Scholarship-HDFC ಬ್ಯಾಂಕಿನಿಂದ Parivartan ಯೋಜನೆಯಡಿ ₹75,000 ವಿದ್ಯಾರ್ಥಿವೇತನ!

July 16, 2025 | Siddesh
Scholarship-HDFC ಬ್ಯಾಂಕಿನಿಂದ Parivartan ಯೋಜನೆಯಡಿ ₹75,000 ವಿದ್ಯಾರ್ಥಿವೇತನ!
Share Now:

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು HDFC ಬ್ಯಾಂಕಿನಿಂದ ಪರಿವರ್ತನ್ ವಿದ್ಯಾರ್ಥಿವೇತನ(HDFC Bank Parivartan Scholarship) ಯೋಜನೆಯಡಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

HDFC Bank Parivartan's ECSS Programme 2025-26 ಯೋಜನೆಯಡಿ ವಿದ್ಯಾರ್ಥಿವೇತನವನ್ನು ಪಡೆಯಲು ಒಟ್ಟು ಮೂರು ವಿಭಾಗಗಳನ್ನು ವಿಂಗಡಣೆ ಮಾಡಲಾಗಿದ್ದು 1 ರಿಂದ 12 ನೇ ತರಗತಿ,ITI,Diploma ವಿದ್ಯಾರ್ಥಿಗಳಿಗೆ ಮತ್ತು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!

ಬಹುತೇಕ ಮಕ್ಕಳ ಪೋಷಕರಿಗೆ ಕೇವಲ ಸರ್ಕಾರಿ ಮತ್ತು ಸಂಘ ಸಂಸ್ಥೆಗಳ ಮೂಲಕ ಮಾತ್ರ ವಿವಿಧ ಬಗ್ಗೆಯ ವಿದ್ಯಾಭ್ಯಾಸಕ್ಕೆ ಸ್ಕಾಲರ್ಶಿಪ್(HDFC Scholarship Application)ನೀಡಲಾಗುತ್ತದೆ ಎಂದು ತಿಳಿದುಕೊಂಡಿರುತ್ತಾರೆ ಅದರೆ ಖಾಸಗಿ ವಲಯದ ಸಂಸ್ಥೆಗಳ ಮೂಲಕವು ಸಹ CSC Fund ಮೂಲಕ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು ಈ ವಲಯಕ್ಕೆ ಸಂಬಂಧಪಟ್ಟಂತೆ HDFC ಬ್ಯಾಂಕಿನಿಂದ ಪರಿವರ್ತನ್ ವಿದ್ಯಾರ್ಥಿವೇತನ ಯೋಜನೆಯಡಿ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವುದರ ಕುರಿತು ಈ ಕೆಳಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

HDFC Bank Scholarship Amount-ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದೆ?

2025-26 ನೇ ಸಾಲಿನ HDFC Bank Parivartan's ECSS Programme ಕಾರ್ಯಕ್ರಮದಡಿ ಆಯ್ಕೆಯಾಗುವ ಅರ್ಹ ವಿದ್ಯಾರ್ಥಿಗಳಿಗೆ ಈ ಕೆಳಗಿನಂತೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

  • 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ:- ₹ 15,000/-
  • 7 ರಿಂದ 12 ನೇ ತರಗತಿ ಮತ್ತು ITI,Diploma ವಿದ್ಯಾರ್ಥಿಗಳಿಗೆ:- ₹ 18,000/-
  • ಪದವಿ ವಿದ್ಯಾರ್ಥಿಗಳಿಗೆ:- ₹ 35,000/-
  • ವೃತ್ತಿಪರ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ:- ₹ 75,000/-

ಇದನ್ನೂ ಓದಿ: Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Scholarship Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 ಸೆಪ್ಟೆಂಬರ್ 2025

Who Can Apply HDFC Bank Parivartan's Scholarship-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರ ವಿದ್ಯಾರ್ಥಿಯು ಭಾರತೀಯ ನಿವಾಸಿಯಾಗಿರಬೇಕು.

1ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳು,ITI,ಡಿಪ್ಲೋಮಾ ವಿದ್ಯಾರ್ಥಿಗಳು,ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ (Classes 1 to 12, or pursuing diploma, ITI, and polytechnic courses in private, government, or government-aided schools.M.Com,M.A, M.Tech, M.B.A,B.Com., B.Sc., B.A., B.C.A., etc., and professional courses such as B.Tech., M.B.B.S., L.L.B., B.Arch., Nursing) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಿದ್ಯಾರ್ಥಿಯು ಅರ್ಜಿಯನ್ನು ಸಲ್ಲಿಸಲು ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು.

ಅರ್ಜಿದಾರ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ₹2.5 ಲಕ್ಷದ ಒಳಗಿರಬೇಕು.

ಇದನ್ನೂ ಓದಿ: Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

ಶಿಕ್ಷಣದ ವೆಚ್ಚವನ್ನು ಭರಿಸಲಾಗದೇ ಶಾಲೆ/ಕಾಲೇಜನ್ನು ತೋರೆಯುವ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸರ್ಕಾರಿ,ಅನುದಾನಿತ,ಖಾಸಗಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

UGC ಯಿಂದ ಮಾನ್ಯತೆ ಪಡೆಯಲು ಎಲ್ಲಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಇದನ್ನೂ ಓದಿ: Awas Yojana-ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಆಹ್ವಾನ!

How To Apply For Scholarship-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ www.buddy4study.com ಅಧಿಕೃತ ತಂತ್ರಾಂಶವನ್ನು ಭೇಟಿ ಮಾಡಿ ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಪ್ರಥಮದಲ್ಲಿ ಇಲ್ಲಿ ಕ್ಲಿಕ್ Online Scholarship Application ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Scholarship

ಇದನ್ನೂ ಓದಿ: Free Computer Training-ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ!

Step-2: ಬಳಿಕ ಅಧಿಕೃತ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವೆಬ್ಸೈಟ್ ತೆರೆದುಕೊಳ್ಳುತ್ತದೆ ಇಲ್ಲಿ ತರಗತಿ ಅನುಗುವಾಗಿ ಮೂರು ವಿಭಾಗದಲ್ಲಿ "Apply Now" ಬಟನ್ ಗೋಚರಿಸುತ್ತವೆ ಇಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅನುಸಾರಗಾಗಿ ಒಂದು ಆಯ್ಕೆಯ ಮೇಲೆ ಒತ್ತಿ “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚಿಸಿಕೊಳ್ಳಬೇಕು ಬಳಿಕ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಮಾಡಿಕೊಳ್ಳಲು ಅಗತ್ಯ ವಿವರವನ್ನು ಹಾಕಿ ಲಾಗಿನ್ ಮಾಡಿ.

Step-3: ತದನಂತರ ಅರ್ಜಿ ನಮೂನೆ ಒಪನ್ ಅಗುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ಮಾಹಿತಿ ಮತ್ತು ಅವಶ್ಯಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.

ಇದನ್ನೂ ಓದಿ: PM Kisan Updates-ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Documents For Scholarship-ಅರ್ಜಿ ಸಲ್ಲಿಸಲು ದಾಖಲೆಗಳು:

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

1) ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar
2)ಪೋಟೋ/Photo
3)ಅಂಕಪಟ್ಟಿ/Markscard
4)ಶಾಲಾ-ಕಾಲೇಜು ಪ್ರವೇಶ ದೃಡೀಕರಣ/Study Certificate
5)ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ/Income Certificate
6)ಮೊಬೈಲ್ ನಂಬರ್/Mobile Number
7)ಇ-ಮೇಲ್ ವಿಳಾಸ/Email

Useful Information-ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ:

  • Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್- Apply Now
  • Scholarship Official Website-ಅಧಿಕೃತ ವೆಬ್ಸೈಟ್-Click Here
  • Scholarship Helpline-ಸಹಾಯವಾಣಿ-011-430-92248 (Ext: 116) (Monday to Friday-10:00 AM 06:00 PM)
  • Email-hdfcbankecss@buddy4study.com

WhatsApp Group Join Now
Telegram Group Join Now
Share Now: