Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

May 29, 2025 | Siddesh
Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Share Now:

ಕೈಂಡ್ ಸರ್ಕಲ್ ಮೆರಿಟೋರಿಯಸ್ ಸ್ಕಾಲರ್‌ಶಿಪ್(Kind Circle Scholarship) ಕಾರ್ಯಕ್ರಮದಡಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಎಲ್ಲಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಕೈಂಡ್ ಸರ್ಕಲ್ ಸ್ಕಾಲರ್‌ಶಿಪ್ ಕಾರ್ಯಕ್ರಮದಡಿ ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು(Student Scholroship Application) ಮುಂದುವರೆಸಿಕೊಂಡು ಹೋಗಲು ಆರ್ಥಿಕವಾಗಿ ನೆರವನ್ನು ನೀಡಲು ಈ ಕಾರ್ಯಕ್ರಮವನ್ನು ಅನುಷ್ಠಾಣಗೊಳಿಸಲಾಗುತ್ತಿದ್ದು, ಭಾರತದ ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ 1ನೇ ತರಗತಿಯಿಂದ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುತ್ತದೆ.

ಇದನ್ನೂ ಓದಿ: Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

ಈ ಲೇಖನದಲ್ಲಿ ಸ್ಕಾಲರ್‌ಶಿಪ್‌ಗೆ(Scholroship Application) ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳೇನು? ಕೊನೆಯ ದಿನಾಂಕದ ಸೇರಿದಂತೆ ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದ್ದು, ಈ ಮಾಹಿತಿಯನ್ನು ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ತಲುಪಿಸಲು ನಿಮ್ಮ ಮೊಬೈಲ್ ನಲ್ಲಿರುವ ವಾಟ್ಸಾಪ್ ಗುಂಪುಗಳಲ್ಲಿ ತಪ್ಪದೇ ಶೇರ್ ಮಾಡಿ ಸಹಕರಿಸಿ.

Scholarship Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಆನ್ಲೈನ್ ಮೂಲಕ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸಲು 31 ಡಿಸೆಂಬರ್ 2025 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

Scholarship Amount-ಎಷ್ಟು ಮೊತ್ತದ ವಿದ್ಯಾರ್ಥಿವೇತನ ನೀಡಲಾಗುತ್ತದೆ?

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಒಂದು ಬಾರಿಗೆ ಸಂದರ್ಶನದ ಕಾರ್ಯಕ್ಷಮತೆಯ ಆಧಾರದ ಮೇಲೆ ನಿರ್ಧರಿಸಿ ಕನಿಷ್ಠ 6,000 ರೂಪಾಯಿಗಳಿಂದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಈ ಹಣವನ್ನು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕೆ ಬಳಕೆ ಮಾಡಿಕೊಳ್ಳಬಹುದು.

Scholroship

Scholarship Eligibility-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು:

ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ತಿಳಿಸಿರುವ ಅರ್ಹತೆಗಳನ್ನು ಹೊಂದಿರಬೇಕು ಎಂದು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಭಾರತದ ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ 1ನೇ ತರಗತಿಯಿಂದ ಸ್ನಾತಕೋತ್ತರ ಕೋರ್ಸ್‌ಗಳವರೆಗೆ ವ್ಯಾಸಂಗ ಮಾಡುತ್ತಿರುವ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬುದು.

ಇದನ್ನೂ ಓದಿ: Sub Registrar Office-ಸಾರ್ವಜನಿಕ ಪ್ರಕಟಣೆ ಇನ್ಮುಂದೆ ಈ ದಿನವು ಸಹ ಸಬ್ ರಿಜಿಸ್ಟ್ರಾರ್ ತೆರೆದಿರುತ್ತದೆ!

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರಬೇಕು.

ಈ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಇವರನ್ನು ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Scholarship Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ:

ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ-1: ಪ್ರಥಮದಲ್ಲಿ ಈ ವೆಬ್ಸೈಟ್ Scholarship Online Application ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ತಂತ್ರಾಂಶವನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

puc Scholroship

ಇದನ್ನೂ ಓದಿ: Diesel Pump Subsidy-ಶೇ 90% ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಪಡೆಯಲು ಅರ್ಜಿ!

ಹಂತ-2: ಬಳಿಕ "Kind Circle Scholarship for Meritorious Students 2025-26" ಆಯ್ಕೆಯ ಮುಂದೆ ಕಾಣುವ "Apply Now" ಬಟನ್ ಮೇಲೆ ಕ್ಲಿಕ್ ಮಾಡಿ, ಮೊದಲ ಸಲ ಈ ವೆಬ್ಸೈಟ್ ಭೇಟಿ ಮಾಡುತ್ತಿರುವ ವಿದ್ಯಾರ್ಥಿಗಳು “Create an Account” ಬಟನ್ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚಿಸಿಕೊಳ್ಳಬೇಕು ಬಳಿಕ ಖಾತೆ ರಚನೆಯಾದ ಬಳಿಕ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

ಹಂತ-3: ತದನಂತರ ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆಯುತ್ತದೆ. ಇಲ್ಲಿ ಕೇಳುವ ಎಲ್ಲಾ ಮಾಹಿತಿ ಮತ್ತು ಅಗತ್ಯ ದಾಖಲಾತಿಗಳನ್ನು ಆಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

Required Documents For Scholarship-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

  • ಹಿಂದಿನ ಶೈಕ್ಷಣಿಕ ವರ್ಷದ ತರಗತಿಯ ಅಂಕಪಟ್ಟಿ/Marks Card
  • ಕುಟುಂಬದ ಆದಾಯ ಪ್ರಮಾಣಪತ್ರ/Income certificate
  • ಆಧಾರ್ ಕಾರ್ಡ್/Aadhar
  • ವಿದ್ಯಾರ್ಥಿಯ ಗುರುತಿನ ಚೀಟಿ/School ID Card
  • ಬ್ಯಾಂಕ್ ಖಾತೆಯ ವಿವರಗಳು/Bank Pass book
  • ಮೊಬೈಲ್ ನಂಬರ್/Mobile Number

For More Information-ಹೆಚ್ಚಿನ ಮಾಹಿತಿಗಾಗಿ:

ಅಧಿಕೃತ ವೆಬ್ಸೈಟ್-Click Here
ಅರ್ಜಿ ಸಲ್ಲಿಸಲು ಲಿಂಕ್-Apply Now
ಸಹಾಯವಾಣಿ-+91-11-430-92248 (Ext. 370) (Monday to Friday - 10:00AM to 06:00 PM (IST))
info@buddy4study.com

WhatsApp Group Join Now
Telegram Group Join Now
Share Now: