Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

June 1, 2025 | Siddesh
Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!
Share Now:

9 ಮತ್ತು 10 ನೇ ತರಗತಿಯಲ್ಲಿ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ(Scholarship Application) ಪಡೆಯಲು ಅನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ನೀಡುವ ಎಲ್ಲಾ ವಿದ್ಯಾರ್ಥಿವೇತನವನ್ನು ಒಗ್ಗೂಡಿಸಿ ಒಂದೇ ತಂತ್ರಾಂಶದಲ್ಲಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಸರ್ಕಾರದಿಂದ ಅವಕಾಶವನ್ನು ಕಲ್ಪಿಸಲಾಗಿದ್ದು ಇದರನ್ವ SSP ಪೋರ್ಟಲ್(SSP Portal) ಅನ್ನು ಅಭಿವೃದ್ದಿಪಡಿಸಲಾಗಿದ್ದು ಪ್ರಸ್ತುತ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಈ ತಂತ್ರಾಂಶದಲ್ಲಿ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Tractor Cultivator Subsidy- ಸಬ್ಸಿಡಿಯಲ್ಲಿ ₹ 9,900/- ಪಾವತಿಸಿ ಟ್ರ್ಯಾಕ್ಟರ್ ಕಲ್ಟಿವೇಟರ್ ಪಡೆಯಲು ಅರ್ಜಿ!

ಈ ಅಂಕಣದಲ್ಲಿ ಪ್ರಸ್ತುತ ಯಾವೆಲ್ಲ ವಿದ್ಯಾರ್ಥಿವೇತನಕ್ಕೆ(Vidyarthi Vetana) ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳೇನು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅನುಸರಿಸಬೇಕಾದ ವಿಧಾನ ಇನ್ನಿತರೆ ಸಂಪೂರ್ಣಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Who Can Apply-ಯಾವೆಲ್ಲ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?

ಪ್ರಸ್ತುತ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಸಮಾಜ ಕಲ್ಯಾಣ ಇಲಾಕೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇನಕ್ಕೆ(ವೃತ್ತಿಪರ ಕೋರ್ಸ್ ಗಳಿಗೆ) ಅರ್ಜಿಯನ್ನು ಆಹ್ವಾನಿಸಲಾಗಿದೆ.

9-10 ನೇ ತರಗತಿಗಳಲ್ಲಿ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರವೇಶ ಪಡೆದು ವ್ಯಾಸಾಂಗ ಮಾಡುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು 2025-26ನೇ ಸಾಲಿನ ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇತರೆ ವರ್ಗದ ವಿದ್ಯಾರ್ಥಿಗಳು ಸಹ ಈ SSP ತಂತ್ರಾಂಶದಲ್ಲಿ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ.

ಇದನ್ನೂ ಓದಿ: Crop Loan-ಕೇಂದ್ರ ಸರ್ಕಾರದಿಂದ ಬೆಳೆ ಸಾಲ ವಿತರಣೆ ಕುರಿತು ಮಹತ್ವದ ಆದೇಶ ಪ್ರಕಟ!

Scholarship Application

How To Apply For Scholorship-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

2025-26ನೇ ಸಾಲಿನ ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಅಭಿವೃದ್ಧಿ ಪಡಿಸಿರುವ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ ವೆಬ್‍ಸೈಟ್: (https://scholarships.gov.in/) ಮೂಲಕ One Time Registration ಸಂಖ್ಯೆಯನ್ನು ಸೃಜಿಸಿ, ನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ssp.postmatric.karnataka.gov.in) ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

Required Documenst For Scholorship-ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಅವಶ್ಯಕ:

  • ವಿದ್ಯಾರ್ಥಿಯ ಆಧಾರ್ ಕಾರ್ಡ್/Aadhar.
  • ವಿದ್ಯಾಭ್ಯಾಸದ ಅಂಕಪಟ್ಟಿ/Marks Card.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste and income certificate.
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್/Bank Pass Book.
  • ವಿದ್ಯಾರ್ಥಿಯ ಶಾಲಾ/ಕಾಲೇಕು ದಾಖಲಾತಿ ಪ್ರಮಾಣ ಪತ್ರ/Admission Certificate.
  • ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ.
  • ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ/Student Mobile Number.

ಇದನ್ನೂ ಓದಿ: Free Mobile Repair-ಮೊಬೈಲ್ ರಿಪೇರಿ ತರಬೇತಿ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

Online Application For Scholorship-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ವಿದ್ಯಾರ್ಥಿಗಳು ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಮನೆಯಲ್ಲೇ ಇದ್ದು ಯಾವುದೇ ಸರ್ಕಾರಿ ಕಚೇರಿಯನ್ನು ಭೇಟಿ ಮಾಡದೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಮೊದಲಿ ಇಲ್ಲಿ ಕ್ಲಿಕ್ Apply Now ಮಾಡಿ ಅಧಿಕೃತ SSP ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

Scholarship Yojane

ಇದನ್ನೂ ಓದಿ: MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

Step-2: ಇದಾದ ಬಳಿಕ ಮೊದಲ ಬಾರಿಗೆ ಈ ಜಾಲತಾಣವನ್ನು ಪ್ರವೇಶ ಮಾಡುತ್ತಿರುವವರು ಬಳಕೆದಾರ ಐಡಿ ಮತ್ತು ಪಾಸ್ವರ್ಡ ಅನ್ನು ರಚನೆ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಲಾಗಿನ್ ಅಗಬೇಕು.

Step-3: ಲಾಗಿನ್ ಅದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

For More Information-ಹೆಚ್ಚಿನ ಮಾಹಿತಿಗಾಗಿ:

ಅಧಿಕೃತ SSP ವೆಬ್ಸೈಟ್-Click Here
ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: