Scholarship for PG Students-ಎಸ್.ಬಿ.ಐ ಫೌಂಡೇಶನ್ ನಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ₹2.5 ಲಕ್ಷ ವಿದ್ಯಾರ್ಥಿವೇತನ!

November 4, 2025 | Siddesh
Scholarship for PG Students-ಎಸ್.ಬಿ.ಐ ಫೌಂಡೇಶನ್ ನಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ₹2.5 ಲಕ್ಷ ವಿದ್ಯಾರ್ಥಿವೇತನ!
Share Now:

ಎಸ್.ಬಿ.ಐ ಫೌಂಡೇಶನ್ ವತಿಯಿಂದ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಪ್ರವೇಶವನ್ನು(SBI Platinum Jubilee Asha Scholarship for Postgraduate Students) ಪಡೆದಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನವನ್ನು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈಗಾಗಲೇ ನಮ್ಮ ಪುಟದ ಹಿಂದಿನ ಅಂಕಣದಲ್ಲಿ ಎಸ್.ಬಿ.ಐ ಫೌಂಡೇಶನ್ ವತಿಯಿಂದ(SBI Platinum Scholarship for Postgraduate Students) ಪ್ರಸ್ತುತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವ ವಿವಿಧ ವಿದ್ಯಾರ್ಥಿವೇತನ ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದ್ದು ಇಂದಿನ ಲೇಖನದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿವೇತನ ಯೋಜನೆ ಬಗ್ಗೆ ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Bele Samikshe-2025-ರೈತರ ಜಮೀನಿನ ಬೆಳೆ ಸಮೀಕ್ಷೆಗೂ AI ತಂತ್ರಜ್ಞಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

ಎಸ್.ಬಿ.ಐ ಫೌಂಡೇಶನ್ ನಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿವೇತನವನ್ನು(SBI Postgraduate Scholarship) ನೀಡಲಾಗುತ್ತದೆ? ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು ಯಾವುವು? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರುಎನ್ನು ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ.

SBI Postgraduate Scholarship Eligibility Criteria-ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಎಸ್.ಬಿ.ಐ ಫೌಂಡೇಶನ್ ವತಿಯಿಂದ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಅನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

ವಿದ್ಯಾರ್ಥಿಯು ಭಾರತೀಯ ನಿವಾಸಿಯಾಗಿರಬೇಕು.
ಅರ್ಜಿದಾರ ವಿದ್ಯಾರ್ಥಿಯು ಇತ್ತೀಚಿನ NIRF ಶ್ರೇಯಾಂಕಗಳ ಪ್ರಕಾರ ಟಾಪ್ 300 ಸಂಸ್ಥೆಗಳಲ್ಲಿ ಪಟ್ಟಿ ಮಾಡಲಾದ ಭಾರತದ ಪ್ರಮುಖ ವಿಶ್ವವಿದ್ಯಾಲಯ/ಕಾಲೇಜಿನಿಂದ (ಯಾವುದೇ ವರ್ಷ) ಸ್ನಾತಕೋತ್ತರ ಕೋರ್ಸ್ ಗೆ ಪ್ರವೇಶವನ್ನು ಪಡೆದಿರಬೇಕು.
ಅರ್ಜಿದಾರ ವಿದ್ಯಾರ್ಥಿಯು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 7 CGPA/75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
ಅರ್ಜಿದಾರ ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ₹6.0 ಲಕ್ಷದ ಮಿತಿಯಲ್ಲಿರಬೇಕು.

ಇದನ್ನೂ ಓದಿ: Krishi Mela Bengaluru-2025: ಜಿಕೆವಿಕೆ ಕೃಷಿ ಮೇಳ-2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

Last Date For SBI Postgraduate Scholarship-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 15 ನವೆಂಬರ್ 2025 ಕೊನೆಯ ದಿನಾಂಕವಾಗಿರುತ್ತದೆ.

SBI Postgraduate Scholarship Amount-ವಿದ್ಯಾರ್ಥಿವೇತನದ ಮೊತ್ತವೇಷ್ಟು?

ಎಸ್.ಬಿ.ಐ ಫೌಂಡೇಶನ್ ವತಿಯಿಂದ ಸ್ನಾತಕೋತ್ತರ ಪದವಿಗೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿವೇತನವನ್ನು ಪಡೆಯಲು ಆಯ್ಕೆಯಾದಲ್ಲಿ ಫೌಂಡೇಶನ್ ನಿಂದ ₹2.5 ಲಕ್ಷ ಸ್ಕಾಲರ್ ಶಿಪ್ ಅನ್ನು ನೀಡಲಾಗುತ್ತದೆ.

SBI Postgraduate Scholarship Online Application-ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತವನ್ನು ಪಡೆಯಲು ತಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶವಿದ್ದು ಇದಕ್ಕಾಗಿ ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಲು ಸೂಚಿಸಲಾಗಿದೆ.

Step-1: ವಿದ್ಯಾರ್ಥಿಯು ಮೊದಲಿಗೆ "SBI Postgraduate Scholarship Online Application" ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ವಿದ್ಯಾರ್ಥಿವೇತನದ ಜಾಲತಾಣವನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Ration Card-ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಪುನಃ ಅವಕಾಶ!

SBI Postgraduate Scholarship Application

Step-2: ನಂತರ ಈ ಪೇಜ್ ನಲ್ಲಿ "SBI Platinum Jubilee Asha Scholarship for Postgraduate Students 2025-26" ವಿಭಾಗ ಮುಂದೆ ಕಾಣಿಸುವ "Apply Now" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಇದಾದ ಬಳಿಕ "Apply Now" ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ "Not Registered Yet ? Create an account" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಎಲ್ಲಾ ವಿವರವನ್ನು ಭರ್ತಿ ಮಾಡಿ User Id ಮತ್ತು Password ಅನ್ನು ರಚನೆ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-4: "Login/ಲಾಗಿನ್" ಆಯ್ಕಯ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: High School Scholarship: 9-12 ತರಗತಿ ವಿದ್ಯಾರ್ಥಿಗಳಿಗೆ ರೂ 15,000/ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

Required Documents For SBI Postgraduate Scholarship-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯವಾಗಿ ಬೇಕಾಗುವ ಅಗತ್ಯ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ:

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಯ ವ್ಯಾಸಂಗ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ
  • ಮೊಬೈಲ್ ನಂಬರ್

ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: