Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

November 10, 2025 | Siddesh
Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!
Share Now:

ಉತ್ತರ ಕರ್ನಾಟಕ ಭಾಗದ ರೈತರು ಪ್ರತಿ ಟನ್ ಕಬ್ಬಿಗೆ ರೂ 3500/- ನಿಗದಿಪಡಿಸುವಂತೆ ಪ್ರತಿಭಟನೆಯನ್ನು ಮಾಡಿದರ ಪರಿಣಾಮ ಈ ಕುರಿತು ಹೆಚ್ಚೆತ್ತುಕೊಂಡ ರಾಜ್ಯ ಸರಕಾರವು ಪ್ರತಿ ಟನ್ ಗೆ ರೂ 3,300/- ನಿಗದಿಪಡಿಸಿ(Karnataka Sugarcane Rate) ಅಧಿಕೃತ ಆದೇಶವನ್ನು ಶನಿವಾರ ಪ್ರಕಟಿಸಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ಕರೆ(Sugarcane) ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜೊತೆ ಚರ್ಚಿಸಿ ಅಂತಿಮವಾಗಿ ರೈತರ ಸಹ ಮತದ ಅನುಸಾರವಾಗಿ ಕಬ್ಬಿಗೆ ಹೆಚ್ಚುವರಿ ದರವನ್ನು ನಿಗದಿಪಡಿಸಲು ಅಂತಿಮ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

ಇಂದಿನ ಅಂಕಣದಲ್ಲಿ ಕಬ್ಬಿಗೆ ಹೆಚ್ಚುವರಿ ದರ(Sugarcane Rate) ನಿಗದಿ ಕುರಿತು ಮಾಹಿತಿ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷೆಯಲ್ಲಿ ದಿನಾಂಕ: 06-11-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಣಯಗಳ ಕುರಿತು ಸಹ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

Karnataka Sugarcane Rate 2025-ಪ್ರತಿ ಟನ್ ಕಬ್ಬಿಗೆ ರೂ 3,300/- ನಿಗದಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜೊತೆ ಚರ್ಚಿಸಿ ಪ್ರತಿ ಟನ್ ಕಬ್ಬಿಗೆ ರೂ 3,300/- ದರ ನಿಗದಿ ಮಾಡಲಾಗಿದೆ. ಕಾರ್ಖಾನೆಗಳು ಒ೦ದು ಟನ್‌ಗೆ ಹಿಂದೆ ನಿಗದಿಯಾಗಿದ್ದ ರೂ 3,200/- ರ ಜೊತೆಗೆ ರೂ 50/- ಹಾಗೂ ರಾಜ್ಯ ಸರ್ಕಾರವು ಒಂದು ಅವಧಿಯ ಪ್ರೋತ್ಸಾಹ ಧನವಾಗಿ ರೂ 50/- ಪಾವತಿಸಲಿದೆ. ಸಾಗಣೆ ಮತ್ತು ಕಟಾವು ವೆಚ್ಚ ಹೊರತುಪಡಿಸಿ ಶೇ.10.5 ಇಳುವರಿ ಪ್ರಮಾಣ ಇರುವ ಪ್ರತಿ ಟನ್ ಕಬ್ಬಿಗೆ 3,200 ಹಾಗೂ ಶೇ. 11.25 ಇಳುವರಿ ಪ್ರಮಾಣ ಇರುವ ಕಬ್ಬಿಗೆ ₹3,300 ದರ ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Mobile Phone Trace-ನಿಮ್ಮ ಮೊಬೈಲ್ ಕಳುವಾದರೆ ಟ್ರೇಸ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Karnataka Sugarcane Rate New Rate List-ಇಳುವರಿ ಆಧಾರದ ಮೇಲೆ ಪರಿಷ್ಕೃತ ದರ ಪಟ್ಟಿ:

ಇಳುವರಿ ಆಧಾರದ ಮೇಲೆ ಪರಿಷ್ಕೃತ ಹೊಸ ಕಬ್ಬಿನ ದರ ಪಟ್ಟಿಯನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಕೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಕೃತ ಆದೇಶ ಪ್ರತಿಯನ್ನು ಹೊರಡಿಸಲಾಗಿದ್ದು, 2025-26 ನೇ ಸಾಲಿನಲ್ಲಿ ರೈತರು ಕಬ್ಬಿನ ಕಾರ್ಖಾನೆಗಳಿಗೆ ಸರಬರಾಜು ಮಾಡುವ ಕಬ್ಬಿಗೆ ನಿಗದಿಪಡಿಸಿರುವ ದರ ಪಟ್ಟಿ ಹೀಗಿದೆ:

1) ಶೇ 9.25 ಇಳುವರಿಗೆ ಪ್ರತಿ ಟನ್ ದರ - ರೂ 3,390/- (ಸಾಗಣೆ-ಕಟಾವು ವೆಚ್ಚ ಸೇರಿ)

2) ಶೇ 10.25 ಇಳುವರಿಗೆ ಪ್ರತಿ ಟನ್ ದರ - ರೂ 3,200/- (ಸಾಗಣೆ- ಕಟಾವು ವೆಚ್ಚ ಹೊರತುಪಡಿಸಿ)

3) ಶೇ 11.25 ಇಳುವರಿಗೆ ಪ್ರತಿ ಟನ್ ದರ - ರೂ 3,300/- (ಸಾಗಣೆ- ಕಟಾವು ವೆಚ್ಚ ಹೊರತುಪಡಿಸಿ)

ಇದನ್ನೂ ಓದಿ: Bima Sakhi-ಬಿಮಾ ಸಖಿ ಯೋಜನೆ: ಎಲ್ಐಸಿ ಯಿಂದ ಮಹಿಳಾ ಏಜೆಂಟರಿಗೆ ತಿಂಗಳಿಗೆ ರೂ 7,000/- ಸ್ಟೈಪೆಂಡ್!

Sugarcane Rate in karnataka

Karnataka Sugarcane Producation-ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆ.ಟನ್ ಸಕ್ಕರೆ ಉತ್ಪಾದನೆ:

ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸ ಆಗುತ್ತದೆ. ಆದರೆ, ಎಲ್ಲಾ ಇಳುವರಿಗೂ 100 ರೂ. ಹೆಚ್ಚಳ ಆಗಲಿದೆ್, ಕೇಂದ್ರ ಸರ್ಕಾರ 10-5-2025ರಂದು ಕಟಾವು ಮತ್ತು ಸಾಗಾಟ ಸೇರಿಸಿ 10.5 ರಿಕವರಿ ಇರುವ ಕಬ್ಬಿಗೆ ಪ್ರತಿ ಮೆಟ್ರಿಕ್ ಟನ್‌ಗೆ ರೂ.3,550 ನಿಗದಿಪಡಿಸಿದೆ.

ರಾಜ್ಯದಲ್ಲಿ ಕಳೆದ ವರ್ಷ 5.6 ಕೋಟಿ ಮೆ.ಟನ್ ಸಕ್ಕರೆ ಉತ್ಪಾದಿಸಲಾಗಿದ್ದು, ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ. ಇಂದು ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಅನ್ವಯವಾಗುವಂತೆ ಕಟಾವು ಮತ್ತು ಸಾಗಾಟ ವೆಚ್ಚಕ್ಕೆ ಹೊರತುಪಡಿಸಿ, 11.25 ರಿಕವರಿ ಕಬ್ಬಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ ರೂ.100 ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ. ರಿಕವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್/ಎಕ್ಸ್ ಖಾತೆಯಲ್ಲಿ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: Crop Details-2025 ನೇ ಸಾಲಿನ ರೈತರ ಜಮೀನ ಬೆಳೆ ಸಮೀಕ್ಷೆ ವರದಿ ಬಿಡುಗಡೆ! ಇಲ್ಲಿದೆ ಪಹಣಿಯ ಬೆಳೆ ಮಾಹಿತಿ!

Karnataka Cabinet Meeting Highlights-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷೆಯಲ್ಲಿ ದಿನಾಂಕ: 06-11-2025 ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು:

ಮುಂದಿನ 5 ವರ್ಷಗಳಲ್ಲಿ ಬೆಂಗಳೂರು ಮತ್ತು ರಾಜ್ಯದ ಇತರೆ ನಗರಗಳಲ್ಲಿ ಒಟ್ಟು 25,000 ಹೆಚ್ಚುವರಿ ನವೋದ್ಯಮಗಳನ್ನು ಸ್ಥಾಪಿಸುವ ಉದ್ದೇಶದ ಕರ್ನಾಟಕ ನವೋದ್ಯಮ ನೀತಿ 2025-2030 ಗೆ ಒಪ್ಪಿಗೆ ನೀಡಲಾಗಿದೆ.

ಮೈಸೂರಿನ ಪಿಕೆಟಿಬಿ ಆಸ್ಪತ್ರೆಯ ಆವರಣದಲ್ಲಿ ಪೆರಿಫೆರಲ್ ಕ್ಯಾನ್ಸ‌ರ್ ಕೇ೦ದ್ರ ನಿರ್ಮಿಸಲು ಅವಶ್ಯವಿರುವ ಉಪಕರಣಗಳನ್ನು ಮೊದಲನೇ ಹಂತದಲ್ಲಿ 36.50 ಕೋಟಿ ರೂ. ವೆಚ್ಚದಲ್ಲಿ ಹಾಗೂ ಎರಡನೇ ಹಂತದಲ್ಲಿ 58 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

20 ಕೋಟಿ ರೂ. ವೆಚ್ಚದಲ್ಲಿ ಮ೦ಗಳೂರಿನ ಬಜ್ಜೆ ಗ್ರಾಮದಲ್ಲಿ ಹಜ್ ಭವನ ನಿರ್ಮಿಸಲು ಒಪ್ಪಿಗೆ ನೀಡಲಾಗಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: PUC ಮತ್ತು SSLC ಅಂತಿಮ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ!

ವಿಜಯಪುರ ನಗರದ ಸುತ್ತಲಿನ ಕೆಲವು ಕ೦ದಾಯ ಗ್ರಾಮಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿ ವಿಜಯಪುರ ಮಹಾನಗರ ಪಾಲಿಕೆ ಎಂದು ಘೋಷಿಸಲು ಒಪ್ಪಿಗೆ ನೀಡಲಾಗಿದೆ.

ಯಾದಗಿರಿ ಟಲ್ಲೆಯ ದೋರನಹಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಬೀದ‌ರ್ ಜಿಲ್ಲೆಯ ರಾಜೇಶ್ವರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ ನೀಡಲಾಗಿದೆ.

ಇದನ್ನೂ ಓದಿ: Free TV Repair Training-ಉಚಿತ ಟಿವಿ ಮತ್ತು ಎಲೆಕ್ಟ್ರಿಕ್ ಉಪಕರಣ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

ಇಂದಿರಾ ಆಹಾರ ಕಿಟ್‌ನಲ್ಲಿ ಫಲಾನುಭವಿಗಳಿಗೆ ತೊಗರಿ ಬೇಳೆ 1 ಕೆ.ಜಿ., ಅಡುಗೆ ಎಣ್ಣೆ 1 ಲೀ., ಸಕ್ಕರೆ 1ಕೆ.ಜಿ., ಉಪ್ಪು 1 ಕೆ.ಜಿ. ಹಾಗೂ 1 ಕೆ.ಜಿ. ಹೆಸರು ಕಾಳಿನ ಬದಲಿಗೆ ಅದರ ವೆಚ್ಚಕ್ಕನುಗುಣವಾಗಿ 1ರಿಂದ 3 ಸದಸ್ಯರಿಗೆ ¾ ಕೆ.ಜಿ., 3 ರಿಂದ 4 ಸದಸ್ಯರಿರುವ ಕುಟು೦ಬಕ್ಕೆ¾ ಕೆ.ಜಿ. ಹಾಗೂ 5ಕ್ಕೂ ಹೆಚ್ಚು ಸದಸ್ಯರಿರುವ ಕುಟು೦ಬಕ್ಕೆ ¾ ಕೆ.ಜಿ. ತೊಗರಿ ಬೇಳೆಯನ್ನು ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಹಿ೦ದುಳಿದ ವರ್ಗಗಳಿಗೆ ಮೀಸಲಿರುವ ಆದರೆ ಅರ್ಹ ಅಭ್ಯರ್ಥಿಗಳು ಲಭ್ಯತೆಯಿಲ್ಲದ ಕಾರಣ ಭರ್ತಿಯಾಗದೇ ಉಳಿದಿರುವ 67 ಉರ್ದು ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು ಸಾಮಾನ್ಯ ವರ್ಗಕ್ಕೆ ಪರಿವರ್ತಿಸಿ ಭರ್ತಿ ಮಾಡಲು ಒಪ್ಪಿಗೆ ನೀಡಲಾಗಿದೆ.

ಬೆಂಗಳೂರಿನ ಹೆಬ್ಬಾಳದಲ್ಲಿರುವ ಕರ್ನಾಟಕ ಪಶು ಮತ್ತು ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೇರಿದ 4 ಎಕರೆ ಜಾಗವನ್ನು ಹೈಕೋರ್ಟ್ ಅಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕಾಗಿ ಹಸ್ತಾಂತರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: