭೂ ದಾಖಲೆಗಳ(Land Records) ರಕ್ಷಣೆಗೆ, ವಂಚಕರಿಂದ ದುರುಪಯೋಗ ಆಗದಂತೆ, ದಾಖಲೆ ತಿದ್ದಲು ಅವಕಾಶ ಆಗದಂತೆ “ಭೂ ಸುರಕ್ಷಾ” ಪರಿಣಾಮಕಾರಿಯಾಗಿ ಜಾರಿಯಾಗಲಿ.
ಇದನ್ನೂ ಓದಿ: Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

ಕ೦ದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳ೦ಬಕ್ಕೆ ಅವಕಾಶ ಇರಬಾರದು. ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 3 ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು.
ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು.
ಜಿಲ್ಲಾಧಿಕಾರಿಗಳ(DC) ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಲ್ಲಿ ಕೇವಲ ಒಂದೇ ವರ್ಷದಲ್ಲಿ ಶೇ.36 ರಷ್ಟು ಪ್ರಕರಣಗಳ ವಿಲೇವಾರಿ ಆಗಿದೆ. ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ 9,947 ಒಂದು ವರ್ಷಕ್ಕೂ ಅಧಿಕ ಅವಧಿಯಿಂದ ಬಾಕಿಯಿತ್ತು. ಈಗ ಇದರ ಪ್ರಮಾಣ ಕೇವಲ 6 ಸಾವಿರಕ್ಕೆ ಇಳಿದಿದೆ.
10 ವರ್ಷ, 5 ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ. ನಮ್ಮ ಸರ್ಕಾರ ಬ೦ದಾಗ 10 ಸಾವಿರಕ್ಕೂ ಹೆಚ್ಚು ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ.
ಇದನ್ನೂ ಓದಿ: VA Selection List- 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ!
ಖಾತೆ(pahani) ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ, ಅಟೋ ಮ್ಯುಟೇಶನ್ ಮೂಲಕ ಇದು ಸಾಧ್ಯವಾಗಿದೆ.
ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒ೦ದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್ ಪ್ಲಾನ್ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಅದಷ್ಟು ಬೇಗನೆ ಹೊರಡಿಸಬೇಕು.
ನಗರ ಪ್ರದೇಶಗಳಲ್ಲಿ ಮಾಸ್ಟರ್ ಪ್ಲಾನ್(Master Plan) ಅನ್ನು ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕು.
ಇದನ್ನೂ ಓದಿ: e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!
ತಂತ್ರಾಂಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣಾ ಕಾರ್ಯ ಕೈಗೊಳ್ಳಲಾಗಿದೆ. ನಕ್ಷಾ ಯೋಜನೆ ಮೂಲಕ ನಗರ ಪ್ರದೇಶದಲ್ಲಿ ಡೋನ್ ಸರ್ವೆ ಮೂಲಕ ಪ್ರಾಪರ್ಟಿ ಕಾರ್ಡು ನೀಡಲಾಗುತ್ತಿದೆ. 21 ಜಿಲ್ಲೆಗಳಲ್ಲಿ ಡೋನ್ ಮೂಲಕ ಸರ್ವೇ ಕಾರ್ಯವನ್ನು ಕೈಗೊಳ್ಳಲಾಗಿದೆ. ಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಡೋನ್ ಸರ್ವೆ ಆರಂಭಿಸಬೇಕು.
ಭೂ ಸುರಕ್ಷಾ ಯೋಜನೆ ಮೂಲಕ ಭೂ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದುವರೆಗೆ ಸುಮಾರು 8 ಕೋಟಿ ಮೂಲ ದಾಖಲೆಗಳ ಕ೦ಪ್ಯೂಟರೀಕರಣ ಪೂರ್ಣಗೊಳಿಸಲಾಗಿದೆ. ಖದೀಮರು ತಿದ್ದಲು ಅವಕಾಶ ಆಗದಂತೆ ದಾಖಲೆಗಳಿಗೆ ಡಿಜಿಟಲ್ ಭದ್ರತೆ ಒದಗಿಸಲಾಗಿದೆ. ಎಲ್ಲಾ 31 ಜಿಲ್ಲೆಗಳಲ್ಲಿ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ: Ration-ಇಲಾಖೆಯ ನಿಯಮದನ್ವಯ ಈ ಕೆಲಸ ಮಾಡದಿದ್ದಲ್ಲಿ ಫೆಬ್ರವರಿ 15ರಿಂದ ಪಡಿತರ ವಿತರಣೆ ರದ್ದು!
ಹಲವು ವರ್ಷಗಳಿಂದ ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಂದ ಸದರಿ ಜಮೀನು ಸ್ವಾಧೀನಪಡಿಸುವ ಸಂದರ್ಭದಲ್ಲಿ ಎಕ್ಸ್ ಗ್ರೇಷಿಯಾ ನೀಡುವ ಬಗ್ಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಬೇಕು.
ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆ ಅಧಿಕಾರಿಗಳಿಗೆ ಈ ಮೇಲೆ ಹಂಚಿಕೊಂಡಿರುವ ಸೂಚನೆಗಳನ್ನು ನೀಡಿದ್ದಾರೆ.