Free sewing machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free sewing machine application: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಅರ್ಹ ಅರ್ಜಿದಾರಿಂದ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ

Free sewing machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!
sewing machine application-2024

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಅರ್ಹ ಅರ್ಜಿದಾರಿಂದ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಮಹಿಳೆಯರಿಗೆ ಅರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸ್ವ-ಉದ್ಯೋಗ ಆರಂಭಿಸಲು ಉಚಿತ ಹೊಲಿಗೆ ಯಂತ್ರಗಳನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ನೀಡಲಾಗುತ್ತದೆ.

ಈ ಮೊದಲು ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಗದಗ, ಯಾದಗಿರಿ, ಬೆಂಗಳೂರು, ಬೀದರ್, ರಾಯಚೂರು, ಮಂಡ್ಯ, ಚಿಕ್ಕಮಗಳೂರು, ಮೈಸೂರು, ತುಮಕೂರು ಜಿಲ್ಲೆಯ ಅರ್ಜಿ ಆಹ್ವಾನಿಸಲಾಗಿತ್ತು ಈಗ ಕೋಲಾರ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಯಾರೆಲ್ಲ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಬವುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

Free sewing machine application-ಯಾರೆಲ್ಲ ಅರ್ಜಿ ಸಲ್ಲಿಸಬವುದು?

ಈ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ ಪಡೆಯಲು ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು  ಹೊರತುಪಡಿಸಿ ಹೊಲಿಗೆ (ಟೈಲರಿಂಗ್) ವೃತ್ತಿ ಮಾಡುತ್ತಿರುವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದು.

Free sewing machine application documents-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

(1) ಪಾಸ್ಪೋರ್ಟ್ ಗಾತ್ರದ ಭಾವಚಿತ್ರ (in JPG format)

(2) ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣಪತ್ರ / ಎಸ್.ಎಸ್.ಎಲ್.ಸಿ ಅಂಕಪಟ್ಟಿ / ಇನ್ನಿತರ ಪ್ರಮಾಣಪತ್ರ) (in PDF file)

(3) ಶೈಕ್ಷಣಿಕ ಅರ್ಹತೆ (ವರ್ಗಾವಣೆ ಪ್ರಮಾಣಪತ್ರ / ಅಂಕಪಟ್ಟಿ) (in PDF file)

(4) ಜಾತಿ ಪ್ರಮಾಣ ಪತ್ರ (ಪ.ಜಾ , ಪ.ಪಂ ಮತ್ತು ಅಲ್ಪಸಂಖ್ಯಾತರವರಿಗೆ ಮಾತ್ರ) (in PDF file),

ಇದನ್ನೂ ಓದಿ: Labour card application-ಲೇಬರ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ! ಒಂದು ಕಾರ್ಡ ಅನೇಕ ಪ್ರಯೋಜನಗಳು.

(5) ಪಡಿತರ ಚೀಟಿ (in PDF file)

(6) ಆಯಾ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಹೊಲಿಗೆ (ಟೈಲರಿಂಗ್) ವೃತ್ತಿ ಮಾಡುತ್ತಿರುವ ಬಗ್ಗೆ ಧೃಢೀಕರಣ ಪ್ರಮಾಣಪತ್ರ (in PDF file).

ಇದನ್ನೂ ಓದಿ: Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!

Free sewing machine application last date-ಅರ್ಜಿ ಸಲ್ಲಿಸಲು ಕೊನೆಯ ದಿನ:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15-01-2024 ಕೊನೆಯ ದಿನಾಂಕವಾಗಿದೆ.

Free sewing machine application link-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಆನ್ಲೈನ್ ಮೂಲಕ ಕೊನೆಯ ದಿನಾಂಕದ ಒಳಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಸಲು ಲಿಂಕ್: Apply Now

ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಕಚೇರಿಯನ್ನು ಭೇಟಿ ಮಾಡಿ.