Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ 18,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ವಿವರ!

December 17, 2025 | Siddesh
Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ 18,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ವಿವರ!
Share Now:

ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನದ ಅಡಿಯಲ್ಲಿ 2025-2026 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ(Tata Capital Scholarship)ಪಿಯುಸಿ ಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪದವಿ, ಪಾಲಿಟೆಕ್ನಿಕ್/ಡಿಪ್ಲೊಮಾ ಅಥವಾ ಐಟಿಐ ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಲಿಮಿಟೆಡ್‌ನ ವತಿಯಿಂದ 12,000 ರಿಂದ 18,000 ದ ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನದ ಅಡಿಯಲ್ಲಿ ವಿದ್ಯಾರ್ಥಿಗಳು(Tata Capital student scholarship)ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಯಾವುದೆ ಆರ್ಥಿಕ ಅಡಚಣೆಗಳು ಬಾರದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಅವರ ಮುಂದಿನ ಕನಸನ್ನು ನನಸಾಗಿಸಿಕೊಂಡು ಅವರ ಗುರಿಯನ್ನು ತಲುಪುವ ಉದ್ದೇಶದಿಂದ ಈ ವಿದ್ಯಾರ್ಥಿವೇತನವನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: NLM Subsidy Yojana-NLM ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಉದ್ದಿಮೆ ಪ್ರಾರಂಭಿಸಲು ಅವಕಾಶ!

ಪ್ರಸ್ತುತ ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಕೊನೆಯ ದಿನಾಂಕ ಯಾವುದು? ವಿದ್ಯಾರ್ಥಿವೇತನದ ಅಡಿಯಲ್ಲಿ ಎಷ್ಟು ಸಹಾಯಧನವನ್ನು ಪಡೆಯಬಹುದು? ಇನ್ನೂ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಮುಕ್ತಾಯದ ದಿನಾಂಕ: 26 ಡಿಸೆಂಬರ್ 2025

ಇದನ್ನೂ ಓದಿ: Women SHG Subsidy-ಮಹಿಳೆಯರಿಗೆ ಗುಡ್ ನ್ಯೂಸ್! ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

Scholorship Amount-ಎಷ್ಟು ಸಹಾಯಧನವನ್ನು ಪಡೆಯಬಹುದು?

ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವಹಾಗೆ ವಿದ್ಯಾರ್ಥಿವೇತನವನ್ನು ಪಡೆಯಬಹುದು:

60% – 80% ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು: 12,000 ವಿದ್ಯಾರ್ಥಿವೇತನವನ್ನು ಪಡೆಯಬಹುದು.

81% – 90% ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು: 15,000 ವಿದ್ಯಾರ್ಥಿವೇತನ

91% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು: 18,000 ವಿದ್ಯಾರ್ಥಿವೇತನ

ಇದನ್ನೂ ಓದಿ: PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

Who Can Apply This Scholorship-ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಅರ್ಜಿದಾರ ಅಭ್ಯರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಭಾರತದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಪದವಿಪೂರ್ವ ಪದವಿ ಕಾರ್ಯಕ್ರಮಗಳಿಗೆ ಅಂದರೆ ಬಿ.ಕಾಂ, ಬಿ.ಎಸ್ಸಿ, ಬಿಎ, ಅಥವಾ ಡಿಪ್ಲೊಮಾ / ಐಟಿಐ ಕೋರ್ಸ್‌ಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಯು ಹಿಂದಿನ ತರಗತಿ, ಸೆಮಿಸ್ಟರ್ ಅಥವಾ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಒಳಗಿರಬೇಕು.

ಭಾರತದಲ್ಲಿ ಮಾನ್ಯತೆ ಪಡೆದ ಕಾಲೇಜು, ವಿಶ್ವವಿದ್ಯಾಲಯ ಅಥವಾ ತಾಂತ್ರಿಕ ಸಂಸ್ಥೆಯಿಂದ ಶಿಕ್ಷಣ ಪಡೆಯುತ್ತಿರಬೇಕು.

ಟಾಟಾ ಕ್ಯಾಪಿಟಲ್ ಮತ್ತು ಬಡ್ಡಿ4ಸ್ಟಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

What are the documents-ಅರ್ಜಿ ಸಲ್ಲಿಸಲು ಲಗತ್ತಿಸಬೇಕಾದ ದಾಖಲಾತಿಗಳಾವುವು?

ವಿದ್ಯಾರ್ಥಿಯ ಆಧಾರ್ ಕಾರ್ಡ್/Aadhar card

ಪ್ರಸ್ತುತ ವರ್ಷದ ಶುಲ್ಕ ರಶೀದಿ/Current year fee receipt

ಪ್ರವೇಶ ಪತ್ರ/Entrance Certificate

ಆದಾಯ ಪ್ರಮಾಣ ಪತ್ರ/Income Certificate

ಜಾತಿ ಪ್ರಮಾಣ ಪತ್ರ/Caste Certificate

ಹಿಂದಿನ ತರಗತಿ ಅಂಕಪಟ್ಟಿ/Marks Card

ಬ್ಯಾಂಕ್ ಪಾಸ್ ಪುಸ್ತಕ/Bank Passbook

ಫೋಟೊ/Photocopy

ಇದನ್ನೂ ಓದಿ: Free Embroidery Training-ಮಹಿಳೆಯರಿಗೆ ಸಿಹಿ ಸುದ್ದಿ ಉಚಿತ ಎಂಬ್ರಾಯ್ಡರಿ ಕಲಿಕೆ ತರಬೇತಿ!

ಇದನ್ನೂ ಓದಿ: Subsidy Scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ 1.00 ಲಕ್ಷ ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

Step-1: ಅರ್ಜಿದಾರ ಅಭ್ಯರ್ಥಿಯು ಮೊದಲಿಗೆ ಈ ಲಿಂಕ್ "Online Application" ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ತದನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅಭ್ಯರ್ಥಿಗಳು ಈ ವೆಬ್ಸೈಟ್ ಅನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿರುವವರು “Create an Account” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ಸಿದ್ದಪಡಿಸಿಕೊಂಡು ನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಲಾಗಿನ್ ಆಗಬೇಕು.

Step-3: ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

More Information About This Scholorship-ಈ ವಿದ್ಯಾರ್ಥಿವೇತನದ ಬಗ್ಗೆ ಇನ್ನೂ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: