Students Scholarship-1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

August 10, 2025 | Siddesh
Students Scholarship-1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
Share Now:

2025-26ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ(Students Scholarship) ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ SSP ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ‌

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು(1 to 8th Scholarship Application) ಉನ್ನತ ಶಿಕ್ಷಣವನ್ನು ಪಡೆಯಲು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು ಅರ್ಹ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ತಲುಪಿಸಲು ತಪ್ಪದೇ ಈ ಮಾಹಿತಿಯನ್ನು ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ.

ಇದನ್ನೂ ಓದಿ: PM Surya Ghar Yojana-ನಿಮ್ಮ ಮನೆಗೆ ಉಚಿತ ವಿದ್ಯುತ್ ಬೇಕಾದರೆ ಈ ಕೂಡಲೇ ಅರ್ಜಿ ಸಲ್ಲಿಸಿ!

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು(SSP Scholarship Application) ವಿದ್ಯಾರ್ಥಿಗಳು ಅನುಸರಿಸಬೇಕಾದ ಅಗತ್ಯ ಕ್ರಮಗಳೇನು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿ, ಅರ್ಜಿ ಸಲ್ಲಿಸಲು ಇಲಾಖೆಯಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

Who Can Apply For SSP Scholarship Application-ಅರ್ಜಿ ಸಲ್ಲಿಸಲು ಅರ್ಹರು:

1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಇದರ ವಿವರ ಈ ಕೆಳಗಿನಂತಿದೆ:

  • ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯದಕ್ಕೆ ಸೇರಿದವರಾಗಿರಬೇಕು.
  • ಪ್ರಸ್ತುತ 1 ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
  • ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು.

ಇದನ್ನೂ ಓದಿ: PUC Scholariship-ಪ್ರಥಮ ದರ್ಜೆಯಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ!

Last Date For Application-ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 30 ಸೆಪ್ಟೆಂಬರ್ 2025

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ರಾಜ್ಯ ಸರಕಾರದ ಅಧಿಕೃತ ವಿದ್ಯಾರ್ಥಿವೇತನದ ತಂತ್ರಾಂಶವನ್ನು ಪ್ರವೇಶ ಮಾಡಿ ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

Step-1: ಮೊದಲಿಗೆ ಇಲ್ಲಿ ಕ್ಲಿಕ್ "Online Scholarship Application" ಮಾಡಿ ಅಧಿಕೃತ SSP ತಂತ್ರಾಂಶವನ್ನು ಭೇಟಿ ಮಾಡಿ.

Scholarship

Step-2: ಈ ಪೇಜ್ ನಲ್ಲಿ ಒಟ್ಟು ಮೂರು ಆಯ್ಕೆಗಳು ತೋರಿಸುತ್ತವೆ ಇದರಲ್ಲಿ ಮೊದಲ ಬಾರಿಗೆ ಈ ಜಾಲತಾಣವನ್ನು ಪ್ರವೇಶ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ ಬಟನ್ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚನೆ ಮಾಡಿಕೊಳ್ಳಿ. ಬಳಿಕ ಕೆಳಗೆ ಹಸಿರು ಬಣ್ಣದಲ್ಲಿ ಕಾಣುವ "ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ಕ್ಲಿಕ್ ಮಾಡಿದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಒದಗಿಸಬೇಕಾದ ಅಗತ್ಯ ವಿವರ ಮತ್ತು ದಾಖಲೆಗಳನ್ನು ಸಲ್ಲಿಸಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Ganga Kalyana-2025: ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Documents For Scholarship Application-ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಅವಶ್ಯಕ:

ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕು.

  • ವಿದ್ಯಾರ್ಥಿಯ ಆಧಾರ್ ಕಾರ್ಡ.
  • ವಿದ್ಯಾರ್ಥಿಯ ಪೋಟೋ.
  • ಬ್ಯಾಂಕ್ ಪಾಸ್ ಬುಕ್.
  • ವ್ಯಾಸಂಗ ಪ್ರಮಾಣ ಪತ್ರ.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  • ಮೊಬೈಲ್ ನಂಬರ್.

ಇದನ್ನೂ ಓದಿ: Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯ!ಯಾವ ಜಿಲ್ಲೆಗೆ ಎಷ್ಟು ಅನುದಾನ?

More Information-ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅವಶ್ಯಕ ಮಾಹಿತಿ:

Official Website-ಅಧಿಕೃತ ವೆಬ್ಸೈಟ್ ಲಿಂಕ್- Click Here
Department Helpline-ಇಲಾಖೆಯ ಸಹಾಯವಾಣಿ- 8277799990
Online Application Link-ಅರ್ಜಿ ಸಲ್ಲಿಸಲು ಲಿಂಕ್-Apply Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: