Yashashwini Card- ಯಶಸ್ವಿನಿ ಕಾರ್ಡ ಪಡೆಯಲು ಕೊನೆಯ ದಿನಾಂಕ ಮುಂದೂಡಿಕೆ!
February 4, 2025ರಾಜ್ಯ ಸರಕಾರದಿಂದ ಯಶಸ್ವಿನಿ ಯೋಜನೆಯಡಿ ಅರ್ಹ ಫಲಾನುಭವಿಗಳ ನೋಂದಣಿಯನ್ನು ಮಾಡಿಕೊಳ್ಳಲು ನಿಗದಿಪಡಿಸಿದ ಕೊನೆಯ(Yashashwini Card Application Last Date) ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಪ್ರಕಟಿಸಲಾಗಿದೆ. ಈಗಾಗಲೇ ಕಳೆದ 2 ತಿಂಗಳಿನಿಂದ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಹಕಾರ ಇಲಾಖೆಯಿಂದ ಯಶಸ್ವಿನಿ ಯೋಜನೆಯ(Yashashwini Yojana) ಸೌಲಭ್ಯವನ್ನು ಪಡೆಯಲು ಅರ್ಹ ಅರ್ಜಿದಾರರು ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು...