Student Scholarship- ಈ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ 25,000 ಸಾವಿರ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ!

December 8, 2024 | Siddesh
Student Scholarship- ಈ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ 25,000 ಸಾವಿರ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ!
Share Now:

2024-25 ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ/ವಿದ್ಯಾರ್ಥಿ ವೇತನ(b.ed scholarship)ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರಕಾರದ ವಿವಿಧ ಯೋಜನೆಯಡಿ ಹಣಕಾಸಿನ ನೆರವನ್ನು ಪಡೆದುಕೊಂಡು ಉನ್ನತ ಶಿಕ್ಷಣವನ್ನು(b.ed scholarship-2024) ಮುಂದುವರೆಸಿಕೊಳ್ಳಲು ಇಚ್ಚೆ ಇದ್ದವರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!

ಪ್ರತಿ ವರ್ಷದಂತೆ ಈ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಥಿಕ ನೆರವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರೋತ್ಸಾಹ ಧನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಈ ಕುರಿತು ಒಂದಿಷ್ಟು ಮಾಹಿತಿ ಹೀಗಿದೆ.

Who can apply For b.ed scholarship-ಅರ್ಜಿ ಸಲ್ಲಿಸಲು ಅರ್ಹರು:

1) 2024-25ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಥಿಕ ನೆರವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.

2) 2024-25 ನೇ ಸಾಲಿನಲ್ಲಿ "National Council for Teacher Education" ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರು.

3) ಮುಸ್ಲಿಂ, ಕ್ರಿಶ್ಚಿಯನ್,ಜೈನ್, ಸಿಖ್, ಬೌದ್ದ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Scholarship application

Important dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05 ಡಿಸೆಂಬರ್ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಡಿಸೆಂಬರ್ 2024

Online application method-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಸೇವಾ ಸಿಂಧು ವೆಬ್ಸೈಟ್ ಅನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

ಇದನ್ನೂ ಓದಿ: Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000!

Step-1: ಪ್ರಥಮದಲ್ಲಿ b.ed Scholarship online application ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ವೆಬ್ಸೈಟ್ ಅನ್ನು ಪ್ರವೇಶ ಮಾಡಿ.

b.ed scholarship

Step-2: ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿದ ಬಳಿಕ User Id ಮತ್ತು password ಅನ್ನು ನಮೂದಿಸಿ ಲಾಗಿನ್ ಅಗಬೇಕು.

Step-3: ಲಾಗಿನ್ ಅದ ನಂತರ ಇಲ್ಲಿ ಅಲ್ಪಸಂಕ್ಯಾತರ ಕಲ್ಯಾಣ ಇಲಾಖೆ ಎಂದು "Search" ಮಾಡಿ ಪ್ರೋತ್ಸಾಹ ಧನ ಯೋಜನೆಯನ್ನು ಆಯ್ಕೆ ಮಾಡಿಕೊಂಡು "Apply Now" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: "Apply Now" ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇದನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: SSP scholarship 2024-ವಿದ್ಯಾರ್ಥಿ ವೇತನ ಪಡೆಯಲು ಹೊಸ ಆದೇಶ ಪ್ರಕಟ!

Required documents- ಅರ್ಜಿ ಸಲ್ಲಿಸಲು ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ
2) ಬ್ಯಾಂಕ್ ಪಾಸ್ ಬುಕ್ ಪ್ರತಿ
3) ಕಾಲೇಜು ದಾಖಲಾತಿ ಪ್ರಮಾಣ 4) ಪತ್ರ
5) ಪೋಟೋ
6) ಮೊಬೈಲ್ ನಂಬರ್

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: