Scholarship Amount-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇನ್ಫೋಸೆಪ್ಟ್ಸ್ ಇನ್ನೋವೇಟ್ ವತಿಯಿಂದ 50,000 ವಿದ್ಯಾರ್ಥಿವೇತನ!

September 24, 2026 | Siddesh
Scholarship Amount-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇನ್ಫೋಸೆಪ್ಟ್ಸ್ ಇನ್ನೋವೇಟ್ ವತಿಯಿಂದ 50,000 ವಿದ್ಯಾರ್ಥಿವೇತನ!
Share Now:

2026-2027 ನೇ ಸಾಲಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇನ್ಫೋಸೆಪ್ಟ್ಸ್ ಇನ್ನೋವೇಟ್ ವತಿಯಿಂದ ಇಂಪ್ಯಾಕ್ಟ್ ಸ್ಕಾಲರ್‌ಶಿಪ್ ವಿದ್ಯಾರ್ಥಿವೇತನದ ಅಡಿಯಲ್ಲಿ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿಸ್ತಾರ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2026

ಇದನ್ನೂ ಓದಿ: Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ?

ಇಂಪ್ಯಾಕ್ಟ್ ಸ್ಕಾಲರ್‌ಶಿಪ್ ಅಡಿಯಲ್ಲಿ ಆಯ್ಕೆಯಾದ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಇನ್ಫೋಸೆಪ್ಟ್ಸ್ ಇನ್ನೋವೇಟ್ ವತಿಯಿಂದ ಪ್ರತಿ ಶೈಕ್ಷಣಿಕ ವರ್ಷಕ್ಕೆ ಗರಿಷ್ಠ ನಾಲ್ಕು ವರ್ಷಗಳವರೆಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • 10 ಹಾಗೂ 12 ತರಗತಿ ಅಂಕಪಟ್ಟಿ
  • ಕಾಲೇಜು ಪ್ರವೇಶಾತಿ ಪತ್ರ
  • ವಿಳಾಸ ಪ್ರಮಾಣ ಪತ್ರ
  • ಶಿಕ್ಷಣಕ್ಕೆ ಸಂಬಂಧಿಸಿದ ವೆಚ್ಚಗಳ ರಶೀದಿಗಳು
  • ಪ್ಯಾನ್ ಕಾರ್ಡ
  • ಮೊಬೈಲ್ ನಂಬರ್

ಇದನ್ನೂ ಓದಿ: Raman Kant Munjal Scholarship-BBA, BFIA, B.Com,B.A. ವಿದ್ಯಾರ್ಥಿಗಳಿಗೆ 40,000 ವಿದ್ಯಾರ್ಥಿವೇತನ!

ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಕಂಪ್ಯೂಟರ್ ಎಂಜಿನಿಯರಿಂಗ್, ಮಾಹಿತಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ, ಮತ್ತು ಡೇಟಾ ಸೈನ್ಸ್ & ಅನಾಲಿಟಿಕ್ಸ್‌ನಂತಹ ಕ್ಷೇತ್ರಗಳಲ್ಲಿ ನಾಲ್ಕು ವರ್ಷಗಳ ಅಧ್ಯಯನದಲ್ಲಿ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.

ವಿದ್ಯಾರ್ಥಿಯು 10 ಹಾಗೂ 12 ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯದ ಮಿತಿಯು ಎಲ್ಲಾ ಮೂಲಗಳಿಂದ 6 ಲಕ್ಷ ಕ್ಕಿಂತ ಕಡಿಮೆ ಇರಬೇಕು.

ನಾಗ್ಪುರ, ಪುಣೆ, ಚೆನ್ನೈ, ಬೆಂಗಳೂರು ನಗರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಇದನ್ನೂ ಓದಿ: B.E, B.Tech Scholorship-ಬಿ.ಟೆಕ್, ಬಿ.ಇ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

scholorship amount

ಇದನ್ನೂ ಓದಿ: kotak kanya Scholorship-ಕೋಟಕ್ ಮಹೀಂದ್ರಾ ಗ್ರೂಪ್ ಯೋಜನೆಯಡಿ 1.5 ಲಕ್ಷ ವಿದ್ಯಾರ್ಥಿವೇತನ!

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ?

ಇಂಪ್ಯಾಕ್ಟ್ ಸ್ಕಾಲರ್‌ಶಿಪ್ ಅಡಿಯಲ್ಲಿ ಆಯ್ಕೆಯಾದ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Step-1: ವಿದ್ಯಾರ್ಥಿಗಳು ಮೊದಲು ಈ ಲಿಂಕ್ "Infocepts Innovate for Impact Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

ಇದನ್ನೂ ಓದಿ: Mahindra EmpowerHer Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ!

Step-3: ನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: