Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!

March 25, 2025 | Siddesh
Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!
Share Now:

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ(Scholarship Amount) ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದರು.

ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 4123 ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸಲಾಗಿದ್ದು, 3351 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲಾಗಿದೆ.

ಇದನ್ನೂ ಓದಿ: Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

ಅವರಲ್ಲಿ ಪದವಿ ಪೂರ್ವ (ಪಿಯು), ಸಾಮಾನ್ಯ ಪದವಿ ವ್ಯಾಸಂಗ ಮಾಡುತ್ತಿರುವ 1511 ವಿದ್ಯಾರ್ಥಿಗಳಿಗೆ ರೂ. 2.26 ಕೋಟಿ, ವೃತ್ತಿಪರ ಕೋರ್ಸ್ (ಮೆಡಿಕಲ್, ಇಂಜಿನಿಯರಿಂಗ್) ವ್ಯಾಸಂಗ ಮಾಡುತ್ತಿರುವ 1840 ವಿದ್ಯಾರ್ಥಿಗಳಿಗೆ ರೂ. 2.90 ಕೋಟಿಗಳನ್ನು ನೇರ ನಗದು ವರ್ಗಾವಣೆ(Scholarship DBT Amount) ಮೂಲಕ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ಜಮಾಮಾಡಲಾಗಿದೆ ಎಂದರು.

ಆರ್ಥಿಕವಾಗಿ ಹಿಂದುಳಿದಿರುವ ವಿಪ್ರ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬ್ರಾಹ್ಮಣ ಮಂಡಳಿ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ಬೆಳಕಾಗಬೇಕು ಎಂದು ವಿದ್ಯಾರ್ಥಿಗಳನ್ನು ಹಾರೈಸಿದರು.

2025-26 ನೇ ಸಾಲಿನ ಆಯವ್ಯಯದಲ್ಲಿ ಸನ್ಯಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ರೂ.10 ಕೋಟಿಗಳ ಅನುದಾನವನ್ನು ಹಂಚಿಕೆ ಮಾಡಿದ್ದಾರೆ. ಇದಕ್ಕಾಗಿ ಮಾನ್ಯ ಸರ್ಕಾರಕ್ಕೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು.

ಇದನ್ನೂ ಓದಿ: Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Scholarship

ಮಂಡಳಿ ವತಿಯಿಂದ ಪ್ರತಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಮೊದಲ 3 ಸ್ಥಾನ ಪಡೆದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಕ್ರಮವಾಗಿ ರೂ. 15 ಸಾವಿರ, ರೂ. 10 ಸಾವಿರ ಹಾಗೂ ರೂ.5 ಸಾವಿರಗಳನ್ನು ಪುರಸ್ಕಾರವಾಗಿ ನೀಡಲಾಗುತ್ತಿದೆ. ರಾಜ್ಯದ 32 ಜಿಲ್ಲೆಗಳ ಒಟ್ಟು 694 ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪುರಸ್ಕಾರವಾಗಿ ಒಟ್ಟು ರೂ 80 ಲಕ್ಷ 35 ಸಾವಿರಗಳನ್ನು ನೀಡಲಾಗಿರುತ್ತದೆ.

ಸ್ವಯಂ ಉದ್ಯೋಗದಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಲಾಭದಾಯಕ ಉದ್ಯಮ ಸ್ಥಾಪಿಸಲು ಸಾಲದ ಮೇಲೆ ಶೇಕಡ 20 ರಷ್ಟು ಸಹಾಯಧನ ವಿತರಿಸಲಾಗುತ್ತದೆ. ಸದರಿ ಯೋಜನೆಗೆ 192 ಫಲಾನುಭವಿಗಳು ಅನುಕೂಲ ಪಡೆದುಕೊಂಡಿದ್ದು, ಯೋಜನೆಯ ಒಟ್ಟು ವೆಚ್ಚ ರೂ. 36,78,671 ಗಳಗಿರುತ್ತದೆ.

ಸರ್ಕಾರದ ಎಲ್ಲಾ ನಿಗಮ ಮಂಡಳಿಗಳಲ್ಲಿ ಯಶಸ್ವಿಯಾಗಿ ನಿರ್ವಹಿಸುತ್ತಿರುವ ನೇರ ಸಾಲ ಯೋಜನೆಯನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದಲೂ ಸಹ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವ್ಯಾಪಾರಿಗಳಿಗೆ ಸ್ವಯಂ ಉದ್ಯೋಗ ನಡೆಸಲು ನೇರ ಸಾಲ ನೀಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕಿ ನಿರ್ದೇಶಕರಾದ ಶ್ರೀಮತಿ ದೀಪಶ್ರೀ ಕೆ. ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚಿನ ಅನುದಾನವು ದೊರಕಿದ್ದಲ್ಲಿ ಸಮುದಾಯದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

Scholarship Status-ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲೇ ಹಣ ಜಮಾ ವಿವರವನ್ನು ಚೆಕ್ ಮಾಡಿಕೊಳ್ಳಬಹುದು:

ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ವಿದ್ಯಾರ್ಥಿ ವೇತನದ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು ಅಥವಾ ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಬಳಕೆ ಮಾಡಿಕೊಂಡು ಸಹ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು.

Step-1: ಮೊದಲಿಗೆ Scholarship Status ನಿಮ್ಮ ಕ್ರೋಮ್/ಗೂಗಲ್ ಬ್ರೌಸರ್ ಅನ್ನು ಬಳಕೆಯನ್ನು ಮಾಡಿಕೊಂಡು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ SSP ವೆಬ್‌ಸೈಟ್‌ಗೆ ಭೇಟಿ ಮಾಡಬೇಕು.

ಇದನ್ನೂ ಓದಿ: Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

ssp

Step-2: ಇದಾದ ನಂತರ ಮುಖಪುಟದಲ್ಲಿ ಕಾಣುವ "ವಿದ್ಯಾರ್ಥಿ ಲಾಗಿನ್" ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ಇಲ್ಲಿ ನಿಮ್ಮ ಬಳಕೆದಾರ ಐಡಿ ಮತ್ತು ಪಾಸ್‌ವರ್ಡ್ ಮತ್ತು ಕ್ಯಾಪ್ಚಾ ಕೋಡ್ ನಮೂದಿಸಿ, ಆಮೇಲೆ "ಲಾಗಿನ್" ಕ್ಲಿಕ್ ಮಾಡಿ. ನಿಮ್ಮ ಲಾಗಿನ್ ವಿವರಗಳು ಮರೆತಿದ್ದರೆ, "ಪಾಸ್‌ವರ್ಡ್ ಮರೆತಿದ್ದೇನೆ" ಅಥವಾ "ನಿಮ್ಮ ವಿದ್ಯಾರ್ಥಿ ಐಡಿ ತಿಳಿಯಿರಿ" ಆಯ್ಕೆಗಳನ್ನು ಬಳಸಿ ಲಾಗಿನ್ ಅಗಬಹುದು.

Step-3: ಲಾಗಿನ್ ಆದ ನಂತರ ಇಲ್ಲಿ "ವಿದ್ಯಾರ್ಥಿ ಶಿಷ್ಯವೇತನ ಸ್ಥಿತಿಯನ್ನು ಟ್ರ್ಯಾಕ್ ಮಾಡಿ" ಅಥವಾ "ವರ್ಷವಾರು ವಿದ್ಯಾರ್ಥಿವೇತನ ಸ್ಥಿತಿ" ಆಯ್ಕೆಯನ್ನು ಹುಡುಕಿ ಮತ್ತು ದರ ಮೇಲೆ ಕ್ಲಿಕ್ ಮಾಡಿದಬೇಕು ಬಳಿಕ ನಿಮ್ಮ SATS ಐಡಿ (ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ಸಿಸ್ಟಮ್ ಐಡಿ) ನಮೂದಿಸಿ ಮತ್ತು ಆರ್ಥಿಕ ವರ್ಷವನ್ನು ಆಯ್ಕೆ ಮಾಡಿ (ಉದಾಹರಣೆಗೆ, 2024-25). ಆಮೇಲೆ "ಹುಡುಕು" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಜಮಾ ಅಗಿರುವ ವಿದ್ಯಾರ್ಥಿ ವೇತನ ಹಣದ ಜಮಾ ವಿವರ ಗೋಚರಿಸುತ್ತದೆ.

ಇದನ್ನೂ ಓದಿ: Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

Scholarship DBT Status-ವಿಧಾನ-2: ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅಲ್ಲಿ ಜಮಾ ವಿವರ ತಿಳಿಯುವ ವಿಧಾನ:

ಈ ಲಿಂಕ್ ಮೇಲೆ ಕ್ಲಿಕ್ Download Now ಮಾಡಿ ಗೂಗಲ್ ಪ್ಲೇ ಸ್ಟೋರ್ ಪ್ರವೇಶ ಮಾಡಿ DBT Karnataka ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಆಧಾರ್ ಕಾರ್ಡ ವಿವರ ಮತ್ತು OTP ಅನ್ನು ನಮೂದಿಸಿ ಲಾಗಿನ್ ಬಟಲ್ ಮೇಲೆ ಕ್ಲಿಕ್ ಮಾಡಿ ಇಲ್ಲಿ ಮುಖಪುಟದಲ್ಲಿ ಕಾಣುವ ಪಾವತಿ ಸ್ಥಿತಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ವಿದ್ಯಾರ್ಥಿ ವೇತನ ಎಷ್ಟು ಜಮಾ ಅಗಿದೆ? ಎನ್ನುವ ಮಾಹಿತಿಯನ್ನು ಪಡೆಯಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: