Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

December 9, 2025 | Siddesh
Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!
Share Now:

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ(Shrama Shakti Yojana) ವತಿಯಿಂದ ಶ್ರಮಶಕ್ತಿ ಯೋಜನೆಯ ಅಡಿಯಲ್ಲಿ ಕ್ರೈಸ್ತ ಕುಲಕಸುಬುದಾರರು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಅಥವಾ ಸಣ್ಣ ವ್ಯಾಪಾರಗಳನ್ನು ಪ್ರಾರಂಭಿಸಲು ರೂ.50,000 ರ ದವರೆಗೆ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸರ್ಕಾರವು ಉದ್ಯೋಗ ಅವಕಾಶವನ್ನು ಕಲ್ಪಿಸಿ ಆರ್ಥಿಕವಾಗಿ ಹಿಂದುಳಿದ ವರ್ಗದ ಯುವಕರು–ಯುವತಿಯರಿಗೆ(government subsidy program) ಸ್ವಾವಲಂಬನೆಯ ಮಾರ್ಗವನ್ನು ತೆರೆದು ಕೊಡಲು ಶ್ರಮಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Mahindra Sarathi Scholarship-ಮಹೀಂದ್ರಾ ಸಾರಥಿ ಅಭಿಯಾನದ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ಈ ಯೋಜನೆಯ ಅಡಿಯಲ್ಲಿ ಪ್ರಯೋಜನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಯಾವೆಲ್ಲ ವಿಧಾನಗಳನ್ನು ಅನುಸರಿಸಬೇಕು? ಈ ಯೋಜನೆಯ ಮುಖ್ಯ ಉದ್ದೇಶಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Subsidy Amount Under This Scheme-ಶ್ರಮ ಶಕ್ತಿ ಯೋಜನೆ ಸಹಾಯಧನದ ವಿವರ:

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಶ್ರಮಶಕ್ತಿ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ರೂ.50,೦೦೦ ರ ದವರೆಗೆ ಸಹಾಯಧನ ಪಡೆಯಬಹುದು (50% ಸಾಲ ಮತ್ತು 50% ಅನುದಾನ). ಈ ಸಾಲವನ್ನು ಒಂದು ತಿಂಗಳ ನಂತರ ಪ್ರತಿ ತಿಂಗಳು ಸಮಾನವಾಗಿ 36 ಕಂತುಗಳಲ್ಲಿ 4% ಬಡ್ಡಿದರದಲ್ಲಿ ತೀರಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

Last date to apply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಡಿಸೆಂಬರ್ 2025

Purpose Of This Scheme-ಯೋಜನೆಯ ಮುಖ್ಯ ಉದ್ದೇಶಗಳಾವುವು?

ಕೌಶಲ್ಯಾಭಿವೃದ್ಧಿಗೆ ಉತ್ತೇಜನ: ಉದ್ಯೋಗ ಮಾರುಕಟ್ಟೆಯಲ್ಲಿ ಅಗತ್ಯ ಇರುವ ತಾಂತ್ರಿಕ ಮತ್ತು ವೃತ್ತಿಪರ ಕೌಶಲ್ಯಗಳಲ್ಲಿ ಯುವಕರನ್ನು ತಯಾರಿಸುವುದು.

ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ: ಸಣ್ಣ ವ್ಯಾಪಾರ, ಸೇವಾ ಉದ್ಯಮ, ಯಂತ್ರೋಪಕರಣ ಆಧಾರಿತ ಕಾರ್ಯಗಳಿಗೆ ಆರಂಭಿಕ ನೆರವು ಒದಗಿಸುವುದು.

ಉದ್ಯೋಗ ಸೃಷ್ಟಿ: ತರಬೇತಿ ಪಡೆದ ಯುವಕರು ಉದ್ಯೋಗ ಪಡೆಯುವುದರಿಂದ ಹಾಗೂ ಕೆಲವರು ಸ್ವಂತ ಉದ್ಯಮ ಆರಂಭಿಸುವುದರಿಂದ ಹೊಸ ಉದ್ಯೋಗಾವಕಾಶಗಳು ನಿರ್ಮಾಣವಾಗುವುದು.

ಸಮಾಜದ ಆರ್ಥಿಕ ಅಭಿವೃದ್ಧಿ: ಹಿಂದುಳಿದ ವರ್ಗದ ಕುಟುಂಬಗಳ ಆದಾಯ ವೃದ್ಧಿಗೆ ಮಾರ್ಗ ನಿರ್ಮಿಸುವುದು.

ಇದನ್ನೂ ಓದಿ: Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Who Can Apply For This Scheme-ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

A) ಅರ್ಜಿದಾರರು ಕರ್ನಾಟಕದ ಕ್ರಿಶ್ಚಿಯನ್ ಸಮುದಾಯಕ್ಕೆ (ಅಲ್ಪಸಂಖ್ಯಾತ) ಸೇರಿರಬೇಕು.

B) ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

C) ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.

D) ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ. 6.00 ಲಕ್ಷ ಮೀರಿರಬಾರದು.

E) ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿದ್ದರೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

F) ಈ ಯೋಜನೆಗೆ ಅರ್ಜಿಸಲ್ಲಿಸುವ ಯಾವುದೇ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಈ ಹಿಂದೆ KMDC/KCCDC ಯಿಂದ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದು. (ಅರಿವು ಮತ್ತು ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಗಳನ್ನು ಹೊರತುಪಡಿಸಿ)

ಇದನ್ನೂ ಓದಿ: Kotak Scholarship-ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ₹1.5 ಲಕ್ಷ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

shrama shakti application

ಇದನ್ನೂ ಓದಿ: Best Organic Farmer-ಉತ್ತಮ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡ ರೈತರಿಗೆ 50,000/- ಮೊತ್ತದ ಪ್ರಶಸ್ತಿ!

Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

1) ಯೋಜನಾ ವರದಿ

2) ಫಲಾನುಭವಿಯ ಇತ್ತೀಚಿನ ಪಾಸ್‌ಪೋರ್ಟ್‌-ಅಳತೆಯ ಫೋಟೋ

3) ಜಾಮೀನುದಾರರ ಗುರುತಿನ/ವಿಳಾಸ ದಾಖಲೆ

4) ಜಾಮೀನು ನೀಡುವವರ ಸ್ವಯಂ ಘೋಷಣೆ ಪತ್ರ

5) ಜಾಮೀನುದಾರರ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೋ

6) ಅರ್ಜಿದಾರನ /ಳ ಸ್ವಯಂ ಘೋಷಣೆ ಪತ್ರ

ಇದನ್ನೂ ಓದಿ: Solar Pumpset Subsidy-ಶೇ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಇಂದೇ ಅರ್ಜಿ ಸಲ್ಲಿಸಿ!

Online Application- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಆಯ್ಕೆಯಾರ ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳನ್ನು ತಯಾರು ಮಾಡಿಕೊಂಡು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು.

Step-1: ಅರ್ಜಿದಾರ ಅಭ್ಯರ್ಥಿಯು ಮೊದಲಿಗೆ "Shrama Shakthi Online Application" ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ "ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ"ದ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ತದನಂತರ ಅದೇ ಪುಟದಲ್ಲಿ ಕಾಣುವ "ಶ್ರಮ ಶಕ್ತಿ ಯೋಜನೆ" ಮುಂದೆ ಕಾಣಿಸುವ "ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಇಲ್ಲಿ ಮೊದಲ ಬಾರಿಗೆ ಈ ವೆಬ್ಸೈಟ ಅನ್ನು ಪ್ರವೇಶ ಮಾಡುತ್ತಿರುವ ಅರ್ಜಿದಾರರು ಹೊಸ ಬಳಕೆದಾರರ ? ಇಲ್ಲಿ ನೋಂದಾಯಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ OTP ಅನ್ನು ಪಡೆದು ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಂಡು ಪಾಸ್ವರ್ಡ್ ರಚನೆ ಮಾಡಿಕೊಂಡು ಲಾಗಿನ್ ಆಗಬೇಕು.

Step-4: ಲಾಗಿನ್ ಆದ ನಂತರ ಅಧಿಕೃತ ಅರ್ಜಿ ನಮೂನೆ ಓಪನ್ ಆಗುತ್ತದೆ. ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: TATA Scholarship-ಟಾಟಾ ಗ್ರೂಪ್‌ ಕಂಪನಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15,000/- ವಿದ್ಯಾರ್ಥಿವೇತನ!

More Information-ಈ ಯೋಜನೆಯ ಬಗ್ಗೆ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: