Sujnananidhi Scholarship-ಸುಜ್ಞಾನನಿಧಿ ಶಿಷ್ಯವೇತನ ಯೋಜನೆಯಡಿ ಉನ್ನತ ಶಿಕ್ಷಣ ಪಡೆಯಲು ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿವೇತನ!

November 13, 2026 | Siddesh

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದ್ದು, ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳ ಉನ್ನತ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2007ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಲಾಯಿತು. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿನಿಯರಿಗೆ ಅವರು ಆಯ್ಕೆ ಮಾಡಿಕೊಂಡಿರುವ ಕೋರ್ಸ್‌ಗೆ ಅನುಗುಣವಾಗಿ ಪ್ರತಿ ತಿಂಗಳು ₹400 ರಿಂದ ₹1,000 ರವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ.

2026-27ನೇ ಸಾಲಿನ ಸುಜ್ಞಾನನಿಧಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಪಾಲಿಸಬೇಕಾದ ವಿಧಾನಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಸುಜ್ಞಾನನಿಧಿ ವಿದ್ಯಾರ್ಥಿವೇತನದ ಉದ್ದೇಶವೇನು?

ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ನೆರವಾಗುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ವಿಶೇಷವಾಗಿ ತಾಂತ್ರಿಕ, ವೈದ್ಯಕೀಯ ಹಾಗೂ ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲಾಗುತ್ತದೆ.

ಈ ಯೋಜನೆಯ ಮೂಲಕ ಇಲ್ಲಿಯವರೆಗೆ ಸುಮಾರು 1.37 ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆದಿದ್ದು, ₹186.01 ಕೋಟಿ ವಿದ್ಯಾರ್ಥಿವೇತನ ವಿತರಿಸಲಾಗಿದೆ ಎಂದು ಪ್ರಕಟಿತ ಮಾಹಿತಿಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು?

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘ ಅಥವಾ ಪ್ರಗತಿಬಂಧು ಸಂಘದ ಸದಸ್ಯರ ಕುಟುಂಬದವರಾಗಿರಬೇಕು.

ಯೋಜನೆಯ ಪ್ರಾಯೋಜಿತ ಸಂಘದ ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿರಬೇಕು.

ಕುಟುಂಬದ ಒಬ್ಬ ವಿದ್ಯಾರ್ಥಿನಿಗೆ ಮಾತ್ರ ಹೊಸ ಅರ್ಜಿ ಸಲ್ಲಿಸಲು ಅವಕಾಶವಿದೆ.

30-06-2025ಕ್ಕಿಂತ ಮೊದಲು ಪ್ರಾರಂಭವಾದ, ಕಂತು ಬಾಕಿ ಇಲ್ಲದ ಸಕ್ರಿಯ ಸಂಘದ ಸದಸ್ಯರ ಹೆಣ್ಣುಮಕ್ಕಳಾಗಿರಬೇಕು.

01-04-2026ರ ನಂತರ ಕಾಲೇಜಿಗೆ ದಾಖಲಾದ ಮೊದಲ ಸೆಮಿಸ್ಟರ್‌ನ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.

ಅಂಗವಿಕಲರು, ಅನಾಥರು ಹಾಗೂ ಏಕಪೋಷಕರನ್ನು ಹೊಂದಿರುವ ವಿದ್ಯಾರ್ಥಿಗಳು ಮತ್ತು ಅನಾಥಾಶ್ರಮದಲ್ಲಿದ್ದು ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಯೋಜನಾಧಿಕಾರಿಗಳ ಶಿಫಾರಸಿನೊಂದಿಗೆ ಅರ್ಜಿ ಸಲ್ಲಿಸಬಹುದು.

ಯಾವ ಯಾವ ಕೋರ್ಸ್‌ಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶವಿದೆ?

MBBS, BAMS, BDS, BHMS, BNYS, B.V.Sc, B.Pharm, D.Pharm, Pharm.D, Nursing, Physiotherapy, Paramedical, Lab Technician, B.Sc Agriculture, B.Sc Forestry, B.Sc Fisheries, B.Sc Horticulture, B.E, B.Tech, Diploma, ITI, MBA, B.Ed, D.Ed, M.Ed, B.V.A, B.Voc, LLB (3 ಮತ್ತು 5 ವರ್ಷ), B.Sc Forensic Science, CA Articleship, B.Sc Nursing, B.Sc Lab Technician.

ಈ ಯೋಜನೆಯಡಿ ಎಷ್ಟು ವಿದ್ಯಾರ್ಥಿವೇತನ ಪಡೆಯಬಹುದು?

ವಿದ್ಯಾರ್ಥಿನಿಯರು ಆಯ್ಕೆ ಮಾಡಿಕೊಂಡಿರುವ ಕೋರ್ಸ್‌ಗೆ ಅನುಗುಣವಾಗಿ ವಿದ್ಯಾರ್ಥಿವೇತನದ ಮೊತ್ತ ನಿರ್ಧಾರವಾಗುತ್ತದೆ.

ಕನಿಷ್ಠ ಮಾಸಿಕ ವಿದ್ಯಾರ್ಥಿವೇತನ: ₹400
ಗರಿಷ್ಠ ಮಾಸಿಕ ವಿದ್ಯಾರ್ಥಿವೇತನ: ₹1,000

ಕೋರ್ಸ್‌ನ ಅವಧಿಗೆ ಅನುಗುಣವಾಗಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಪ್ರತಿ ವರ್ಷ ನವೀಕರಣ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?

  • ಸುಜ್ಞಾನನಿಧಿ ವಿದ್ಯಾರ್ಥಿವೇತನದ ಮನವಿ ಪತ್ರ (ನಮೂನೆ-1).
  • ಪ್ರಸ್ತುತ ವರ್ಷದಲ್ಲಿ ಆಯ್ಕೆ ಮಾಡಿಕೊಂಡಿರುವ ಕಾಲೇಜಿನ ದೃಢೀಕರಣ ಪತ್ರ ಮತ್ತು ಶುಲ್ಕ ಪಾವತಿ ರಸೀದಿ (ನಮೂನೆ-2).
  • ವಿದ್ಯಾರ್ಥಿನಿಯ SSLC ಅಂಕಪಟ್ಟಿ.
  • ವಿದ್ಯಾರ್ಥಿನಿಯ ಬ್ಯಾಂಕ್ ಪಾಸ್‌ಬುಕ್ ಪ್ರತಿ.
  • ವಿದ್ಯಾರ್ಥಿನಿಯ ಆಧಾರ್ ಕಾರ್ಡ್.
  • ಕುಟುಂಬದ ಪಡಿತರ ಚೀಟಿ.
  • ಪೋಷಕರ ಸಂಘದ ನಿರ್ಣಯ ಪುಸ್ತಕ.
  • ಪ್ರಸ್ತುತ ಕೋರ್ಸ್‌ಗೆ ಅರ್ಹತೆ ಪಡೆದ ಹಿಂದಿನ ವರ್ಷದ ಅಂಕಪಟ್ಟಿ.

ಸುಜ್ಞಾನನಿಧಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಹಂತ 1: ಮೊದಲಿಗೆ ನಿಮ್ಮ ಕುಟುಂಬವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘ ಅಥವಾ ಪ್ರಗತಿಬಂಧು ಸಂಘದ ಸದಸ್ಯರಾಗಿರಬೇಕು.

ಹಂತ 2: ನಿಮ್ಮ ಸಂಘದ ವ್ಯಾಪ್ತಿಗೆ ಬರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯನ್ನು ಸಂಪರ್ಕಿಸಬೇಕು.

ಹಂತ 3: ಸುಜ್ಞಾನನಿಧಿ ವಿದ್ಯಾರ್ಥಿವೇತನದ ಅರ್ಜಿ ನಮೂನೆ-1 ಮತ್ತು ಕಾಲೇಜಿನ ದೃಢೀಕರಣ ನಮೂನೆ-2 ಅನ್ನು ಪಡೆದುಕೊಳ್ಳಬೇಕು.

ಹಂತ 4: ಅರ್ಜಿ ನಮೂನೆಯಲ್ಲಿ ವಿದ್ಯಾರ್ಥಿನಿಯ ಹೆಸರು, ವಿಳಾಸ, ಕಾಲೇಜಿನ ವಿವರ, ಕೋರ್ಸ್ ಮತ್ತು ಬ್ಯಾಂಕ್ ಖಾತೆಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಬೇಕು.

ಹಂತ 5: ಅಗತ್ಯವಿರುವ ಎಲ್ಲಾ ದಾಖಲೆಗಳ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಹಂತ 6: ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿಮ್ಮ ಸಂಘದ ವ್ಯಾಪ್ತಿಗೆ ಬರುವ ಯೋಜನಾ ಕಚೇರಿಗೆ ಸಲ್ಲಿಸಬೇಕು.

ಹಂತ 7: ಸಂಬಂಧಪಟ್ಟ ಅಧಿಕಾರಿಗಳು ಅರ್ಜಿಯನ್ನು ಪರಿಶೀಲಿಸಿ ಮುಂದಿನ ಪ್ರಕ್ರಿಯೆ ಕೈಗೊಳ್ಳುತ್ತಾರೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಪ್ರಮುಖ ನಿಯಮಗಳು:

ಹೊಸ ಅರ್ಜಿಗಳನ್ನು ವಿದ್ಯಾರ್ಥಿನಿಯರು ಮಾತ್ರ ಸಲ್ಲಿಸಬಹುದು.

ಒಂದು ವಿದ್ಯಾರ್ಥಿನಿಗೆ ಒಂದು ಕೋರ್ಸ್‌ಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಮೊದಲ ವರ್ಷದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದೆ ನೇರವಾಗಿ ಎರಡನೇ ವರ್ಷಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದ ನವೀಕರಣಕ್ಕೆ ಅವಕಾಶವಿರುವುದಿಲ್ಲ.

ಆನ್‌ಲೈನ್ ಕೋರ್ಸ್‌ಗಳು, ಓಪನ್ ಯೂನಿವರ್ಸಿಟಿ ಕೋರ್ಸ್‌ಗಳು ಹಾಗೂ ಒಂದು ವರ್ಷದ ಅಥವಾ ಅದಕ್ಕಿಂತ ಕಡಿಮೆ ಅವಧಿಯ ಕೋರ್ಸ್‌ಗಳಿಗೆ ಈ ವಿದ್ಯಾರ್ಥಿವೇತನ ಅನ್ವಯಿಸುವುದಿಲ್ಲ.
ವರ್ಷಕ್ಕೆ ₹10,000ಕ್ಕಿಂತ ಹೆಚ್ಚಿನ ವಿದ್ಯಾರ್ಥಿವೇತನವನ್ನು ಸರ್ಕಾರ ಅಥವಾ ಸರ್ಕಾರೇತರ ಸಂಸ್ಥೆಗಳಿಂದ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ:15-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2027

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಸುಜ್ಞಾನನಿಧಿ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಕೆ, ಅರ್ಹತೆ ಮತ್ತು ದಾಖಲೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.
9591770660
6366358320

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: