SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!

April 17, 2025 | Siddesh
SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!
Share Now:

ಬೆಂಗಳೂರು: ರಾಜ್ಯದ ಲಕ್ಷಾಂತರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತೀವ್ರ ನಿರೀಕ್ಷೆಯಲ್ಲಿ ಕಾಯುತ್ತಿರುವ 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೇ 2ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಾರ್ಚ್ 21 ರಿಂದ ಏಪ್ರಿಲ್ 4ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಿತ್ತು. ಇದೀಗ ಮೌಲ್ಯಮಾಪನ ಕಾರ್ಯವು ಮಂಗಳವಾರದಿಂದ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಕೇಂದ್ರಗಳಲ್ಲಿ ಪರಿಶೀಲನೆಯೊಂದಿಗೆ ಮೌಲ್ಯಮಾಪನ ಮಾಡಲಾಗುತ್ತಿದೆ.

ಇದನ್ನೂ ಓದಿ: Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

ಈ ಲೇಖನದಲ್ಲಿ ಫಲಿತಾಂಶ ಪ್ರಕಟಣೆಯ ನಿರೀಕ್ಷಿತ ದಿನಾಂಕ, ಎಸ್ಸೆಸ್ಸೆಲ್ಸಿ ಫಲಿತಾಂಶ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳುವುದು ಹೇಗೆ? SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳ ಅಂಕಿ-ಅಂಶ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

SSLC Exam Result Date-2025: ಫಲಿತಾಂಶ ಪ್ರಕಟಣೆಯ ನಿರೀಕ್ಷಿತ ದಿನಾಂಕ:

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಮೂಲಗಳ ಪ್ರಕಾರ, ಫಲಿತಾಂಶವನ್ನು ಮೇ ಎರಡನೇ ವಾರ ಅಂದರೆ 10ರಿಂದ 15ರ ಮಧ್ಯೆ ಪ್ರಕಟಿಸುವ ಸಾಧ್ಯತೆ ಇದೆ. ಅಧಿಕೃತ ಪ್ರಕಟಣೆಗಾಗಿ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ (https://karresults.nic.in) ಅನ್ನು ನಿಯಮಿತವಾಗಿ ಪರಿಶೀಲಿಸುತ್ತಿರುವುದು ಉತ್ತಮ.

ಇದನ್ನೂ ಓದಿ: Agniveer recruitment-8ನೇ ತರಗತಿ ಪಾಸಾದವರಿಗೆ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

SSLC Result-ಎಸ್ಸೆಸ್ಸೆಲ್ಸಿ ಫಲಿತಾಂಶ ಚೆಕ್ ಮಾಡಿಕೊಳ್ಳುವ ವಿಧಾನ:

ಪಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ತಮ್ಮ ನೋಂದಣಿಸಂಖ್ಯೆ (Registration Number) ಮತ್ತು ಹುಟ್ಟಿದ ದಿನಾಂಕ (Date of Birth) ವನ್ನು ನಮೂದಿಸಿ, ಫಲಿತಾಂಶವನ್ನು ನಿಮ್ಮ ಮನೆಯಲ್ಲೇ ಇದ್ದು ಆನ್ಲೈನ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದೇ ರೀತಿ ಶಾಲೆಗಳ ಮೂಲಕವೂ ಫಲಿತಾಂಶದ ಪ್ರಿಂಟ್‌ಔಟ್ ಪಡೆಯಲು ಅವಕಾಶವಿರುತ್ತದೆ.

Step-1: ಮೊದಲಿಗೆ ಇಲ್ಲಿ ಕ್ಲಿಕ್ SSLC Result Check ಮಾಡಿ ಅಧಿಕೃತ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

sslc

Step-2: ನಂತರ ಈ ಪೇಜ್ ನಲ್ಲಿ ಕಾಣುವ "ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ/Karnataka School Examination and Assessment Board" ಅಯ್ಕೆಯ ಮೇಲೆ ಕ್ಲಿಕ್ ಮಾಡಿ ಇಲ್ಲಿ ವಿದ್ಯಾರ್ಥಿಯ ನೋಂದಣಿ ಸಂಖ್ಯೆಯನ್ನು ನಮೂದಿಸಿ ಪಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳ ಅಂಕಿ-ಅಂಶ:

ರಾಜ್ಯದಲ್ಲಿ ಈ ಬಾರಿ ಅಂದರೆ 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 8.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದಿದ್ದು ಈ ಸಂಖ್ಯೆಯು ಕಳೆದ 5 ವರ್ಷಗಳಲ್ಲಿ ಅತ್ಯಧಿಕವಾಗಿದೆ.

ಇದನ್ನೂ ಓದಿ: Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

  • ಒಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ- 8,96,447
  • ಗಂಡು ಮಕ್ಕಳು- 4,61,563
  • ಹೆಣ್ಣು ಮಕ್ಕಳು- 4,34,884
  • ಒಟ್ಟು ರಾಜ್ಯಾದ್ಯಂತ ಪರೀಕ್ಷಾ ಕೇಂದ್ರಗಳು- 2,818

SSLC Exam Date-2025: ಪರೀಕ್ಷೆ ನಡೆದ ದಿನಾಂಕ:

SSLC ಅಂತಿಮ ಪರೀಕ್ಷೆಯು ದಿನಾಂಕ: 21 ಮಾರ್ಚ್ 2025 ರಿಂದ ಪ್ರಾರಂಭವಾಗಿ ದಿನಾಂಕ: 04 ಏಪ್ರಿಲ್ 2025 ಕ್ಕೆ ಮುಕ್ತಾಯವಾಗಿತ್ತು.

ಇದನ್ನೂ ಓದಿ: Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ವಿದ್ಯಾರ್ಥಿಗಳಿಗೆ ಕಿವಿ ಮಾತು:

ವಿದ್ಯಾರ್ಥಿಗಳು ಈ ಸಮಯದಲ್ಲಿ ತಳಮಳ ಇಲ್ಲದೆ ಶಾಂತಿಯಿಂದ ಫಲಿತಾಂಶಕ್ಕಾಗಿ ಕಾಯಬೇಕು. ಫಲಿತಾಂಶವೇ ನಿಮ್ಮ ಭವಿಷ್ಯವಲ್ಲ; ಇದು ಕೇವಲ ಒಂದು ಹಂತ ಮಾತ್ರ!

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: