swavalambi sarathi-2024: ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ ಖರೀದಿಗೆ 3 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
ರಾಜ್ಯದ ವಿವಿಧ ಅಭಿವೃದ್ದಿ ನಿಗಮದಿಂದ ಸಹಾಯಧನದಲ್ಲಿ ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ(swavalambi sarathi) ಖರೀದಿ ಮಾಡಲು ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. swavalambi sarathi application-2024, auto rickshaw, luggage vehicle, car loan, taxi subsidy yojana, swavalambi sarathi online application, swavalambi sarathi application link, car, car subsidy scheme, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಅರ್ಜಿ, ಸ್ವಾವಲಂಬಿ ಸಾರಥಿ, ಸ್ವಾವಲಂಬಿ ಸಾರಥಿ ಅರ್ಜಿ
ರಾಜ್ಯದ ವಿವಿಧ ಅಭಿವೃದ್ದಿ ನಿಗಮದಿಂದ ಸಹಾಯಧನದಲ್ಲಿ ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ(swavalambi sarathi) ಖರೀದಿ ಮಾಡಲು ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿರುದ್ಯೋಗ ಯುವಕರು ಸ್ವಾವಲಂಬಿ ಸಾರಥಿ ಯೋಜನೆಯಡಿ 3 ಲಕ್ಷ ಸಹಾಯಧನದಲ್ಲಿ ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾವನ್ನು ಖರೀದಿ ಮಾಡಿ ಸ್ವ-ಉದ್ಯೋಗವನ್ನು ಆರಂಭಿಸಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸ್ವಾವಲಂಬಿ ಸಾರಥಿ ಯೋಜನೆಯಡಿ ಸಬ್ಸಿಡಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೇನು? ಇತ್ಯಾದಿ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!
who can apply for swavalambi sarathi-ಅರ್ಜಿ ಸಲ್ಲಿಸಲು ಅರ್ಹರು:
1) ಅರ್ಜಿದಾರರು ಕರ್ನಾಟಕದ ಶಾಶ್ವತ ನಿವಾಸಿಯಾಗಿಬೇಕು.
2) ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದ ಒಳಗಿರಬೇಕು.
3) ಅರ್ಜಿದಾರರ ಕುಟುಂಬದಲ್ಲಿ ಯಾವುದೇ ಸದಸ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಯಾಗಬಾರದು.
4) ಅರ್ಜಿದಾರರು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಿದ ಚಾಲನಾ ಪರವಾನಗಿ ಪ್ರಮಾಣ ಪತ್ರವನ್ನು ಹೊಂದಿರಬೇಕು.
5) ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 4.5 ಲಕ್ಷ ಕ್ಕಿಂತ ಕಡಿಮೆ ಇರಬೇಕು.
Documents for swalambi sarathi yojana-ಅಗತ್ಯ ದಾಖಲೆಗಳು:
1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ/Aadhar card.
2) ವಾಹನ ಚಾಲನಾ ಪರವಾನಗಿ ಪತ್ರದ ಪ್ರತಿ?Driving licence.
3) ಬ್ಯಾಂಕ್ ಪಾಸ್ ಬುಕ್ ಪ್ರತಿ/bank pass book.
4) ವಾಹನದ ಅಂದಾಜು ದರಪಟ್ಟಿ/Vehicle quotation.
5) ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste and income certificate.
6) ಅರ್ಜಿದಾರರ ಪೋಟೋ/Photo.
ಇದನ್ನೂ ಓದಿ: Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!
ಇದನ್ನೂ ಓದಿ: Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!
Swalambi sarathi subsidy details-ಸಹಾಯಧನ ವಿವರ:
ಸ್ವಾವಲಂಬಿ ಸಾರಥಿ ಯೋಜನೆಯಡಿ ವಿವಿಧ ನಿಗಮದಿಂದ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು ಅಥವಾ ಗರಿಷ್ಠ ರೂ. 3,00,000/- ರ ವರೆಗೆ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು.
Who can apply for swavalambi sarathi-ಎಲ್ಲಿ ಅರ್ಜಿ ಸಲ್ಲಿಸಬೇಕು?
ಆಸಕ್ತ ಅರ್ಹ ಅರ್ಜಿದಾರರು ಮೇಲೆ ತಿಳಿಸಿರುವ ಅಗತ್ಯ ದಾಖಲೆಗಳ ಸಮೇತ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್/ ಕಂಪ್ಯೂಟರ್ ಸೆಂಟರ್ ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: Krishi honda-2024: ಈ ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!
Last date for application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15 ಸೆಪ್ಟೆಂಬರ್ 2024 ಕೊನೆಯ ದಿನಾಂಕವಾಗಿದೆ.
ಇನ್ನೂ ಹೆಚ್ಚಿನ ಮಾಹಿತಿ ಪಡೆಯಲು: Click here