- Advertisment -
HomeGovt SchemesScholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹವನ್ನು ನೀಡಲು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಉತ್ತಮ ಅಂಕಗಳಿಂದ ಪಾಸಾದ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಧನವನ್ನು(SSLC Scholarship)ನೀಡಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರು ಮಹಾನಗರ ಪಾಲಿಕೆಯಿಂದ(BBMP Subsidy Yojana)ಕಲ್ಯಾಣ ಕಾರ್ಯಕ್ರಮದಡಿ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು ನೀಡಲು ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ರೂ 15,000/- ಪ್ರೋತ್ಸಾಹ ಧನ(SSLC Scholarship Amount) ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬಿಬಿಎಂಪಿ ಯಿಂದ ನಿಗದಿಪಡಿಸಿರುವ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಅಗತ್ಯವಾಗಿ ಸಲ್ಲಿಸಬೇಕಾದ ದಾಖಲಾತಿಗಳೇನು? ಇತ್ಯಾದಿ ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

SSLC Scholarship Eligibility Criteria-ಅರ್ಜಿ ಸಲ್ಲಿಸಲು ಬಿಬಿಎಂಪಿಯಿಂದ ನಿಗದಿಪಡಿಸಿರುವ ಮಾನದಂಡಗಳೇನು?

ಅರ್ಜಿದಾರ ವಿದ್ಯಾರ್ಥಿಯು ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಧಾರ ಗುರುತಿನ ಚೀಟಿಯನ್ನು ಹೊಂದಿರಬೇಕು.

ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ/ಸಿಬಿಎಸ್ಇ/ಐಸಿಎಸ್ಇ ನಡೆಸುವ 10ನೇ ತರಗತಿಯಲ್ಲಿ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪ.ಜಾ/ಪ.ಪಂ ವರ್ಗದ ಪೌರಕಾರ್ಮಿಕರ ಅವಲಂಬಿತ ವಿದ್ಯಾರ್ಥಿಯು ಅರ್ಜಿ ಸಲ್ಲಿಸಬಹುದು.

ಅರ್ಜಿದಾರರ ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು.

ಇದನ್ನೂ ಓದಿ: Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

SSLC Scholarship

ಇದನ್ನೂ ಓದಿ: Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Last Date For SSLC Scholarship-ಅರ್ಜಿಯನ್ನು ಸಲ್ಲಿಸಲು ಮುಕ್ತಾಯ ದಿನಾಂಕ: 02 ಮೇ 2025

How To Apply For SSLC Scholarship-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(BBMP)ಸಹಾಯಕ ಕಂದಾಯ ಅಧಿಕಾರಿ(ಕಲ್ಯಾಣ) ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಸ್ವಯಂ ದೃಡೀಕರಿಸಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!

SSLC Scholarship

Required Documents For SSLC Scholarship-ಅರ್ಜಿ ಸಲ್ಲಿಸಲು ದಾಖಲೆಗಳು:

ವಿದ್ಯಾರ್ಥಿಯು ಪ್ರೋತ್ಸಾಹ ಧನವನ್ನು ಪಡೆಯಲು ಅರ್ಜಿ ಸಲ್ಲಿಸಲು ಈ ದಾಖಲಾತಿಗಳನ್ನು ಸಲ್ಲಿಸಬೇಕು.

1) ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card
2) ಪೋಟೋ/Photo
3) ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass Book
4) ನಿವಾಸ ದೃಡೀಕರಣ ಪತ್ರ/Address proof
5) ವಯಸ್ಸು ದೃಡೀಕರಣ ಪ್ರಮಾಣ ಪತ್ರ/Age Proof Documents
6) ರೇಶನ್ ಕಾರ್ಡ ಪ್ರತಿ/Ration Card
7) ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ/Income Certificate

- Advertisment -
LATEST ARTICLES

Related Articles

- Advertisment -

Most Popular

- Advertisment -