Salon Subsidy Scheme: ಸವಿತಾ ಸಮಾಜ ನಿಗಮದಿಂದ ಸಲೂನ್ ಆರಂಭಿಲು ₹10 ಲಕ್ಷ ಆರ್ಥಿಕ ನೆರವು!

November 27, 2026 | Siddesh
Salon Subsidy Scheme: ಸವಿತಾ ಸಮಾಜ ನಿಗಮದಿಂದ ಸಲೂನ್ ಆರಂಭಿಲು ₹10 ಲಕ್ಷ ಆರ್ಥಿಕ ನೆರವು!
Share Now:

2026-2027 ನೇ ಸಾಲಿನ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಸವಿತಾ ಸಮಾಜದ ಕುಟುಂಬಗಳಿಗೆ ₹10 ಲಕ್ಷದವರೆಗೆ ಸಾಲ ಸೌಲಭ್ಯ ಹಾಗೂ ಶೇ.20ರಷ್ಟು ಸಹಾಯಧನದೊಂದಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ದಿನಗಳಲ್ಲಿ ಸ್ವಂತ ಉದ್ದಿಮೆಯನ್ನು ಪ್ರಾರಂಭಿಸುವ ಕನಸನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹಣದ ಕೊರತೆಯಿಂದಾಗಿ ತಮ್ಮ ಕನಸಿನ ಉದ್ಯಮವನ್ನು ಪ್ರಾರಂಭಿಸಲು ಸಾಧ್ಯವಾಗದೇ ಇರದೇ ಹಾಗೇ ಆರ್ಥಿಕ ನೆರವನ್ನು ಒದಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳು ಜಾರಿಯಲ್ಲಿದ್ದು ಈ ನಿಟ್ಟಿನಲ್ಲಿ ಸವಿತಾ ಸಮಾಜದ ಅರ್ಹ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರವು ನಿಗಮದಿಂದ ಸಲೂನ್ ಆರಂಭಿಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಲು ಅವಕಾಶ ನೀಡಿದೆ.

ಇದನ್ನೂ ಓದಿ: Free Sewing Machine-ವಿಶ್ವಕರ್ಮ ನಿಗಮದಿಂದ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಮಹಿಳೆಯರಿಗೆ ಸುವರ್ಣಾವಕಾಶ!

ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ? ಈ ಯೋಜನೆಯಡಿಯಲ್ಲಿ ಯಾವೆಲ್ಲಾ ಉದ್ಯಮಗಳಿಗೆ ಸಹಾಯಧನ ಪಡೆಯಬಹುದು? ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲಾತಿಗಳನ್ನು ನೀಡಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಯಾವೆಲ್ಲಾ ಹಂತಗಳನ್ನು ಅನುಸರಿಸಬೇಕು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ?

Application Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಡಿಸೆಂಬರ್ 2026

Savita Samaja Salon Subsidy Amount-ಈ ಯೋಜನೆಯಡಿ ಒದಗುವ ಸಾಲ ಹಾಗೂ ಸಹಾಯಧನದ ವಿವರ?

ಈ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಗರಿಷ್ಠ ₹10,00,000. ದವರೆಗೆ ಸಾಲವನ್ನು ನೀಡಲಾಗುತ್ತದೆ. ಈ ಸಾಲದ ಮೇಲೆ ಶೇ.4 ಬಡ್ಡಿದರ ಹಾಗೂ ಗರಿಷ್ಠ ಸಹಾಯಧನ ₹2,00,000 ಇದರ ಮೇಲೆ ಶೇ.20 ಸಾಲದ ಮೊತ್ತವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Scholarship Scheme-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Savitha Samaja Salon Subsidy Eligibility Criteria-ಈ ಯೋಜನೆಯಡಿಯಲ್ಲಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಅರ್ಜಿದಾರರು ಸವಿತಾ ಸಮಾಜಕ್ಕೆ ಸೇರಿದವರಾಗಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ₹3,50,000 ಮೀರಿರಬಾರದು.
  • ಅರ್ಜಿದಾರರ ವಯಸ್ಸು 55 ವರ್ಷ ಒಳಗಿರಬೇಕು.
  • ಸ್ವಯಂ ಉದ್ಯೋಗ ಅಥವಾ ಸ್ವಂತ ಉದ್ಯಮ ಆರಂಭಿಸುವ ಉದ್ದೇಶ ಹೊಂದಿರಬೇಕು.

Required Documents-ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲಾತಿಗಳನ್ನು ಲಗತ್ತಿಸಬೇಕು?

  • ಆಧಾರ್ ಕಾರ್ಡ್/Aadhar
  • ಪಡಿತರ ಚೀಟಿ/Ration Card
  • ಜಾತಿ ಮತ್ತು ಆದಾಯ ಪ್ರಮಾಣಪತ್ರ/Caste And Income
  • ನಿವಾಸದ ದೃಢೀಕರಣ ದಾಖಲೆ/
  • ಬ್ಯಾಂಕ್ ಪಾಸ್‌ಬುಕ್/Bank Pass Book
  • ಉದ್ಯಮಕ್ಕೆ ಸಂಬಂಧಿಸಿದ ವಿವರಗಳು.

ಇದನ್ನೂ ಓದಿ: Agriculture Machinery Subsidy-ಪವರ್ ಸ್ಪ್ರ‍ೇಯರ್, ಪಂಪ್ ಸೆಟ್ ಸೇರಿದಂತೆ ವಿವಿಧ ಉಪಕರಣಗಳನ್ನು ಸಬ್ಸಿಡಿಯಲ್ಲಿ ಪಡೆಯಲು ಅರ್ಜಿ ಆಹ್ವಾನ!

Salon Subsidy Scheme

ಇದನ್ನೂ ಓದಿ: Namma Mane Yojane-ಮುಖ್ಯಮಂತ್ರಿ ನಮ್ಮ ಮನೆ ಯೋಜನೆ: ಅರ್ಹ ಕುಟುಂಬಗಳಿಗೆ ಉಚಿತ ನಿವೇಶನ!

Salon Subsidy Application-ಅರ್ಜಿ ಸಲ್ಲಿಸುವ ವಿಧಾನಗಳಾವುವು?

ಹಂತ-1: ಅರ್ಜಿದಾರರು ಮೊದಲ ಹಂತದಲ್ಲಿ ಈ ವೆಬ್ ಲಿಂಕ್ "Salon Subsidy Application Link" ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಪೋರ್ಟಲ್‌ಗೆ ಭೇಟಿ ನೀಡಿ.

ಹಂತ-2: ನಂತರ ಇಲ್ಲಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಹಾಕಿ ಬಳಕೆದಾರ ಐಡಿಯನ್ನು ರಚನೆ ಮಾಡಿಕೊಂಡು ಲಾಗಿನ್ ಅಗಿ.

ಹಂತ-3: ಲಾಗಿನ್ ಅಗಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಯೋಜನೆಯನ್ನು ಹುಡುಕಿ Apply Now ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

ಹಂತ-4: ಇದಾದ ನಂತರ ಇಲ್ಲಿ ಅರ್ಜಿಯಲ್ಲಿ ಕೇಳಿರುವ ವೈಯಕ್ತಿಕ ಮಾಹಿತಿ, ವಿಳಾಸ, ಜಾತಿ, ಆದಾಯ ಮತ್ತು ಬ್ಯಾಂಕ್ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ ಸ್ವೀಕೃತಿಯನ್ನು ಪಡೆದುಕೊಳ್ಳಿ.

ಅರ್ಜಿಯನ್ನು ಸ್ವತಃ ಸಲ್ಲಿಸಲು ಸಾಧ್ಯವಾಗದವರು ತಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಸೇವಾ ಕೇಂದ್ರಗಳ ಮೂಲಕವೂ ಸಹ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Gold Loan-ಬ್ಯಾಂಕ್ ನಲ್ಲಿ ಗೋಲ್ಡ್ ಲೋನ್ ತೆಗೆದುಕೊಂಡವರು ತಪ್ಪದೇ ಈ ಮಾಹಿತಿ ನೋಡಿ!

Website-ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಅಧಿಕೃತ ವೆಬ್‌ಸೈಟ್ ಲಿಂಕ್ : Click Here
Helpline Number-ಸಹಾಯವಾಣಿ ಸಂಖ್ಯೆ: 080-22374832, 8050770004, 8050770005

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: