SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!

August 5, 2025 | Siddesh
SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!
Share Now:

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ(Karnataka Labour Department) SSLC ಮತ್ತು PUC ಅಲ್ಲಿ(Scholarship) ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಪ್ರತಿಭಾ ಪುರಸ್ಕಾರವನ್ನು ನೀಡಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇಂದಿನ ಈ ಅಂಕಣದಲ್ಲಿ ಪ್ರತಿಭಾ ಪುರಸ್ಕಾರಕ್ಕೆ(Pratibha Puraskara) ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಇತ್ಯಾದಿ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

ಪ್ರತಿಯೊಬ್ಬರು ಸಹ ಇಂದಿನ ದಿನಮಾನದಲ್ಲಿ ಉತ್ತಮ ಶಿಕ್ಷಣ ಮತ್ತು ಕೌಶಲ್ಯವನ್ನು ಪಡೆದುಕೊಳ್ಳುವುದು ಅತ್ಯವಶ್ಯಕ ಈ ನಿಟ್ಟಿನಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ SSLC ಮತ್ತು PUC ಅಲ್ಲಿ(PUC Scholarship/SSLC Scholarship) ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಮುಂದುವರೆದು ಉನ್ನತ ಶಿಕ್ಷಣ ಪಡೆಯಲು ಪ್ರೇರಣೆಯನ್ನು ನೀಡಲು "ಪ್ರತಿಭಾ ಪುರಸ್ಕಾರ" ವನ್ನು ಪ್ರತಿ ವರ್ಷದಂತೆ ಈ ವರ್ಷವು ಸಹ ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

Labour Board Scholarship Eligibility Criteria-ಅರ್ಜಿ ಸಲ್ಲಿಸಲು ಅರ್ಹರು ಯಾರು?

ಅರ್ಜಿದಾರ ವಿದ್ಯಾರ್ಥಿಯ ಪೋಷಕರು ಕಾರ್ಮಿಕ ಮಂಡಳಿಯ ನೋಂದಾಯಿತ ಸದಸ್ಯರಾಗಿರಬೇಕು.

ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಈ ಶಿಕ್ಷಣ ಪ್ರೋತ್ಸಾಹ ಧನದ ಅರ್ಜಿಗೆ ಅರ್ಹರಾದವರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾಗಿರುವ ಕಾರ್ಮಿಕರ ಮಕ್ಕಳು.

ವಿದ್ಯಾರ್ಥಿಯು ಇತ್ತೀಚಿನ 2024-25 ಸಾಲಿನ SSLC (10ನೇ ತರಗತಿ) ಅಥವಾ PUC (12ನೇ ತರಗತಿ) ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.

ಈ ಯೋಜನೆಯು ಕೇವಲ ಎರಡು ಮಕ್ಕಳಿಗಷ್ಟೇ ಅನ್ವಯವಾಗುತ್ತದೆ, ಆದ್ದರಿಂದ ಪ್ರತಿ ಕಾರ್ಮಿಕ ಕುಟುಂಬದ ಮೊದಲ ಎರಡು ಮಕ್ಕಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

Scholarship Online Application-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಇದಕ್ಕಾಗಿ ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ:

Step-1: ಮೊದಲಿಗೆ ಇಲ್ಲಿ ಕ್ಲಿಕ್ "Scholarship Online Application" ಮಾಡಿ ಅಧಿಕೃತ ಕಾರ್ಮಿಕ ಮಂಡಳಿಯ ವೆಬ್ಸೈಟ್ ಅನ್ನು ಪ್ರವೇಶ ಮಾಡಿ.

ಇದನ್ನೂ ಓದಿ: PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

PUC Scholarship

ಇದನ್ನೂ ಓದಿ: PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

Step-2: ನಂತರ ಬಲಬದಿಯಲ್ಲಿ ಕಾಣುವ "ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಇಲ್ಲಿ ಸಂಬಂದಪಟ್ಟ ಬಟನ್ ಮೇಲೆ ಕ್ಲಿಕ್ ಮಾಡಿದರೆ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-3: ಅರ್ಜಿ ನಮೂನೆ ತೆರೆದುಕೊಂಡ ಬಳಿಕ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಯಾವುದೇ ಬಗ್ಗೆಯ ಪ್ರಶ್ನೆ ಮತ್ತು ಅರ್ಜಿ ಸಲ್ಲಿಸುವುದರ ಕುರಿತು ತಾಂತ್ರಿಕ ನೆರವು ಪಡೆಯಲು ಕಾರ್ಮಿಕ ಸಹಾಯವಾಣಿ ಸಂಖ್ಯೆಗೆ 155214 ಸಂಪರ್ಕಿಸಿ.

ಇದನ್ನೂ ಓದಿ: Muskaan Scholarship-ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆಯಡಿ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Karmika Ilake Scholarship

ಇದನ್ನೂ ಓದಿ: Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

Scholarship Amount-ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎಷ್ಟು ಮೊತ್ತವನ್ನು ನೀಡಲಾಗುತ್ತದೆ?

ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಖರ ಮೊತ್ತದ ಬಗ್ಗೆ ಈಗಾಗಲೇ ಅಧಿಕೃತವಾಗಿ ಘೋಷಣೆಯಾಗಿಲ್ಲ, ಆದರೆ ಈ ಯೋಜನೆಯು ಪ್ರೋತ್ಸಾಹ ಧನವಾಗಿ ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಹಿಂದಿನ ಯೋಜನೆಗಳ ಆಧಾರದ ಮೇಲೆ, ಇದು ಶಿಕ್ಷಣ ಖರ್ಚುಗಳನ್ನು ಭರಿಸಲು ಸುಮಾರು ₹5,000 ರಿಂದ ₹10,000 ತನಕ ಇರಬಹುದು (ವಾರ್ಷಿಕವಾಗಿ).

Required Documents For Application-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಅವಶ್ಯವಾಗಿ ಒದಗಿಸಬೇಕಾದ ದಾಖಲೆಗಳ ವಿವರ ಈ ಕೆಳಗಿನಂತಿದೆ:

  • ವಿದ್ಯಾರ್ಥಿ ಪೋಷಕರ ಕಾರ್ಮಿಕರ ಗುರುತಿನ ಚೀಟಿ/ನೋಂದಣಿ ಸಂಖ್ಯೆ.
  • ವಿದ್ಯಾರ್ಥಿಯ SSLC/PUC ಮಾರ್ಕ್ಸ್ ಕಾರ್ಡ್ (ಶೇ 90+ ಅಂಕ ಪಡೆದಿರುವುದರ ಪ್ರಮಾಣಪತ್ರ).
  • ಆಧಾರ್ ಕಾರ್ಡ್ (ವಿದ್ಯಾರ್ಥಿ ಮತ್ತು ಪೋಷಕರದು).
  • ಫೋಟೊ.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  • ಬ್ಯಾಂಕ್ ಪಾಸ್ ಬುಕ್ ವಿವರ.

ಇದನ್ನೂ ಓದಿ: DL and RC Card- ವಾಹನ ಚಾಲಕರಿಗೆ ಸಿಹಿ ಸುದ್ದಿ! DL ಮತ್ತು RC ಡೆಲಿವರಿ ಈಗ ಮತ್ತಷ್ಟು ಬೇಗ! ಬಂದಿದೆ ಸ್ಮಾರ್ಟ್ ಕಾರ್ಡ್?

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈ ಯೋಜನೆಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 15 ಸೆಪ್ಟೆಂಬರ್ 2025 ಅಗಿರುತ್ತದೆ. ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ಅಧಿಕೃತ ಪ್ರಕಟಣೆ ಪ್ರತಿ-Download Now
ಮಂಡಳಿಯ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: