Scholarship Application-ಸಮಾಜ ಕಲ್ಯಾಣ ಇಲಾಖೆಯಿಂದ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ!

October 29, 2025 | Siddesh
Scholarship Application-ಸಮಾಜ ಕಲ್ಯಾಣ ಇಲಾಖೆಯಿಂದ 5 ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ!
Share Now:

ಸಮಾಜ ಕಲ್ಯಾಣ ಇಲಾಖೆಯಿಂದ(samaja kalyana ilake) ಅರ್ಹ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಉತೇಜನ ನೀಡಲು ವಿವಿಧ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು(Post Matric Scholarship) ಒದಗಿಸಲು ಒಟ್ಟು 5 ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ(Matric Scholarship), ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ, ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ. ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (ಆಡಳಿತ ಮಂಡಳಿ ಕೋಟಾದ ವಿದ್ಯಾರ್ಥಿಗಳಿಗೆ), ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಇಲಾಖೆಯಿಂದ ಹೊರಡಿಸಿರುವ ಪ್ರಕಟಣೆ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: MSP Purchase-ರೈತರಿಗೆ ಸಿಹಿ ಸುದ್ದಿ! ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್,ಸೂರ್ಯಕಾಂತಿ,ಹೆಸರು ಕಾಳು ಖರೀದಿ ಆರಂಭ!

ಸಮಾಜ ಕಲ್ಯಾಣ ಇಲಾಖೆಯಿಂದ ಯಾವೆಲ್ಲ ವಿದ್ಯಾರ್ಥಿವೇತನ(Scholarship) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ? ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯಗಳಾವುವು? ಅರ್ಜಿ ಸಲ್ಲಿಸಲು ಇಲಾಖೆಯಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

Scholarship Schemes In Karnataka-ಯಾವೆಲ್ಲ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ?

1) ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ.
2) ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ.
3) ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ.
4) ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (ಆಡಳಿತ ಮಂಡಳಿ ಕೋಟಾದ ವಿದ್ಯಾರ್ಥಿಗಳಿಗೆ).
5) ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜು ನಿಲಯಾರ್ಥಿಗಳಿಗೆ ಮಾಸಿಕ ನಿರ್ವಹಣಾ ವೆಚ್ಚ.

ಇದನ್ನೂ ಓದಿ: RTO Online Servises-ವಾಹನ ಮಾಲೀಕರಿಗೆ ಸಿಹಿ ಸುದ್ದಿ! ಇನ್ಮುಂದೆ RTO ಕಚೇರಿ ಅಲೆದಾಟಕ್ಕೆ ಬೀಳಲಿದೆ ಬ್ರೇಕ್!

Scholarship Schemes Benefits-ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯಗಳು:

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ, ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ, ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (ಆಡಳಿತ ಮಂಡಳಿ ಕೋಟಾದ ವಿದ್ಯಾರ್ಥಿಗಳಿಗೆ), ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಸ್ಕಾಲರ್ ಶಿಪ್ ಅನ್ನು ಡಿಬಿಟಿ ಮೂಲಕ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಇದೇ ಮಾದರಿಯಲ್ಲಿ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜು ನಿಲಯಾರ್ಥಿಗಳಿಗೆ ಮಾಸಿಕ ನಿರ್ವಹಣಾ ವೆಚ್ಚ ಯೋಜನೆಯಡಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ 3,500/- ಮಾಸಿಕ ನಿರ್ವಹಣಾ ವೆಚ್ಚವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Kotak Scholarships-ಮಹೀಂದ್ರಾ ಗ್ರೂಪ್ ಕಂಪನಿ ವತಿಯಿಂದ 1.5 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Scholarship Application

ಇದನ್ನೂ ಓದಿ: Bank Loan Interest Subsidy-ಬ್ಯಾಂಕ್ ಸಾಲದ ಮೇಲೆ ಶೇ 3% ಬಡ್ಡಿ ಸಬ್ಸಿಡಿ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ!

Scholarship Schemes Eligibility-ಅರ್ಜಿ ಸಲ್ಲಿಸಲು ಇಲಾಖೆಯಿಂ.ದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳು:

  • ಅರ್ಜಿದಾರ ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಪರಿಶಿಷ್ಟ ಜಾತಿಯ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • 1 ರಿಂದ ಪದವಿ ವರೆಗೆ ವ್ಯಾಸಂಗ ಮಾಡುತ್ತಿರುವ ಎಲ್ಲಾ ತಗತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  • ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯವು ಯೋಜನೆಯ ಅನುಗುಣವಾಗಿ ₹2.5 ಲಕ್ಷದಿಂದ ₹10 ಲಕ್ಷದ ಒಳಗಿರಬೇಕು.
  • ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳ College Attached Hostel ಗಳಲ್ಲಿ ದಾಖಲಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

Scholarship Online Application-ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿವೇತನವನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ರಾಜ್ಯ ಸರಕಾರದ ಅಧಿಕೃತ ವಿದ್ಯಾರ್ಥಿವೇತನ ಪೋರ್ಟಲ್ ಅನ್ನು ಪ್ರವೇಶ ಮಾಡಿ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಪ್ರಥಮದಲ್ಲಿ ವಿದ್ಯಾರ್ಥಿಗಳು ಇಲ್ಲಿ ಕ್ಲಿಕ್ "Scholarship Online Application" ಮಾಡಿ ಅಧಿಕೃತ SSP ವೆಬ್ಸೈಟ್ ಅನ್ನು ಪ್ರವೇಶ ಮಾಡಿ.

Step-2: ಇದಾದ ಬಳಿಕ ಮೊದಲ ಬಾರಿಗೆ ಈ ಜಾಲತಾಣವನ್ನು ಪ್ರವೇಶ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿ "ಹೊಸ ಖಾತೆಯನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ವಿದ್ಯಾರ್ಥಿಯ ಆಧಾರ್ ಕಾರ್ಡ ನಂಬರ್ ಅನ್ನು ಹಾಕಿ "CLICK TO PROCEED" ಬಟನ್ ಮೇಲೆ ಕ್ಲಿಕ್ ಬಳಿಕ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಳ್ಳಿ.

Step-3: ನಂತರ ಮುಖುಪುಟ ಭೇಟಿ ಮಾಡಿ ನಿಮ್ಮ ವಿದ್ಯಾರ್ಹತೆ ಅನುಗುಣವಾಗಿ "ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ" ಆಯ್ಕೆಯ ಮೇಲೆ ಒತ್ತಿ User ID ಮತ್ತು Password, ಕ್ಯಾಪ್ಚ್ ಕೋಡ್ ನಮೂದಿಸಿ "Student Login" ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳಿತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: Driving Licence Application-ಹೊಸ ಡ್ರೈವಿಂಗ್ ಲೈಸೆನ್ಸ್ ಮತ್ತು ತಿದ್ದುಪಡಿ ಮಾಡಿಸುವುದು ಇನ್ನು ಭಾರೀ ಸುಲಭ!

Documents-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ವಿದ್ಯಾರ್ಥಿಗಳು SSP ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿದೆ.

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • ಬ್ಯಾಂಕ್ ಪಾಸ್ ಬುಕ್
  • ಶಾಲಾ ವ್ಯಾಸಂಗ ಪ್ರಮಾಣ ಪತ್ರ
  • ಜಾತಿ ಮತ್ತು ಅದಾಯ ಪ್ರಮಾಣ ಪತ್ರ
  • ಮೊಬೈಲ್ ಮತ್ತು ಮೇಲೆ ವಿಳಾಸ
  • ಹಾಸ್ಟೆಲ್ ವಿವರ(ಅನ್ವಯವಾದಲ್ಲಿ)

ಇದನ್ನೂ ಓದಿ: Loreal India Scholarship-ಲೋರಿಯಲ್ ಇಂಡಿಯಾ ವತಿಯಿಂದ ವಿದ್ಯಾರ್ಥಿಗಳಿಗೆ ರೂ 62,500/- ಸ್ಕಾಲರ್‌ಶಿಪ್!

ಅರ್ಜಿದಾರರಿಗೆ ಇಲಾಖೆಯ ವಿಶೇಷ ಸೂಚನೆಗಳು:

ಆಧಾರ್ ಸೀಡಿಂಗ್: ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಎಲ್ಲಾ ವಿದ್ಯಾರ್ಥಿವೇತನ/ಪ್ರೋತ್ಸಾಹಧನ ಕಾರ್ಯಕ್ರಮದಡಿ ಮಂಜೂರಾದ ಮೊತ್ತವನ್ನು ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು ಸದರಿ ಪ್ರಕ್ರಿಯೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆಯನ್ನು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.

Bio Metric e-Authentication: ಕೇಂದ್ರ ಸರ್ಕಾರದ ಶೇಕಡ 60 ರಷ್ಟು ವಿದ್ಯಾರ್ಥಿವೇತನ ಮೊತ್ತಕ್ಕಾಗಿ ಈ ಮೇಲಿನ ವಿದ್ಯಾರ್ಥಿವೇತನ ಕಾರ್ಯಕ್ರಮಗಳಡಿ ವಿದ್ಯಾರ್ಥಿಗಳ ಬಯೋ ಮೆಟ್ರಿಕ್ ಇ-ದೃಢೀ ಕರಣ ಕಡ್ಡಾಯ.

ಬಯೋಮೆಟ್ರಿಕ್ ದೃಢೀಕರಣ ಪಡೆಯಲು ದಯವಿಟ್ಟು ಹತ್ತಿರದ ತಾಲ್ಲೂಕು ಸಮಾಜ ಕಲ್ಯಾಣ ಕಚೇರಿಗೆ ಭೇಟಿ ನೀಡಿ.

For More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಹಾಯವಾಣಿ:

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್- CLICK HERE
  • ಸಹಾಯವಾಣಿ ಸಂಖ್ಯೆ- 9482300400

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: