Scholarship Application-ಪಿಯುಸಿಯಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

November 21, 2026 | Siddesh
Scholarship Application-ಪಿಯುಸಿಯಿಂದ ಪದವಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!
Share Now:

ಉನ್ನತ ಶಿಕ್ಷಣ ಪಡೆಯುವ ಕನಸು ಹೊಂದಿರುವ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲೊಂದು ಉತ್ತಮ ಅವಕಾಶವಿದೆ. 2026-27ನೇ ಸಾಲಿನ ಕೃಷಿಕ್ ಎಂಡೋಮೆಂಟ್ ವಿದ್ಯಾರ್ಥಿವೇತನಕ್ಕಾಗಿ(Krishik Endowment Scholarship) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿ, ಪದವಿ, ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಆರ್ಥಿಕವಾಗಿ ಹಿಂದುಳಿದ ರೈತ ಕುಟುಂಬಗಳ ಪ್ರತಿಭಾವಂತ ಮಕ್ಕಳಿಗೆ ಉನ್ನತ ಶಿಕ್ಷಣ(PUC Scholarship Application) ಮುಂದುವರಿಸಲು ಆರ್ಥಿಕ ನೆರವನ್ನು ಒದಗಿಸಲು ವಿದ್ಯಾರ್ಥಿವೇತನವನ್ನು ನೀಡಲು. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿರುವ ಹಾಗೂ ಮುಂದಿನ ವಿದ್ಯಾಭ್ಯಾಸ ಮುಂದುವರಿಸಲು ಆಸಕ್ತಿ ಹೊಂದಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಕೂಡಲೇ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: Bara Parihara-2026: ಬರ ಪರಿಹಾರ ಡಿಸೆಂಬರ್ ಅಂತ್ಯದೊಳಗೆ ರೈತರ ಖಾತೆಗೆ ₹5000!

ಹಾಗಾದರೆ ಈ ವಿದ್ಯಾರ್ಥಿವೇತನಕ್ಕೆ(Scholarship Scheme In Karnataka) ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಶೈಕ್ಷಣಿಕ ಅರ್ಹತೆಗಳೇನು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳು ಯಾವುವು? ಇನ್ನಿತರೆ ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Scholarship Eligibility-ವಿದ್ಯಾರ್ಥಿವೇತನಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕೆಳಗಿನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು.

  • ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • ವೃತ್ತಿಪರ ಸ್ನಾತಕ ಪದವಿ ವ್ಯಾಸಂಗ ಮಾಡುತ್ತಿರುವವರು ಅರ್ಹರು.
  • ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು.
  • ಸಂಬಂಧಪಟ್ಟ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಅಥವಾ 9/10 ಸಿಜಿಪಿಎ ಗ್ರೇಡ್ ಪಡೆದಿರಬೇಕು.
  • ಮುಂದಿನ ವಿದ್ಯಾಭ್ಯಾಸವನ್ನು ಮುಂದುವರಿಸುವ ಆಸಕ್ತಿ ಹೊಂದಿರಬೇಕು.

ಇದನ್ನೂ ಓದಿ: Dairy Farming-ಉಚಿತ ಕುರಿ-ಆಡು ಸಾಕಾಣಿಕೆ ಜೊತೆ ಹೈನುಗಾರಿಕೆಗೆ ತರಬೇತಿ!ಇಂದೇ ಅರ್ಜಿ ಸಲ್ಲಿಸಿ!

ಇತರೆ ಪ್ರಮುಖ ಅರ್ಹತೆಗಳು:

ಶೈಕ್ಷಣಿಕ ಅರ್ಹತೆಯ ಜೊತೆಗೆ ವಿದ್ಯಾರ್ಥಿಗಳು ಈ ಕೆಳಗಿನ ಷರತ್ತುಗಳನ್ನು ಸಹ ಪೂರೈಸಿರಬೇಕು.

ಒಂದು ಹೆಕ್ಟೇರ್‌ಗಿಂತ ಕಡಿಮೆ ಒಣಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಮಕ್ಕಳಾಗಿರಬೇಕು.

ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಶಾಲೆಯಲ್ಲಿ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿರಬೇಕು.

ಉತ್ತಮ ಶೈಕ್ಷಣಿಕ ಸಾಧನೆ ಹೊಂದಿರಬೇಕು.

ಇದನ್ನೂ ಓದಿ: Beat Forester Job-ಅರಣ್ಯ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ! 355 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

Scholarship Application-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

Step-1: ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆಸಕ್ತಿಯನು ವಿದ್ಯಾರ್ಥಿಗಳು "Apply Now" ಇಲ್ಲಿ ಕ್ಲಿಕ್ ಮಾಡಿ ಕೃಷಿಕ್ ಸರ್ವೋದಯ ಫೌಂಡೇಶನ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

Step-2: ಬಳಿಕ ಈ ಪೇಜ್ ನಲ್ಲಿ ಮೇಲೆ ಕಾಣಿಸುವ "Scholarship" ಬಟನ್ ಮೇಲೆ ಕ್ಲಿಕ್ ಮಾಡಿ ಕೆಲಗೆ ಸ್ಕ್ರೋಲ್ ಮಾಡಿ Download ಬಟನ್ ಮೇಲೆ ಒತ್ತಿ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.

Step-3: ನಂತರ ಅರ್ಜಿ ನಮೂನೆಯಲ್ಲಿ ಕೇಳಿರುವ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆ ಸಮೇತ ಭರ್ತಿ ಮಾಡಿದ ಅರ್ಜಿಯನ್ನು ಫೌಂಡೇಶನ್‌ನ ಕೇಂದ್ರ ಕಚೇರಿ ವಿಳಾಸಕ್ಕೆ ಪೋಸ್ಟ್ ಮಾಡಿ.

ಇದನ್ನೂ ಓದಿ: e-Swathu Document-ಕೃಷಿ ಜಮೀನಿನ ಕಟ್ಟಡಕ್ಕೆ ಇ-ಸ್ವತ್ತು ಪಡೆಯಲು ಈ ದಾಖಲೆ ಕಡ್ಡಾಯ!

Office Address-ಕೇಂದ್ರ ಕಚೇರಿ ವಿಳಾಸ:

ಕೃಷಿಕ್ ಸರ್ವೋದಯ ಫೌಂಡೇಶನ್, ನಂ. 15, 2ನೇ ಮಹಡಿ, ಗಾಲ್ಫ್ ಅವೆನ್ಯೂ ರಸ್ತೆ, ಎಚ್.ಎ.ಎಲ್ ಹಳೆ ವಿಮಾನ ನಿಲ್ದಾಣ ರಸ್ತೆ, ಕೊಡಿಹಳ್ಳಿ, ಬೆಂಗಳೂರು-08.

Documents For Scholarship-ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳು:

  • ವಿದ್ಯಾರ್ಥಿಯ ಆಧಾರ್ ಕಾರ್ಡ/Adhar Card
  • ಅಂಕಪಟ್ಟಿ/Marks Card
  • ಪೋಟೋ/Photo
  • ಬ್ಯಾಂಕ್ ಪಾಸ್ ಬುಕ್/Bank Pass Book
  • ಜಮೀನಿನ ಪಹಣಿ/ಹಿಡುವಳಿ ಪ್ರಮಾಣ ಪತ್ರ/RTC

ಇದನ್ನೂ ಓದಿ: Ration Card KYC-ರೇಶನ್ ಕಾರ್ಡದಾರರಿಗೆ ಮಹತ್ವದ ಸುದ್ದಿ! ಇ-ಕೆವೈಸಿಯಲ್ಲಿ ನೂತನ ಬದಲಾವಣೆ ಜಾರಿ!

Helpline Number-ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಲು ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

080-25202299, 7625000990, 9901911410

Official Website-ಅಧಿಕೃತ ವೆಬ್‌ಸೈಟ್: https://ksfkarnataka.com/

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: