Scholorship Amount-BE/B.Tech ವಿದ್ಯಾರ್ಥಿಗಳಿಗೆ ₹70,250 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

August 6, 2026 | Siddesh
Scholorship Amount-BE/B.Tech ವಿದ್ಯಾರ್ಥಿಗಳಿಗೆ ₹70,250 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!
Share Now:

2026-2027 ನೇ ಸಾಲಿನ BE/B.Tech ವಿದ್ಯಾರ್ಥಿಗಳಿಗೆ ಪ್ಯಾನಾಸೋನಿಕ್ ರಟ್ಟಿ ಛತ್ರ್ ವಿದ್ಯಾರ್ಥಿವೇತನ ಕಾರ್ಯಕ್ರಮದ ವತಿಯಿಂದ 70,250 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಿದೆ.

ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ಕುಟುಂಬ ವರ್ಗದ ವಿದ್ಯಾರ್ಥಿಗಳು ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Dam Water Level-ರಾಜ್ಯದ ಜಲಾಶಯಗಳಿಗೆ ಒಂದೇ ದಿನದಲ್ಲಿ 34 TMC ನೀರು ಸಂಗ್ರಹ! ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟ!

ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಹರಿರುತ್ತಾರೆ? ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಲಗತ್ತಿಸಬೇಕಾದ ದಾಖಲೆಗಳಾವುವು? ಅರ್ಜಿ ಸಲ್ಲಿಸಲು ಯಾವೆಲ್ಲಾ ಹಂತಗಳನ್ನು ಅನುಸರಿಸಬೇಕು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Last Date To APply-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 20 ಆಗಸ್ಟ್ 2026

Scholorship Amount-ಈ ಯೋಜನೆಯ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ?

ಪ್ಯಾನಾಸೋನಿಕ್ ಲೈಫ್ ಸೊಲ್ಯೂಷನ್ಸ್ ಇಂಡಿಯಾ (PLSIND) ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ವರ್ಷಕ್ಕೆ 70,250 ರೂಪಾಯಿ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: VAO Last Date-ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Eligibility Critiria-ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರ ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

2026-27ನೇ ಸಾಲಿನ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

ವಿದ್ಯಾರ್ಥಿಯು 12 ನೇ ತರಗತಿಯನ್ನು 75% ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷ ಮೀರಿರಬಾರದು.

ಬಿಇ/ಬಿ.ಟೆಕ್ ಕಾರ್ಯಕ್ರಮಗಳಿಗೆ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮತ್ತು 2026-27ನೇ ಶೈಕ್ಷಣಿಕ ವರ್ಷಕ್ಕೆ ಯಾವುದೇ ಐಐಟಿಯಲ್ಲಿ ಮೊದಲ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳು ಅರ್ಹರಿರುತ್ತಾರೆ.

ಬಡ್ಡಿ4ಸ್ಟಡಿ ಮತ್ತು ಪ್ಯಾನಾಸೋನಿಕ್ ಉದ್ಯೋಗಿಗಳ ಮಕ್ಕಳು ಅರ್ಹರಲ್ಲ.

ಇದನ್ನೂ ಓದಿ: Ration Distribution-ಪಡಿತರದಾರರಿಗೆ ಸಿಹಿ ಸುದ್ದಿ: ಇನ್ಮುಂದೆ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ನ್ಯಾಯಬೆಲೆ ಅಂಗಡಿಗಳು ಓಪನ್!

What are the Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ/Aadhar Card
  • 12 ನೇ ತರಗತಿಯ ಅಂಕಪಟ್ಟಿ (2025-26 ಬ್ಯಾಚ್)/12 Marks Card
  • ಐಐಟಿಯಿಂದ ಪ್ರವೇಶ ಪತ್ರ/Entrance Certificate
  • ಮೊದಲ ಸೆಮಿಸ್ಟರ್ ಶುಲ್ಕ ರಶೀದಿ/1 sem receipt
  • ಆದಾಯ ಪ್ರಮಾಣ ಪತ್ರ/Income Certificate
  • ಬ್ಯಾಂಕ್ ಪಾಸ್ ಪುಸ್ತಕ/Bank Passbook
  • ಫೋಟೋ/Photo copy

ಇದನ್ನೂ ಓದಿ: Scholarship Application-ಕಾರ್ಮಿಕರ ಮಕ್ಕಳಿಗೆ 25,000/- ವಿದ್ಯಾರ್ಥಿವೇತನ! ಆನ್‍ಲೈನ್ ಅರ್ಜಿ ಆಹ್ವಾನ!

Panasonic Ratti Chhatr Scholarship

Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ?

ಅರ್ಜಿದಾರ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಿದೆ.

Step-1: ಆಸಕ್ತಿ ಇರುವ ಅರ್ಹ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "Panasonic Ratti Chhatr Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ತದನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

ಇದನ್ನೂ ಓದಿ: Coconut Farm-ತೆಂಗು ಬೆಳೆಗಾರರ ಗಮನಕ್ಕೆ: ಹೊಸ ತೋಟ ಸ್ಥಾಪನೆಗೆ ₹56,000 ವರೆಗೆ ಸಹಾಯಧನ!

Step-3: ಬಳಿಕ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

For More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ: Website Link

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: