School admission- ಉಚಿತವಾಗಿ 12 ಸಾವಿರ ಸೀಟ್ ಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ(school admission) ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದೆ.

School admission- ಉಚಿತವಾಗಿ  12 ಸಾವಿರ ಸೀಟ್ ಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!
school admission-2024

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ(school admission) ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಪ್ರಸ್ತುತ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Agriculture university courses- ಕೃಷಿ ವಿಶ್ವವಿದ್ಯಾನಿಲಯ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ!

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ವಿವರವನ್ನು ಈ ಕೆಳಗೆ ವಿವರಿಸಲಾಗಿದೆ.

School admission application- ಎಲ್ಲಿ ಅರ್ಜಿ ಸಲ್ಲಿಸಬೇಕು?

ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ನಿರ್ದೇಶನಾಲಯದ ಅಧಿಕೃತ ಜಾಲತಾಣದಲ್ಲಿ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದು ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿರುತ್ತದೆ.

Website: https://dom.karnataka.gov.in

ಇದನ್ನೂ ಓದಿ: Revenue Department- ಕಂದಾಯ ಇಲಾಖೆಗೆ ಡಿಜಿಟಲ್ ಸ್ಪರ್ಶ! ಏನಿದು ನೂತನ ಮಾದರಿ? ಇಲ್ಲಿದೆ ಸಂಪೂರ್ಣ ವಿವರ.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕ: 15 ಮಾರ್ಚ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಎಪ್ರಿಲ್ 2024

12000 ಸೀಟುಗಳು  ಲಭ್ಯ:

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಸದರಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಾತಿಗೆ ಸುಮಾರು 12000 ಸೀಟುಗಳು ಲಭ್ಯವಿದ್ದು, ಸದರಿ ಸೀಟುಗಳಿಗೆ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಲು ಅನುಸರಿಸಬೇಕಾದ ಪ್ರವೇಶ ಪರೀಕ್ಷೆ, ವಿದ್ಯಾರ್ಥಿಗಳ ಸಂಖ್ಯೆ, ವರ್ಗವಾರು ಮೀಸಲಾತಿ, ವಿಶೇಷ ವರ್ಗಗಳಿಗೆ ಮೀಸಲಾತಿ ಹಾಗೂ ಪರೀಕ್ಷೆ ನಿಬಂಧನೆ/ಷರತ್ತು/ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ.

ಇದನ್ನೂ ಓದಿ: Free adhar update- ಉಚಿತವಾಗಿ ಆಧಾರ್ ಕಾರ್ಡ ನವೀಕರಣ ಮಾಡಲು ಇನ್ನು 2 ದಿನ ಮಾತ್ರ ಅವಕಾಶ!

ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಇರಬೇಕಾದ ಅರ್ಹತೆಗಳು:-

(1) ಅಭ್ಯರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು.

(2) ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

(3) 09 ರಿಂದ 13 ವಯೋಮಾನದವರಾಗಿರಬೇಕು.

ಇದನ್ನೂ ಓದಿ: Best Home loan- 2024: ಉಚಿತ ಮನೆ ಯೋಜನೆಯಡಿ ರೂ. 1 ಲಕ್ಷ ಸಹಾಯಧನ! ಈ ವಿಧಾನ ಅನುಸರಿಸಿ ಅರ್ಜಿ ಸಲ್ಲಿಸಿ.

Required documents for application- ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:-

(1) ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ಸಂಖ್ಯೆ

(2)ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ

(3)ಜಾತಿ ಮತ್ತು ಆದಾಯ ಪ್ರಮಾಣ ಪತ್ರ

(4)ವಿದ್ಯಾರ್ಥಿಯ ಅಂಗವಿಕಲ ಪ್ರಮಾಣ ಪತ್ರ

ಪ್ರವೇಶ ಪರೀಕ್ಷೆ ವಿಧಾನ :-

(1) ಮೌಲಾನಾ ಆಜಾದ್ ಮಾದರಿ ಶಾಲೆಗಳ ಮಂಜೂರಾತಿ ವಿದ್ಯಾರ್ಥಿಗಳ ಸಂಖ್ಯೆಗಿಂತ ಹೆಚ್ಚು ಅರ್ಜಿಗಳು ಬಂದಲ್ಲಿ ಮಾತ್ರ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು ಇಲ್ಲದಿದ್ದಲ್ಲಿ ನಿಯಮಾನುಸಾರ ಮೆರಿಟ್ ಮತ್ತು ರೋಸ್ಟ‌ರ್ ಪದ್ಧತಿ ಅನುಸಾರ ದಾಖಾಲಾತಿ ಪ್ರಕ್ರಿಯೆಯನ್ನು ಕೈಗೊಳ್ಳುವುದು.

(2) ಆಯ್ಕೆಗೆ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳೇ ನೇರ ಮಾನದಂಡವಾಗಿರುತ್ತದೆ.

(3) ಪ್ರವೇಶ ಪರೀಕ್ಷೆಯು 100 ಅಂಕಗಳ ಬಹು ಆಯ್ಕೆ ಮಾದರಿಯಲ್ಲಿರುತ್ತದೆ.

(4) ಪ್ರಶ್ನೆ ಪತ್ರಿಕೆಯು ಕನ್ನಡ, ಉರ್ದು ಮತ್ತು ಇಂಗ್ಲೀಷ್ ಭಾಷೆಯಲ್ಲಿದ್ದು, 100 ಅಂಕದ 100 ಪ್ರಶ್ನೆಗಳನ್ನು ಒಳಗೊಂಡಿದ್ದು, ಸದರಿ ಪ್ರಶ್ನೆಗಳನ್ನು ಉತ್ತರಿಸಲು 120 ನಿಮಿಷ ಕಾಲಾವಕಾಶ ನೀಡುವುದು.

(5) ಶೇ.90% ಪ್ರಶ್ನೆಗಳು 4 ಮತ್ತು 5 ನೇ ತರಗತಿಯ ಪಠ್ಯಾಧಾರಿತವಾಗಿರುತ್ತದೆ.

(6) ನಿಗಧಿ ಪಡಿಸಿದ ಮಂಜೂರಾತಿ ಸಂಖ್ಯೆಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತವಾದರೆ ಮಾತ್ರ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗುವುದು.

ಅರ್ಜಿ ಸಲ್ಲಿಸಲು ಲಿಂಕ್: Apply Now
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್: Click here
ಅಧಿಕೃತ ಅಧಿಸೂಚನೆ ಪ್ರತಿ: Download Now