- Advertisment -
HomeBreaking NewsSheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Last updated on December 9th, 2024 at 12:53 pm

ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಕುರಿ, ಮೇಕೆ ಘಟಕಕ್ಕೆ ಶೇ 90 ಸಹಾಯಧನ ಪಡೆಯಲು(Sheep and Wool Development Board) ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರತಿ ವರ್ಷದಂತೆ ಈ ವರ್ಷವು ಸಹ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಕುರಿ, ಮೇಕೆ ಸಾಕಾಣಿಕೆಗೆ(Kuri sakanike yojane) ಉತೇಜನವನ್ನು ನೀಡಲು ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000!

ಗಿರಿಜನ ಉಪಯೋಜನೆಯಡಿಯಲ್ಲಿ(kuri sakanike subsidy yojana) ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ ಅರ್ಜಿದಾರರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅಗತ್ಯ ದಾಖಲಾತಿಗಳ ಸಮೇತ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವುದು ಹೇಗೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

Sheep and goat farming Subsidy Amount Details-ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

ಪ್ರಸಕ್ತ 2024-25 ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ವತಿಯಿಂದ ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ, ಮೇಕೆ ಘಟಕಕ್ಕೆ(10+01) ಶೇಕಡ 90% ಅಂದರೆ ರೂ 59,400 ವರೆಗೆ ಸಹಾಯಧನ ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: SSP scholarship 2024-ವಿದ್ಯಾರ್ಥಿ ವೇತನ ಪಡೆಯಲು ಹೊಸ ಆದೇಶ ಪ್ರಕಟ!

Sheep and goat farming

Who can apply for this scheme-ಅರ್ಜಿಯನ್ನು ಸಲ್ಲಿಸಲು ಅರ್ಹರು:

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ಬೆಂಗಳೂರು ಈ ಕಚೇರಿಯಲ್ಲಿ ನೋಂದಾಯಿಸಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಹಾಗೂ ಈ ಹಿಂದಿನ ವರ್ಷಗಳಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಇದೇ ಉದ್ದೇಶಕ್ಕಾಗಿ ಸಹಾಯಧನ ಸೌಲಭ್ಯ ಪಡೆಯದೆ ಇರುವ ಪರಿಶಿಷ್ಟ ಪಂಗಡ /ಜಾತಿ ವರ್ಗದ ಆಸಕ್ತ ಸದಸ್ಯರುಗಳು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿಯನ್ನು ಹೊಂದಿರಬೇಕು.

ಇದನ್ನೂ ಓದಿ: Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

Sheep and goat farm

How to apply-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಯವರಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನಿಮ್ಮ ಜಿಲ್ಲೆಯ ಉಪನಿರ್ದೇಶಕರು, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು.

Required documents for application-ಅರ್ಜಿ ಸಲ್ಲಿಸಲು ದಾಖಲೆಗಳು:

1) ಅರ್ಜಿ ನಮೂನೆ
2) ಅರ್ಜಿದಾರರ ಆಧಾರ್ ಕಾರ್ಡ
3) ಬ್ಯಾಂಕ್ ಪಾಸ್ ಬುಕ್
4) ಪೋಟೋ
5) ಜಮೀನಿನ ಪಹಣಿ/RTC

ಇದನ್ನೂ ಓದಿ: KMF Milk Incentive- ರಾಜ್ಯ ಸರಕಾರದಿಂದ ರೈತರಿಗೆ 649 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

For more information-ಈ ಯೋಜನೆಯಡಿ ಸಹಾಯಧನ ಪಡೆಯಲು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪಯುಕ್ತ ಮಾಹಿತಿ:

ನಿಗಮದ ಅಧಿಕೃತ ವೆಬ್ಸೈಟ್: Click here
ಸಹಾಯವಾಣಿ: 1902
ಜಿಲ್ಲಾವಾರು ಅಧಿಕಾರಿ ಮತ್ತು ಕಚೇರಿಗಳ ವಿವರ: Click here

- Advertisment -
LATEST ARTICLES

Related Articles

- Advertisment -

Most Popular

- Advertisment -