SSLC Exam-ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ KSEEB ಮಂಡಳಿ!

May 4, 2025 | Siddesh
SSLC Exam-ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ KSEEB ಮಂಡಳಿ!
Share Now:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1 ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು, ಉತ್ತರಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ - 2 ನೋಂದಣಿ ಮತ್ತು ಪರೀಕ್ಷೆ ದಿನಾಂಕಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸಲು ಮಂಡಳಿಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಈಗಾಗಲೇ ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1 ಪಲಿತಾಂಶ ಪ್ರಕಟವಾಗಿದ್ದು ಪ್ರಶ್ನೆಪತ್ರಿಕೆ ಮೌಲ್ಯಮಾಪನದಲ್ಲಿ ಗೊಂದಲ ಇದ್ದವರು ಮತ್ತೆ ಮರು ಮೌಲ್ಯಮಾಪನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಂಡಳಿಯಿಂದ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದ್ದು ಇದರ ಜೊತೆಗೆ ವಿದ್ಯಾರ್ಥಿಗಳು ಉತ್ತರಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಸಹ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶವಿದ್ದು ಇದರ ಕುರಿತು ಮಂಡಳಿಯಿಂದ ಹೊರಡಿಸಿರುವ ಅಧಿಕೃತ ಮಾಹಿತಿಯನ್ನು ಸಹ ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Pumpset- ರೈತರಿಗೆ ಸಿಹಿ ಸುದ್ದಿ: 'ನವೀಕೃತ ಶೀಘ್ರ ಸಂಪರ್ಕ ಯೋಜನೆ'ಯಡಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ!

ಈ ಲೇಖನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1 ಮರು ಮೌಲ್ಯಮಾಪನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಉತ್ತರಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಅನುಸರಿಸಬೇಕಾದ ಕ್ರಮಗಳ ಮಾಹಿತಿ ಹಾಗೂ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ - 2 ಅನ್ನು ಬರೆಯಲು ನೋಂದಣಿಯನ್ನು ಮಾಡಿಕೊಳ್ಳುವುದು ಹೇಗೆ? ಪರೀಕ್ಷೆ ದಿನಾಂಕ ಯಾವುದು? ಇನ್ನಿತರೆ ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

SSLC Exam Revaluation Onlien Application-SSLC ಪರೀಕ್ಷೆ -1ರ ಮರು ಮೌಲ್ಯಮಾಪನಕ್ಕೆ ಆನ್ಲೈನ್ ಅರ್ಜಿ:

ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಫಲಿತಾಂಶವನ್ನು https://karresults.nic.in ನಲ್ಲಿ ಪಡೆಯಬಹುದಾಗಿದೆ. ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಮಾಪನ ಈ ಸೇವೆಗಳನ್ನು ಆನ್‌ಲೈನ್ ಮೂಲಕ ಈಗಾಗಲೇ ನೀಡಲಾಗುತ್ತಿದ್ದು, ಪ್ರಸ್ತುತ ವರ್ಷದಿಂದ ಸದರಿ ಸೇವೆಗಳನ್ನು ರಾಜ್ಯ ಸರ್ಕಾರದ Karnataka One ಮೊಬೈಲ್ ಆಪ್ ಮೂಲಕವೂ ಸಹ ಸೇವೆಯನ್ನು ಒದಗಿಸಲಾಗುತ್ತಿದೆ.

ವಿದ್ಯಾರ್ಥಿಗಳು ತಮ್ಮ Android ಮೊಬೈಲ್ Playstore ಮೂಲಕ ಸದರಿ ಅಪ್‌ನ್ನು ಡೌನ್‌ಲೋಡ್ ಮಾಡಿಕೊಂಡು ಸದರಿ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಸದರಿ ಸೇವೆಯ ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ. ಮಾರ್ಚ್/ಏಪ್ರಿಲ್ 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಬಹುದು,

ಇದನ್ನೂ ಓದಿ: Car Subsidy-ಸಬ್ಸಿಡಿಯಲ್ಲಿ ಕಾರ್ ಮತ್ತು ಆಟೋ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

SSLC Exam Revaluation Mobile App-SSLC ಪರೀಕ್ಷೆ - 1 ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೊಬೈಲ್ ಅಪ್ಲಿಕೇಶನ್:

ವಿದ್ಯಾರ್ಥಿಗಳು ಇಲ್ಲಿ ಕ್ಲಿಕ್ ಮಾಡಿ ಗೂಗಲ್ ಪ್ಲೈ ಸ್ಟೋರ್ ಪ್ರವೇಶ ಮಾಡಿ Karnataka One ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ವಿವರವನ್ನು ಭರ್ತಿ ಮಾಡಿ ಲಾಗಿನ್ ಅಗಿ ನಂತರ ಇಲ್ಲಿ ಕೇಳಲು ವಿವರವನ್ನು ಹಾಕಿ ಈ ಮೊಬೈಲ್ ಅಪ್ಲಿಕೇಶನ್ ಮೂಲಕ SSLC ಪರೀಕ್ಷೆ - 1 ಮರು ಮೌಲ್ಯಮಾಪನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

Karnataka One App-ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಲಿಂಕ್- Download Now
Helpline-ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ- 080-23310075, 080-23310076
ಅಧಿಕೃತ ಮಾರ್ಗಸೂಚಿ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ-Download Now

ಇದನ್ನೂ ಓದಿ: New Ration Card-ಹೊಸ BPL ಮತ್ತು APL ರೇಷನ್ ಕಾರ್ಡ ಪಡೆಯಲು ಅರ್ಹ ಸಲ್ಲಿಸಲು ಅವಕಾಶ!

SSLC Exam Revaluation-ಮರು ಮೌಲ್ಯಮಾಪನಕ್ಕೆ ನಿಗದಿಪಡಿಸಿದ ಪ್ರಮುಖ ದಿನಾಂಕಗಳು:

SSLC Exam Revaluation

ಇದನ್ನೂ ಓದಿ: Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

SSLC Supplementary Exam-2025:ಎಸ್‌ಎಸ್‌ಎಲ್‌ಸಿ ಪರೀಕ್ಷೆ - 2 ನೋಂದಣಿ ಮತ್ತು ಪರೀಕ್ಷೆ ದಿನಾಂದ ವಿವರ ಹೀಗಿದೆ:

ಎಸ್‌ಎಸ್‌ಎಲ್‌ಸಿ ಪರೀಕ್ಷೆ - 2 ಇದೇ ಮೇ 26 ರಿಂದ ಜೂನ್‌ 2ರ ವರೆಗೆ ನಡೆಯಲಿದೆ. ಅನುತ್ತೀರ್ಣರಾದವರು, ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವವರು, ಖಾಸಗಿಯಾಗಿ ಪರೀಕ್ಷೆ ತೆಗೆದುಕೊಳ್ಳುವವರು ಮೇ 10ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು.

ಪರೀಕ್ಷೆ - 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಇರುವುದಿಲ್ಲ. ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವವರು ಶುಲ್ಕ ಪಾವತಿಸಬೇಕು ಎಂದು ಮಂಡಳಿಯಿಂದ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ.

SSLC Supplementary Time Table-ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಅಧಿಕೃತ ವೇಳಾಪಟ್ಟಿ-Download Now

ಇದನ್ನೂ ಓದಿ: SSLC Result-ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ! ಇಲ್ಲಿದೆ ವೆಬ್ಸೈಟ್ ಲಿಂಕ್!

SSLC Supplementary Information-ಈ ಕುರಿತು ವಿದ್ಯಾರ್ಥಿಗಳಿಗೆ ಮಂಡಳಿಯಿಂದ ನೀಡಿರುವ ಪ್ರಮುಖ ಸೂಚನೆಗಳು:

  • 03.06.2025 (ಮಂಗಳವಾರ)ರಂದು ಜೆ.ಟಿ.ಎಸ್. (56, 57, 58 & 59 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.
  • ವಿಷಯ ಸಂಕೇತ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ.
  • ಹಿಂದೂಸ್ಥಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.
  • ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು. ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 30 ನಿಮಿಷಗಳನ್ನು ನೀಡಲಾಗುವುದು!
  • ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00ರವರೆಗೆ 'ವಧಿ ನಿಗದಿಪಡಿಸಿದೆ.
  • ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕಿ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
  • ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.00 ರಿಂದ 12.15ರವರೆಗೆ ನಡೆಯಲಿದೆ. ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

WhatsApp Group Join Now
Telegram Group Join Now
Share Now: