Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeNew postsHow to get a solar pump set subsidy-2024: ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್...

How to get a solar pump set subsidy-2024: ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು?

ರೈತರು ಕೃಷಿ ಚಟುವಟಿಗೆ ಬಳಕೆ ಮಾಡುವ ಪಂಪ್ ಸೆಟ್ ಗಳಿಗೆ ಸರಕಾರದಿಂದ ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಗಳನ್ನು(solar pump set subsidy) ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್‌ಸೆಟ್ ಯೋಜನೆ (ಕುಸುಮ್ – ಬಿ)ಯಡಿ(Solar pumpset) ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೋಲಾರ್ ಪಂಪ್ ಸೆಟ್ ಅಳವಡಿಸಿಕೊಳ್ಳಲು ಆಸಕ್ತಿಯಿರುವ ರೈತರು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದಾಗಿದ್ದು, ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು ಇತ್ಯಾದಿ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Free hostel admission-2024: ಉಚಿತ ವಿದ್ಯಾರ್ಥಿ ನಿಲಯ ಮತ್ತು ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ನಮೂನೆ.

How to get a solar pump set subsidy- 40,000 ಸೌರ ಕೃಷಿ ಪಂಪ್‌ಸೆಟ್ ಗುರಿ:

ಸೋಲಾರ್ ಪಂಪ್‌ಸೆಟ್ ಯೋಜನೆ (ಕುಸುಮ್ – ಬಿ) ಅನುಸ್ಥಾನ ಇಲಾಖೆಯಿಂದ ಈ ವರ್ಷ ಅಂದರೆ 2024-25ನೇ ಸಾಲಿನಲ್ಲಿ 40,000 ಸೌರ ಕೃಷಿ ಪಂಪ್‌ಸೆಟ್ ಅಳವಡಿಸುವ ಗುರಿ ಹಾಕಿಕೊಳ್ಳಲಾಗಿದೆ ಸೋಲಾರ್ ಪಂಪ್ ಸೆಟ್ ಅವಶ್ಯಕತೆ ಇದ್ದವರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.

subsidy for Solar pumpset – ಈ ಯೋಜನೆಯಡಿ ಸೋಲಾರ್ ಪಂಪ್ ಸೆಟ್  ಗೆ ಎಷ್ಟು ಸಹಾಯಧನ ಪಡೆಯಬಹುದು:

3 ಹೆಚ್.ಪಿ.ಯಿಂದ 10 ಹೆಚ್.ಪಿ. ವರೆಗಿನ ಸಾಮರ್ಥ್ಯದ ತೆರೆದ / ಕೊರೆದ ಬಾವಿಗಳಿಗೆ ಸೌರ ಕೃಷಿ ಪಂಪ್‌ಸೆಟ್‌ಗಳನ್ನು ಅಳವಡಿಸಲು ಸಹಾಯಧನ ದೊರೆಯುವುದು. ರೈತರ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸಹಾಯಧನವನ್ನು ಶೇಕಡ 30 ರಿಂದ ಶೇಕಡ 50ಕ್ಕೆ ಹೆಚ್ಚಿಸಿದ್ದು. ಕೇಂದ್ರ ಸರ್ಕಾರದಿಂದ ಶೇಕಡ 30 ರಷ್ಟು ಸಹಾಯಧನ ದೊರೆಯಲಿದ್ದು ರೈತರು ಭರಿಸಬೇಕಾಗಿರುವುದು ಕೇವಲ ಶೇಕಡ 20 ರಷ್ಟು ಮಾತ್ರ.

ಅಂದರೆ ಶೇ 80 ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಅನ್ನು ರೈತರು ಅಳವಡಿಸಿಕೊಳ್ಳಬಹುದು ಉದಾಹರಣೆಗೆ ಹೇಳುವುದಾದರೆ ಒಟ್ಟು ಸೋಲಾರ್ ಅಳವಡಿಸಿಕೊಳ್ಳಲು 1 ಲಕ್ಷ ಖರ್ಚು ಅಯಿತು ಎಂದರೆ ರೈತರು 20,000 ಪಾವತಿ ಮಾಡಬೇಕು ಉಳಿಕೆ ಹಣವನ್ನು ರಾಜ್ಯ ಮತ್ತು ಕೇಂದ್ರ ಸರಕಾರವು ಸಹಾಯಧನದ ರೂಪದಲ್ಲಿ ಪಾವತಿ ಮಾಡುತ್ತವೆ.

ಇದನ್ನೂ ಓದಿ: Fast food business- ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Solar pumpset application- ಅರ್ಜಿ ಎಲ್ಲಿ ಸಲ್ಲಿಸಬೇಕು?

ಆಸಕ್ತ ಅರ್ಹ ರೈತರು ಈ ಯೋಜನೆಗೆ ಸಂಬಂಧಪಟ್ಟ ಅಧಿಕೃತ ಸೌರಮಿತ್ರ(souramitra.com) ವೆಬ್ಸೈಟ್ ಅನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ವಿವರ ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕೆಳಗಿನ ವಿಧಾನವನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು.

Step-1: ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಸೌರಮಿತ್ರ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು. ಬಳಿಕ ಒಂದು ನಿಯಮಗಳ ನೋಟಿಪಿಕೇಶನ್ ತೋರಿಸುತ್ತದೆ ಅದನ್ನು ಸಂಪೂರ್ಣವಾಗಿ ಓದಿಕೊಂಡು close ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ತದನಂತರ “ನೀವು ಈಗಾಗಲೇ ಅಕ್ರಮ ಸಂಪಕ೯ದ ನೀರಾವರಿ ಪಂಪ್ ಸೆಟ್ ನ ಸಕ್ರಮಕ್ಕಾಗಿ ವಿಸಕಂಗೆ ಹಣ ಪಾವತಿಸಿದ ಗ್ರಾಹಕರೇ?” ಎಂದು ಪ್ರಶ್ನೆ ಕೇಳುತ್ತದೆ ಇದಕ್ಕೆ “ಇಲ್ಲ/No” ಎಂದು ಕ್ಲಿಕ್ ಮಾಡಿ ಅರ್ಜಿದಾರರ ಅಧಾರ್ ವಿವರ ಮತ್ತು ಜಮೀನಿನ ವಿವರ ಇತ್ಯಾದಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ “ಅರ್ಜಿಯನ್ನು ಸಲ್ಲಿಸಿರಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: SSC Jobs Notification-2024: SSC 933 ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಣೆ

ರೈತರುಗಳಿಗೆ ಈ ಕೆಳಕಂಡ ಆದ್ಯತೆಗಳ ಮೇರೆಗೆ ಸೌರ ಕೃಷಿ ಪಂಪ್‌ ಸೆಟ್ ಗಳನ್ನು ಸ್ಥಾಪನೆ ಮಾಡಿಕೊಳ್ಳಬಹುದು:

ಆದ್ಯತೆ – 1: ರೈತರು ಈಗಾಗಲೇ ಅನಧಿಕೃತ ಪಂಪ್‌ ಸೆಟ್ ಗಳನ್ನು ಸಕ್ರಮಗೊಳಿಸುವ (UNIP) ಯೋಜನೆಯಡಿಯಲ್ಲಿ ರೂ. 10,000/- ಕ್ಕಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್‌ಗಿಂತ ಹೆಚ್ಚು ದೂರದಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.

ಆದ್ಯತೆ – 2: ರೈತರು ಈಗಾಗಲೇ ಅನಧಿಕೃತ ಪಂಪ್‌ ಸೆಟ್ ಗಳನ್ನು ಸಕ್ರಮಗೊಳಿಸುವ (UNIP) ಯೋಜನೆಯಡಿಯಲ್ಲಿ ರೂ. 50/- ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ನೋಂದಾಯಿಸಿದ್ದು ಮತ್ತು ಇವರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್‌ಗಿಂತ ಹೆಚ್ಚು ದೂರದಲ್ಲಿರುವವರಿಗೆ ಎರಡನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.

ಇದನ್ನೂ ಓದಿ: KPSC WR Dept. Jobs Notification- ಜಲಸಂಪನ್ಮೂಲ ಇಲಾಖೆ ನೇಮಕಾತಿ 313 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಆದ್ಯತೆ – 3: ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್‌ಗಿಂತ ಹೆಚ್ಚು ದೂರವಿದ್ದು ಮತ್ತು ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ಮೂರನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.

ಆದ್ಯತೆ – 4: ಈ ಯೋಜನೆಯಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ರೈತರುಗಳ ಕೊರೆದ/ತೆರೆದ ಬಾವಿಗಳು ಪರಿವರ್ಥಕ (Transformer) ಕೇಂದ್ರದಿಂದ 500 ಮೀಟರ್‌ಗಿಂತ ಒಳಗಿದ್ದು ಮತ್ತು ಹಾಗೂ ಶೇಕಡ 20 ರಷ್ಟು ಹಣ ಪಾವತಿಸುವವರಿಗೆ ನಾಲ್ಕನೇ ಆದ್ಯತೆಯಲ್ಲಿ ಹಾಗೂ ಈ ವರ್ಗದಲ್ಲಿ ನೋಂದಾಯಿಸುವ ರೈತರಿಗೆ ಮೊದಲು ನೋಂದಾಯಿಸಿದವರಿಗೆ ಮೊದಲು ನೀಡುವ ಆಧಾರದ ಮೇರೆಗೆ (First Come First Serve basis) ಅಳವಡಿಸಲಾಗುವುದು.

ವಿಶೇಷ ಸೂಚನೆ: ಕುಟುಂಬಕ್ಕೆ ಒಂದು ಸೌರ ಕೃಷಿ ಪಂಪ್‌ ಸೆಟ್‌ ಸೀಮಿತಗೊಳಿಸಲಾಗಿದೆ.

ಇದನ್ನೂ ಓದಿ: Loan interest- ರೈತರು ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿ!

ಇನ್ನು ಹೆಚ್ಚಿನ ಮಾಹಿತಿಗಾಗಿ:

ಅರ್ಜಿ ಸಲ್ಲಿಸಲು ಲಿಂಕ್: Apply Now
ಸಹಾಯವಾಣಿ: 080-22202100

Most Popular

Latest Articles

- Advertisment -

Related Articles