Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!

August 22, 2025 | Siddesh
Subsidy Schemes Application-ವಿಕಲಚೇತನರ ಇಲಾಖೆಯಿಂದ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ!
Share Now:

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ 13 ಫಲಾನುಭವಿ ಆಧಾರಿತ ಯೋಜನೆಯಡಿ(Handicap candidate subsidy scheme) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ.

ವಿಕಲಚೇತನರ ಸಬಲೀಕರಣ ಇಲಾಖೆಯಿಂದ(Karnataka handicap candidate subsidy yojana) ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಯೋಜನೆ, ಆಧಾರ ಯೋಜನೆ,ವೈದ್ಯಕೀಯ ಪರಿಹಾರ ನಿಧಿ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ವಿತರಣೆ ಯೋಜನೆ ಸೇರಿದಂತೆ ಒಟ್ಟು 13 ಫಲಾನುಭವಿ ಆಧಾರಿತ ಯೋಜನೆಯಡಿ ಅರ್ಹ ಅಭ್ಯರ್ಥಿಗಳು ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Bele Samikshe App-2025: ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ ಪ್ರಾರಂಭ!ಈಗಲೇ ನಿಮ್ಮ ಬೆಳೆ ವಿವರ ದಾಖಲಿಸಿ!

ಪ್ರಸ್ತುತ ವಿಕಲಚೇತನರ ಸಬಲೀಕರಣ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಅರ್ಜಿಯನ್ನು ಅಹ್ವಾನಿಸಲಾಗಿದೆ? ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳಾವುವು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

Important Dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ- 20 ಆಗಸ್ಟ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 30 ಸೆಪ್ಟೆಂಬರ್ 2025

ಇದನ್ನೂ ಓದಿ: Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Department of Persons with Disabilities Schemes-ಯಾವೆಲ್ಲ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ?

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಈ ಕೆಳಗಿನ ಪಟ್ಟಿಯಲ್ಲಿ ತಿಳಿಸಿರುವ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

  • SSLC ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಯೋಜನೆ.
  • ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ವಿತರಣೆ.
  • ದೃಷ್ಟಿ ದೋಷ ಹೊಂದಿರುವ ವ್ಯಕ್ತಿಗಾಗಿ ಬ್ರೈಲ್ ಕಿಟ್.
  • ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಣೆ ಯೋಜನೆ.
  • ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ.
  • ವಿಶೇಷಚೇತನರಿಗೆ ಸಾಧನ ಸಲಕರಣೆಗಳಿಗಾಗಿ ಅರ್ಜಿ.
  • ವಿಕಲಚೇತನರಿಗೆ ನಿರುದ್ಯೋಗ ಭತ್ಯೆ ಯೋಜನೆ.
  • ಆಧಾರ ಯೋಜನೆ.
  • ವೈದ್ಯಕೀಯ ಪರಿಹಾರ ನಿಧಿ ಯೋಜನೆ.
  • ಶಿಶುಪಾಲನಾ ಭತ್ಯೆ.
  • ಮರಣ ಪರಿಹಾರ ನಿಧಿ.
  • ಪ್ರತಿಭೆ ಯೋಜನೆ.

ಇದನ್ನೂ ಓದಿ: Swasaya Sanga Subsidy Loan-ಮಹಿಳಾ ಸ್ವ-ಸಹಾಯ ಸಂಘಗಳಿಗೆ ₹1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Required Documents For Application-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು ಯಾವುವು?

ಮೇಲಿನ ಪಟ್ಟಿಯಲ್ಲಿರುವ ಯೋಜನೆಯ ಪ್ರಯೋಜನವನ್ನು ಪಡೆಯಲು ಅರ್ಜಿದಾರ ಅಭ್ಯರ್ಥಿಗಳು ಕಡ್ಡಾಯವಾಗಿ ಒದಗಿಸಬೇಕಾದ ಅಗತ್ಯ ದಾಖಲೆಗಳ ಪಟ್ಟಿ ಹೀಗಿದೆ:

  • ಅಭ್ಯರ್ಥಿಯ ಆಧಾರ್ ಕಾರ್ಡ/Aadhar.
  • ವಿಕಲಚೇತನ ದೃಡೀಕರಣ ವೈದ್ಯಕೀಯ ಪ್ರಮಾಣ ಪತ್ರ/Medicle Certificate.
  • ಅಭ್ಯರ್ಥಿಯ ಪೋಟೋ/Photo.
  • ಬ್ಯಾಂಕ್ ಪಾಸ್ ಬುಕ್/Bank Passbook.
  • ರೇಶನ್ ಕಾರ್ಡ/Ration Card.
  • ಮೊಬೈಲ್ ನಂಬರ್/Mobile Number.

ಇದನ್ನೂ ಓದಿ: Navodaya School Admission-ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

How to Apply For Department For The Empoermrnt of Differently Abled Yojana-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ವಿಕಲೆಚೇತನರ ಸಬಲೀಕರಣ ಇಲಾಖೆಯಿಂದ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳನ್ನು ಸಿದ್ದಪಡಿಸಿಕೊಂಡು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅಥವಾ ನೇರವಾಗಿ ಸ್ವಂತ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಕೆಳಗಿನ ವಿಧಾನವನ್ನು ಅನುಸರಿಸಿ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

handicap candidate subsidy yojana

Online Application For ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಹಂತ-1: ಮೊದಲಿಗೆ "Apply Online" ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Free Hostel Admission-ಉಚಿತ ಹಾಸ್ಟೆಲ್ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

ಹಂತ-2: ಇದಾದ ಬಳಿಕ "ಇಲಾಖೆಗಳು ಮತ್ತು ಸೇವೆಗಳು" ಬಟನ್ ಮೇಲೆ ಕ್ಲಿಕ್ ಮಾಡಿ "Search" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಯೋಜನೆಯ ಹೆಸರನ್ನು ಟೈಪ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ಕಾಲಂ ತೆರೆದುಕೊಳ್ಳುತ್ತದೆ.

ಹಂತ-3: ಇಲ್ಲಿ ಕೆಳಗೆ ಕಾಣುವ "ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ನಮೂದಿಸಿ ಲಾಗಿನ್ ಅದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅವಶ್ಯಕ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

More Details-ಈ ಮೇಲೆ ತಿಳಿಸಿರುವ ಯೋಜನೆಗಳ ಪ್ರಯೋಜನವನ್ನು ಪಡೆಯಲು ಇಲಾಖೆಯ ಅಧಿಕೃತ ವೆಬ್ಸೈಟ್- Click Here
ಇಲಾಖೆಯ ಸಹಾಯವಾಣಿ-080-22860907
ಅರ್ಜಿ ಸಲ್ಲಿಸಲು ಲಿಂಕ್-Apply Now
ಅಧಿಕೃತ ಪ್ರಕಟಣೆ-Download Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: