Swasaya Sanga Subsidy Loan-ಮಹಿಳಾ ಸ್ವ-ಸಹಾಯ ಸಂಘಗಳಿಗೆ ₹1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 21, 2025 | Siddesh
Swasaya Sanga Subsidy Loan-ಮಹಿಳಾ ಸ್ವ-ಸಹಾಯ ಸಂಘಗಳಿಗೆ ₹1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
Share Now:

ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿರುವ ವಿವಿಧ ನಿಗಮಗಳ ಮೂಲಕ ಮಹಿಳಾ ಸ್ವ-ಸಹಾಯ ಸಂಘದ(Swasaya Sanga Subsidy) ಸದಸ್ಯರಿಗೆ ಸ್ವಂತ ಉದ್ದಿಮೆಯನ್ನು ಆರಂಭಿಸಲು ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಜ್ಯದಲ್ಲಿರುವ ವಿವಿಧ ನಿಗಮಗಳ ಮೂಲಕ "ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ" ಅಡಿಯಲ್ಲಿ(Swasaya Sanga Subsidy Loan Scheme) ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Navodaya School Admission-ನವೋದಯ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

ಪ್ರಸ್ತುತ ಲೇಖನದಲ್ಲಿ ಅರ್ಜಿ ಸಲ್ಲಿಸಲು ನಿಗಮದಿಂದ ನಿಗದಿಪದಿಸಿದ ಅರ್ಹತಾ ಮಾನದಂಡಗಳೇನು?ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ,ಎಷ್ಟು ಸಬ್ಸಿಡಿ ನೀಡಲಾಗುತ್ತದೆ?ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Swasaya Sanga Subsidy Eligibility Criteria-ಅರ್ಜಿ ಸಲ್ಲಿಸಲು ನಿಗಮದಿಂದ ನಿಗದಿಪದಿಸಿದ ಅರ್ಹತಾ ಮಾನದಂಡಗಳೇನು?

ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಂದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆ/ಸ್ವಂತ ಉದ್ದಿಮೆಯನ್ನು ಆರಂಭಿಸಲು ಪ್ರಾರಂಭಿಕ ವೆಚ್ಚವನ್ನು ಭರಿಸಲು 2.5 ಲಕ್ಷ ಸಹಾಯಧನವನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿರುವ ನಿಯಮಗಳನ್ನು ಪಾಲನೆ ಮಾಡುವುದು ಅತ್ಯವಶ್ಯಕವಾಗಿದೆ.

ಸಂಘದ ಸದಸ್ಯರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಸಂಘದ ಸದಸ್ಯರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರಬೇಕು.
ಅರ್ಜಿದಾರರ ಸಂಘದ ಸದಸ್ಯರ ವಯಸ್ಸು 21 ರಿಂದ 60 ವರ್ಷದೊಳಗಿರಬೇಕು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು, ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರಬಾರದು.
ಅರ್ಜಿದಾರರ ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಭಾಗಕ್ಕೆ ರೂ 1.5 ಲಕ್ಷ ಹಾಗೂ ನಗರ ಪ್ರದೇಶದಲ್ಲಿರುವವರಿಗೆ ರೂ 2.00 ಲಕ್ಷ ಮೀರಿರಬಾರದು.
ಸಂಘದ ಶೇ 60 ರ ಪರಿಶಿಷ್ಟ ಜಾತಿಯ ಸದಸ್ಯರುಗಳ ಪೈಕಿ ಶೇ 40 ರಷ್ಟು ಸದಸ್ಯರು ನಿಗಮಕ್ಕೆ ಸೇರಿದ ಉಪ ಜಾತಿಯವರಾಗಿರಬೇಕು.
ಸಂಘದ ಸದಸ್ಯರು ಪಡಿತರ ಚೀಟಿಯನ್ನು ಹೊಂದಿರಬೇಕು.

ಇದನ್ನೂ ಓದಿ: RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಸ್ವಾವಲಂಬಿ ಸಾರಥಿ ಯೋಜನೆಯಡಿ ಸಹಾಯಧನದಲ್ಲಿ ಸರಕು ವಾಹನ/ಹಳದಿ ಬೋರ್ಡ್ ಟ್ಯಾಕ್ಸಿ ವಾಹನವನ್ನು ಖರೀದಿ ಮಾಡಲು ಅರ್ಹ ಅಭ್ಯರ್ಥಿಗಳು 10 ಸೆಪ್ಟೆಂಬರ್ 2025 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

Swasaya Sanga Subsidy Loan Amount-ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

"ಪರಿಶಿಷ್ಟ ಜಾತಿ ಸಮುದಾಯದ ಮಹಿಳಾ ಸ್ವಸಹಾಯ ಸಂಘಗಳ ವಿವಿಧ ಉದ್ದೇಶದ ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನವನ್ನು ಈ ಯೋಜನೆಯಡಿ ಒದಗಿಸಲಾಗುತ್ತದೆ. ಪ್ರತಿ ಮಹಿಳಾ ಸದಸ್ಯರಿಗೆ ರೂ 25,000. ಇದರಲ್ಲಿ ಸಹಾಯಧನ ರೂ.15,000 ಹಾಗೂ ಸಾಲ ರೂ10,000 ಗಳಾಗಿರುತ್ತದೆ.

ಕನಿಷ್ಠ 10 ಜನ ಮಹಿಳಾ ಸದಸ್ಯರು ಇರುವ ಸ್ವ-ಸಹಾಯ ಗುಂಪಿಗೆ ಘಟಕ ವೆಚ್ಛ ರೂ. 2.50 ಲಕ್ಷಗಳಂತೆ ನಿಯಮಾನುಸಾರ ಅರ್ಹರಿರುವ ಗುಂಪಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಸದರಿ ಸಾಲದ ಹಣವನ್ನು 36 ಸಮ ಕಂತುಗಳಲ್ಲಿ ಶೇ 4 ರ ಬಡ್ಡಿ ದರದಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕಾಗಿರುತ್ತದೆ.

ಇದನ್ನೂ ಓದಿ: Valmiki Nigama Subsidy Yojane-ವಾಲ್ಮೀಕಿ ನಿಗಮದಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

How To Apply-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರ ಗ್ರಾಮ ಒನ್ ಕೇಂದ್ರ ಅಥವಾ ಕೆಳಗೆ ವಿವರಿಸಿರುವ ಹಂತವನ್ನು ಅನುಸರಿಸಿ ಸ್ವಂತ ನೀವೇ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

Self Help Group Subsidy Loan Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಅರ್ಹರಿರುವ ಮಹಿಳಾ ಸಂಘದ ಸದಸ್ಯರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಕೆಳಗಿನ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹಂತ-1: ಪ್ರಥಮದಲ್ಲಿ ಇಲ್ಲಿ ಕ್ಲಿಕ್ "Self Help Group Subsidy Loan Online Application"ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Loan Interest Subsidy-ರೈತರಿಗೆ ಭರ್ಜರಿ ಸಿಹಿ ಸುದ್ದಿ!ಈ ಯೋಜನೆಯಡಿ ಸಿಗಲಿದೆ ಬಡ್ಡಿ ರಿಯಾಯಿತಿ!

ಹಂತ-2: ಇದಾದ ಬಳಿಕ ಈ ಪೇಜ್ ನಲ್ಲಿ ಮೇಲೆ ಕಾಣುವ "ಇಲಾಖೆಗಳು ಮತ್ತು ಸೇವೆಗಳು" ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ಬಳಿಕ ಈ ಪೇಜ್ ನಲ್ಲಿ "Search" ಬಟನ್ ಮೇಲೆ ಕ್ಲಿಕ್ ಮಾಡಿ "ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆ" ಎಂದು ಟೈಪ್ ಮಾಡಿ "Search" ಬಟನ್ ಮೇಲೆ ಕ್ಲಿಕ್ ಮಾಡಿ ಸರ್ಚ್ ಮಾಡಿದರೆ ಆನ್ಲೈನ್ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

ಹಂತ-3: ಬಳಿಕ ಇಲ್ಲಿ ಕೆಳಗೆ ಕಾಣುವ "ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ" ಎಂದು ತೋರಿಸುವ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ನಮೂದಿಸಿ ಲಾಗಿನ್ ಅಗಿ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: Free Hostel Admission-ಉಚಿತ ಹಾಸ್ಟೆಲ್ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

Documents For Self Help Group Subsidy Loan Yojana-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಸಂಘದ ಸದಸ್ಯರು ಅವಶ್ಯವಾಗಿ ಒದಗಿಸಬೇಕಾದ ದಾಖಲೆಗಳ ಪಟ್ಟಿ ಹೀಗಿದೆ:

  • ಎಲ್ಲಾ ಅರ್ಜಿದಾರರ ಆಧಾರ್‌ ಕಾರ್ಡ್‌/Aadhar
  • ಎಲ್ಲಾ ಅರ್ಜಿದಾರರ ಆಹಾರ ಪಡಿತರ ಚೀಟಿ/Ration Card
  • ಎಲ್ಲಾ ಅರ್ಜಿದಾರರ ಚುನಾವಣಾ ಗುರುತಿನ ಚೀಟಿ/Voter ID
  • ಎಲ್ಲಾ ಅರ್ಜಿದಾರರ ಜಾತಿ ಮತ್ತು ಆದಾಯ ಪ್ರಮಾಣಪತ್ರ/Caste And Income Certificate
  • ಈ ಹಿಂದೆ ನಿಗಮದಿಂದ ಯಾವುದೇ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿಲ್ಲವೆಂದು ಎಲ್ಲಾ ಅರ್ಜಿದಾರರ ಸ್ವಯಂ ಘೋಷಣೆ
  • ಎಲ್ಲಾ ಅರ್ಜಿದಾರರ ಇತ್ತೀಚಿನ ಭಾವಚಿತ್ರ/Photo
  • ಸಂಘದ ಬ್ಯಾಂಕ್‌ ಪಾಸ್‌ ಪುಸ್ತಕ (ಮುಖಪುಟ ಸಹಿತ)/Bank Pass Book
  • ಚಾಲ್ತಿಯಲ್ಲಿರುವ ಸಂಘದ ನೊಂದಣಿ ಪತ್ರ/Registration Certificate
  • ಇತ್ತೀಚಿನ ಕನಿಷ್ಠ 3 ತಿಂಗಳ ಸಂಘದ ನಡವಳಿ ಪುಸ್ತಕದ ಪ್ರತಿ

More Information-ಯೋಜನೆಯ ಬಗ್ಗೆ ಇನ್ನು ಅಧಿಕ ಮಾಹಿತಿಯನ್ನು ಪಡೆಯಲು ಸಂಬಂಧಪಟ್ಟ ವೆಬ್ಸೈಟ್ ಲಿಂಕ್ ಗಳು:

Helpline Number- ಸಹಾಯವಾಣಿ ನಂಬರ್- 9482300400
Official Website- ನಿಗಮದ ಜಾಲತಾಣ- Click Here
Application Link-ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್-Apply Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: