Scholarship Application-ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

August 1, 2025 | Siddesh
Scholarship Application-ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Share Now:

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನವನ್ನು(Scholarship) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು(Karnataka Labour Welfare Board Scholarship) ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಏಳಿಗೆಗೆ ಸಹಾಯವಾಗಲೆಂದು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಗಳನ್ನು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ: Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ಈ ಯೋಜನೆಯು ಆರ್ಥಿಕವಾಗಿ ಹಿಂದುಳಿದ ಕಾರ್ಮಿಕ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣದ ಕನಸನ್ನು ಸಾಕಾರಗೊಳಿಸಲು ಆರ್ಥಿಕವಾಗಿ ನೆರವನ್ನು ನೀಡುತ್ತದೆ. ಇಂದಿನ ಈ ಅಂಕಣದಲ್ಲಿ ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ದಾಖಲಾತಿಗಳ ಕುರಿತು ಅವಶ್ಯಕ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Labour Welfare Board Scholarship Eligibility-ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಹತಾ ಮಾನದಂಡಗಳೇನು?

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.

  • ಅರ್ಜಿದಾರರು ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು.
  • ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯನ್ನು ಮಾಡಿಕೊಂಡು ಕಾರ್ಮಿಕ ಕಾರ್ಡ ಅನ್ನು ಹೊಂದಿರುವ ಕುಟುಂಬದ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  • ಅರ್ಜಿದಾರರ ವಿದ್ಯಾರ್ಥಿಯು 2025-26ನೇ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಅರ್ಹ ಶೈಕ್ಷಣಿಕ ಕೋರ್ಸ್‌ಗೆ ಸೇರಿರಬೇಕು (ಉದಾಹರಣೆಗೆ: ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಇತ್ಯಾದಿ).
  • 2025ನೇ ಮೇ 31ರ ಪೂರ್ವದಲ್ಲಿ ನೊಂದಾಯಿತರಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.

ಇದನ್ನೂ ಓದಿ: Navodaya School-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2025

How to Apply for Labour Card Scholarship-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ರಾಜ್ಯದ ವಿದ್ಯಾರ್ಥಿವೇತನದ(SSP Portal) ಅಧಿಕೃತ https://ssp.karnataka.gov.in ಪೋರ್ಟಲ್ ಅನ್ನು ಪ್ರವೇಶ ಮಾಡಿ ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

Labour Welfare Board Scholarship

Step-1: ವಿದ್ಯಾರ್ಥಿಗಳು ಮೊದಲಿಗೆ "Online Scholarship Application" ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ SSP ಪೋರ್ಟಲ್‌ ಅನ್ನು ಭೇಟಿ ಮಾಡಿ.

ಇದನ್ನೂ ಓದಿ: PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

Step-2: ಬಳಿಕ ಮೊದಲ ಬಾರಿಗೆ ಈ ತಂತ್ರಾಂಶವನ್ನು ಪ್ರವೇಶ ಮಾಡುತ್ತಿರುವ ವಿದ್ಯಾರ್ಥಿಗಳು ವೆಬ್ಸೈಟ್ ಅನ್ನು ಪ್ರವೇಶ ಮಾಡಿದಾಗ ಮುಖಪುಟದಲ್ಲಿ ಕಾಣುವ "ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ" ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಖಾತೆಯನ್ನು ರಚನೆ ಮಾಡಿಕೊಳ್ಳಬೇಕು.

Step-3: ಇದಾದ ಬಳಿಕ ಅಗತ್ಯ ವಿವರವನ್ನು ಹಾಕಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅದರೆ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

Required Documents For Scholarship Application-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು?

ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ.

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • ವಿದ್ಯಾರ್ಥಿ ಪೋಟೋ
  • ವ್ಯಾಸಂಗ ಪ್ರಮಾಣ ಪತ್ರ
  • ಪೋಷಕರ ಕಾರ್ಮಿಕ ಕಾರ್ಡ ಪ್ರತಿ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ.

Helpline Number-ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಕಾರ್ಮಿಕ ಮಂಡಳಿಯ ಸಹಾಯವಾಣಿ ಸಂಖ್ಯೆ- 155214

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: