- Advertisment -
HomeNewsSSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!

SSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ಜಾಲತಾಣದಲ್ಲಿ ಅಂತಿಮ SSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು(SSLC and PUC time table) ಪ್ರಕಟಣೆ ಮಾಡಲಾಗಿದ್ದು ವಿದ್ಯಾರ್ಥಿಗಳು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ವೇಳಾಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬಹುದು.

ರಾಜ್ಯದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಯಲಿರುವ ಎಸ್‌ಎಸ್‌ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು(sslc and puc exam) ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯ ತಂತ್ರಾಂಶದಲ್ಲಿ ಬಿಡುಗಡೆ ಮಾಡಲಾಗಿದೆ.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯ ಮಾಹಿತಿಯ ಪ್ರಕಾರ 01 ಮಾರ್ಚ್‌ 2025 ರಿಂದ 20 ಮಾರ್ಚ್‌ 2025ರ ವರೆಗೆ ಪಿಯುಸಿ ಪರೀಕ್ಷೆ ಹಾಗೂ 21 ಮಾರ್ಚ್‌ 2025 ರಿಂದ 04 ಏಪ್ರಿಲ್‌ 2025 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ ಎಂದು ಅಧಿಕೃತ ವೇಳಾಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

SSLC Time Table- ಎಸ್‌ಎಸ್‌ಎಲ್‌ಸಿ/SSLC ಪರೀಕ್ಷಾ-1 ರ ವೇಳಾಪಟ್ಟಿ:

sslc time table

ಇದನ್ನೂ ಓದಿ: Gruha Jyothi Yojana- ಮನೆಗೆ ಉಚಿತ ವಿದ್ಯುತ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

sslc

PUC Time Table-ದ್ವಿತೀಯ ಪಿಯುಸಿ/PUC ಪರೀಕ್ಷಾ-1ರ ವೇಳಾಪಟ್ಟಿ ವಿವರ ಹೀಗಿದೆ:

puc

ಇದನ್ನೂ ಓದಿ: Asha workers-ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ! ಮಾಸಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ!

puc

ಪ್ರಮುಖ ಸೂಚನೆಗಳು:

1) 05.04.2025 (ಶನಿವಾರ)ರಂದು ಜೆ.ಟಿ.ಎಸ್. (56, 57, 58 & 59 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.

2) ವಿಷಯ ಸಂಕೇತ 15 ಮತ್ತು 69ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ.

3) ಹಿಂದೂಸ್ಥಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ * ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.

ಇದನ್ನೂ ಓದಿ: Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

4) ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 30 ನಿಮಿಷಗಳನ್ನು ನೀಡಲಾಗುವುದು.

5) ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00ರವರೆಗೆ ಅವಧಿ ನಿಗದಿಪಡಿಸಿದೆ.

6) ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: E-Khata-ಈ ದಿನಾಂಕದ ಒಳಗಾಗಿ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಡ್ಡಾಯ: ಸಿ ಎಂ ಸಿದ್ದರಾಮಯ್ಯ ಸೂಚನೆ!

7) ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.00 ರಿಂದ 12.15ರವರೆಗೆ ನಡೆಯಲಿದೆ.

8) ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

SSLC and PUC time table Download Link-ಅಂತಿಮ ವೇಳಾಪಟ್ಟಿಯ ಪ್ರಕಟಣೆ ಪ್ರತಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ:- Download Now

- Advertisment -
LATEST ARTICLES

Related Articles

- Advertisment -

Most Popular

- Advertisment -