Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 10, 2025 | Siddesh
Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Share Now:

2026-2026 ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (SDF) ನ ವತಿಯಿಂದ ವಿದ್ಯಾಧನ್-ಗೋಮಾಬಾಯಿ(Sarojini Damodaran Foundation Scholarship) ಕಾರ್ಯಕ್ರಮದ ಅಡಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ(Vidyadhan Gomabai Scholarship) ಸಹಾಯ ಮಾಡಲು ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಕೋರ್ಸ್‌ಗಳ ಸಂಪೂರ್ಣ ಅವಧಿಗೆ ವರ್ಷಕ್ಕೆ INR 75,000 ವರೆಗೆ ಆರ್ಥಿಕ ಸಹಾಯವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

ಹಣಕಾಸಿನ ನೆರವಿನ ಜೊತೆಗೆ, ವಿದ್ವಾಂಸರು ತಮ್ಮ ಶೈಕ್ಷಣಿಕ ಮತ್ತು ವೈಯಕ್ತಿಕ ಬೆಳವಣಿಗೆಯ(Vidyadhan Scholarship Apply Online) ಪ್ರಯಾಣದ ಮೂಲಕ ಮಾರ್ಗದರ್ಶನ ನೀಡಲು ವಿನ್ಯಾಸಗೊಳಿಸಲಾದ ರಚನಾತ್ಮಕ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮಗಳಿಂದ ಪ್ರಯೋಜನ ಪಡೆಯುತ್ತಾರೆ .

ಪ್ರಸ್ತುತ ಈ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರ‍ೆಲ್ಲ ವಿದ್ಯಾರ್ಥಿಗಳು ಅರ್ಹರಿರುತ್ತಾರ‍ೆ? ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Last Date For Apply-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 15 ನವೆಂಬರ್ 2025

ಇದನ್ನೂ ಓದಿ: Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

Who Can Apply this SCholorship-ಅರ್ಜಿಯನ್ನು ಸಲ್ಲಿಸಲು ಯಾರ‍ೆಲ್ಲ ಅರ್ಹರು?

ಅರ್ಜಿದಾರ‍ ಅಭ್ಯರ್ಥಿಯು ಭಾರತರ ಖಾಯಂ ಪ್ರಜೆಯಾಗಿರಬೇಕು.

ವಿದ್ಯಾರ್ಥಿಗಳು 2025-26 ನೇ ಸಾಲಿನಲ್ಲಿ ಪದವಿ ಕೋರ್ಸ್‌ಗೆ ಪ್ರವೇಶ ಪಡೆದಿರಬೇಕು.

ಅಭ್ಯರ್ಥಿಗಳು 12 ನೇ ತರಗತಿಯಲ್ಲಿ ಕನಿಷ್ಠ 75 % ಅಂಕಗಳು ಪಡೆದಿರಬೇಕು.

ಅಂಗವಿಕಲ ವಿದ್ಯಾರ್ಥಿಗಳಿಗೆ ಕನಿಷ್ಠ 65% ಅಂಕಗಳು ಪಡೆದಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ₹3,00,000 ಮೀರಿರಬಾರದು.

Sholorship Amount-ಈ ಯೋಜನೆಯ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು?

ಸರೋಜಿನಿ ದಾಮೋದರನ್ ಫೌಂಡೇಶನ್ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೋರ್ಸ್ ಶುಲ್ಕದ ಆಧಾರದ ಮೇಲೆ ವಾರ್ಷಿಕ ವಿದ್ಯಾರ್ಥಿವೇತನವು ವರ್ಷಕ್ಕೆ ₹15,000 ರಿಂದ ₹75,000 ಪಡೆದುಕೊಳ್ಳಬಹುದು.

ಇದನ್ನೂ ಓದಿ: Mobile Phone Trace-ನಿಮ್ಮ ಮೊಬೈಲ್ ಕಳುವಾದರೆ ಟ್ರೇಸ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

ಈ ವಿದ್ಯಾರ್ಥಿವೇತನವು ಪದವಿ ಕಾರ್ಯಕ್ರಮದ ಸಂಪೂರ್ಣ ಅವಧಿಗೆ ಅಂದರೆ 3–5 ವರ್ಷಗಳು ಮುಂದುವರಿಯುತ್ತದೆ, ಆದರೆ ವಾರ್ಷಿಕ ನವೀಕರಣಕ್ಕೆ ಒಳಪಟ್ಟಿರುತ್ತದೆ.

Documents required-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

  • ಅಭ್ಯರ್ಥಿಯ ಆಧಾರ್ ಕಾರ್ಡ/Aadhar Card
  • 10 ನೇ ತರಗತಿಯ ಅಂಕಪಟ್ಟಿ/10 MarksCard
  • 12ನೇ ತರಗತಿಯ ಅಂಕಪಟ್ಟಿ/12 MarksCard
  • ಆದಾಯ ಪ್ರಮಾಣಪತ್ರ/Income Certificate
  • ಪ್ರವೇಶ ಪರೀಕ್ಷಾ ಅಂಕಪಟ್ಟಿ/Entrance Test Marks List
  • ಫೋಟೋ/PhotoCopy
  • ಮೊಬೈಲ್ ನಂಬರ್/Mobile number
  • ಇಮೇಲ್ ಐಡಿ/E mail ID

ಇದನ್ನೂ ಓದಿ: Bima Sakhi-ಬಿಮಾ ಸಖಿ ಯೋಜನೆ: ಎಲ್ಐಸಿ ಯಿಂದ ಮಹಿಳಾ ಏಜೆಂಟರಿಗೆ ತಿಂಗಳಿಗೆ ರೂ 7,000/- ಸ್ಟೈಪೆಂಡ್!

degree scholorship

ಇದನ್ನೂ ಓದಿ: Crop Details-2025 ನೇ ಸಾಲಿನ ರೈತರ ಜಮೀನ ಬೆಳೆ ಸಮೀಕ್ಷೆ ವರದಿ ಬಿಡುಗಡೆ! ಇಲ್ಲಿದೆ ಪಹಣಿಯ ಬೆಳೆ ಮಾಹಿತಿ!

Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಸರೋಜಿನಿ ದಾಮೋದರನ್ ಫೌಂಡೇಶನ್ ಅಡಿಯಲ್ಲಿ ವಿದ್ಯಾಧನ್-ಗೋಮಾಬಾಯಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಅರ್ಹ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "Online Application Link" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ ಅದೇ ಪೇಜ್ ನಲ್ಲಿ ಕಾಣಿಸುವ "Apply Now" ಬಟನ್ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿಯು User ID ಮತ್ತು Password ಅನ್ನು ಸಿದ್ದ ಮಾಡಿಕೊಂಡು ಲಾಗಿನ್ ಆಗಬೇಕು.

Step-3: ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ. ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: PUC ಮತ್ತು SSLC ಅಂತಿಮ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ!

ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ:

+91 8068333500 / +919663517131 (ಸೋಮವಾರದಿಂದ ಶುಕ್ರವಾರದವರೆಗೆ - ಬೆಳಿಗ್ಗೆ 10:00 ರಿಂದ ಸಂಜೆ 06:00 (IST))

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: