Taxi Subsidy Scheme-ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಶೇ 50% ಸಹಾಯಧನದಲ್ಲಿ ಟ್ಯಾಕ್ಸಿ ಖರೀದಿಸಲು ಅರ್ಜಿ ಆಹ್ವಾನ!

October 24, 2025 | Siddesh
Taxi Subsidy Scheme-ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಶೇ 50% ಸಹಾಯಧನದಲ್ಲಿ ಟ್ಯಾಕ್ಸಿ ಖರೀದಿಸಲು ಅರ್ಜಿ ಆಹ್ವಾನ!
Share Now:

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಲ್ಲಿ(Taxi Subsidy) ಸಾಲ ಮತ್ತು ವಿವಿಧ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ(Christian Development Corporation) ವಿವಿಧ ಅಭಿವೃದಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಯೋಜನೆಯಡಿ ಪ್ರಯೋಜನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಇದನ್ನೂ ಓದಿ: Free Photography Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!

ಇಂದಿನ ಲೇಖನದಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಯಾವೆಲ್ಲ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡಲಾಗುತ್ತದೆ? ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಯಾವೆಲ್ಲ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡಲಾಗುತ್ತದೆ?ಯೋಜನೆವಾರು ಸಬ್ಸಿಡಿ ವಿವರ?ಅರ್ಜಿ ಸಲ್ಲಿಸಲು ನಿಗಮದಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳೇನು?ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?ಅರ್ಜಿ ಸಲ್ಲಿಸಲು ದಾಖಲಾತಿಗಳು ಯಾವುವು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ.

Karnataka Christian Development Corporation Limited- ನಿಗಮದಿಂದ ಯಾವೆಲ್ಲ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡಲಾಗುತ್ತದೆ?

  • ಅರಿವು ವಿದ್ಯಾಭ್ಯಾಸ ಸಾಲ ಯೋಜನೆ/Arivu Education Loan
  • ವಿದೇಶಿ ವಿಧ್ಯಾಭ್ಯಾಸ ಸಾಲ ಯೋಜನೆ
  • ಸ್ವಾವಲಂಬಿ ಸಾರಥಿ ಯೋಜನೆ(ಟ್ಯಾಕ್ಸಿ, ಗೂಡ್ಸ್, ಪ್ಯಾಸೆಂಜರ್ ಆಟೋರಿಕ್ಷಾ)/Swavalambi Sarathi
  • ಶ್ರಮಶಕ್ತಿ ಯೋಜನೆ/Shrama Shakti
  • ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ
  • ವೃತ್ತಿ ಪ್ರೋತ್ಸಾಹ ಸಾಲ ಯೋಜನೆ
  • ಗಂಗಾ ಕಲ್ಯಾಣ ಯೋಜನೆ/Ganga Kalyana
  • ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ/Udyami Nera Sala
  • ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ/Self Help Group

ಇದನ್ನೂ ಓದಿ: PF Amount Withdrawal-ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ! ಇನ್ಮುಂದೆ ಶೇ 75% ಹಣ ವಿತ್ ಡ್ರಾ ಮಾಡಬಹುದು!

Scheme Wise Subsidy Details-ಯೋಜನೆವಾರು ಸಬ್ಸಿಡಿ ವಿವರ:

ಅರಿವು ವಿದ್ಯಾಭ್ಯಾಸ ಸಾಲ ಯೋಜನೆ: ವೃತ್ತಿಪರ ಪದವಿ ಕೋರ್ಸ್‌ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರತಿ ವರ್ಷ ₹50,000ರಿಂದ ₹5.00 ಲಕ್ಷದ ವರೆಗೆ ಸಾಲ ಪಡೆಯಬಹುದು. ಸಾಲ ಮರು ಪಾವತಿ ಪ್ರಾರಂಭಕ್ಕೆ ಕೋರ್ಸ್ ಮುಗಿದು 6 ತಿಂಗಳು ಸಮಯಾವಕಾಶವಿರುತ್ತದೆ ಮತ್ತು 2% ಸೇವಾ ಶುಲ್ಕ ವಿಧಿಸಲಾಗುತ್ತದೆ.

ವಿದೇಶಿ ವಿಧ್ಯಾಭ್ಯಾಸ ಸಾಲ ಯೋಜನೆ: ವಿದ್ಯಾರ್ಥಿಗಳು ಮಾನ್ಯತೆ ಪಡೆದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯ ಅಧ್ಯನದ ಸಲುವಾಗಿ ಗರಿಷ್ಠ ₹20.00 ಲಕ್ಷವರೆಗೆ ಬಡ್ಡಿರಹಿತ ಸಾಲವನ್ನು ಪಡೆಯಬಹುದು. ಈ ಸಾಲವನ್ನು ಕೋರ್ಸ್ ಪೂರ್ಣಗೊಂಡು ಆರು ತಿಂಗಳ ನಂತರ 60 ಕಂತುಗಳಲ್ಲಿ ಹಿಂತಿರುಗಿಸಬೇಕು.

ಸ್ವಾವಲಂಬಿ ಸಾರಥಿ ಯೋಜನೆ(ಟ್ಯಾಕ್ಸಿ, ಗೂಡ್ಸ್, ಪ್ಯಾಸೆಂಜರ್ ಆಟೋರಿಕ್ಷಾ): ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಫಲಾನುಭವಿಗಳು ರಾಷ್ಟ್ರೀಯಕೃತ ಬ್ಯಾಂಕುಗಳು ಅಥವಾ ಆರ್‌ಬಿಐ ಮಾನ್ಯತೆ ಪಡೆದ ಹಣಕಾಸು ಸಂಸ್ಥೆಗಳ ಮೂಲಕ ಟ್ಯಾಕ್ಸಿಗಳು, ಸರಕು ವಾಹನಗಳು ಅಥವಾ ಪ್ರಯಾಣಿಕರ ಆಟೋ ರಿಕ್ಷಾಗಳನ್ನು ಖರೀದಿಸಲು, ವಾಹನದ ಬೆಲೆಯ 50% ರಷ್ಟು ಅನುದಾನವನ್ನು ಪಡೆಯಬಹುದು — ಗರಿಷ್ಠ ರೂ. 3.00 ಲಕ್ಷ (ಆಟೋ ರಿಕ್ಷಾಗಳಿಗೆ ರೂ. 75,000 ವರೆಗೆ)ದ ವರೆಗೆ ಈ ಯೋಜನೆಯಡಿ ಸಬ್ಸಿಡಿಯನ್ನು ಪಡೆಯಬಹುದು.

ಇದನ್ನೂ ಓದಿ: Mahindra Scholarship-ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ರೂ 5,500/- ಪಡೆಯಲು ಅರ್ಜಿ ಅಹ್ವಾನ!

ಶ್ರಮಶಕ್ತಿ ಯೋಜನೆ: ಕುಲಕಸುಬುದಾರರು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಅಥವಾ ಸಣ್ಣ ವ್ಯಾಪಾರಗಳನ್ನು ಪ್ರಾರಂಭಿಸಲು ರೂ.50,000 ದವರೆಗೆ ಸಹಾಯಧನ ಪಡೆಯಬಹುದು (50% ಸಾಲ ಮತ್ತು 50% ಅನುದಾನ). ಈ ಸಾಲವನ್ನು ಒಂದು ತಿಂಗಳ ನಂತರ ಪ್ರತಿ ತಿಂಗಳು ಸಮಾನವಾಗಿ 36 ಕಂತುಗಳಲ್ಲಿ 4% ಬಡ್ಡಿದರದಲ್ಲಿ ತೀರಿಸಬೇಕಾಗುತ್ತದೆ.

ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ: ವಿಧವೆಗಳು, ವಿಚ್ಛೇದಿತರು ಅಥವಾ ಅವಿವಾಹಿತ ಕ್ರೈಸ್ತ ಮಹಿಳೆಯರು ರೂ.50,000 ಸಹಾಯಧನವನ್ನು (50% ಸಾಲ, 50% ಅನುದಾನ) ಪಡೆಯಬಹುದು. ಈ ಸಾಲವನ್ನು ಒಂದು ತಿಂಗಳ ಬಳಿಕ 4% ಬಡ್ಡಿದರದಲ್ಲಿ 36 ಸಮಾನ ಮಾಸಿಕ ಕಂತುಗಳಲ್ಲಿ ಮರು ಪಾವತಿಸಲಾಗುತ್ತದೆ.

ವೃತ್ತಿ ಪ್ರೋತ್ಸಾಹ ಸಾಲ ಯೋಜನೆ: ಫಲಾನುಭವಿಗಳು ಸಣ್ಣ ಪ್ರಮಾಣದ ವ್ಯಾಪಾರ, ಚಿಲ್ಲರೆ ಮಾರಾಟ ಮತ್ತು ರಿಪೇರಿ ಸೇವೆಗಳಿಗಾಗಿ ರೂ.1.00 ಲಕ್ಷ ಸಹಾಯವನ್ನು ಪಡೆಯಬಹುದು (50% ಸಾಲ, 50% ಅನುದಾನ). ಸಾಲದ ಮೊತ್ತವನ್ನು ಒಂದು ತಿಂಗಳ ನಂತರ 4% ಬಡ್ಡಿದರದಲ್ಲಿ 36 ಸಮಾನ ಕಂತುಗಳಲ್ಲಿ ಹಿಂತಿರುಗಿಸಬೇಕು.

ಗಂಗಾ ಕಲ್ಯಾಣ ಯೋಜನೆ: ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಮುದಾಯದಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ 4.0 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಿರುತ್ತದೆ ಮತ್ತು ಇತರೆ ಜಿಲ್ಲೆಗಳಿಗೆ ರೂ. 3.0 ಲಕ್ಷಗಳನ್ನು ನಿಗದಿಪಡಿಸಿರುತ್ತದೆ.

ಇದನ್ನೂ ಓದಿ: B-Khata To A-Khata-ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಪಡೆಯಿರಿ!

ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ: ಈ ಯೋಜನೆಯಡಿಯಲ್ಲಿ ವ್ಯಾಪಾರ/ಉದ್ದಿಮೆ ಚಟುವಟಿಕೆ ಕೈಗೊಳ್ಳಲು ಬಯಸುವ ಫಲಾನುಭವಿಗಳಿಗೆ ಆಸ್ತಿಯ (ಕಟ್ಟಡ/ಭೂಮಿ) ಅಡಮಾನದ ಮೇಲೆ ಸಾಲವನ್ನು ಒದಗಿಸಲಾಗುವುದು.

ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ: ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿ ಮಾಡುವ ಸಲುವಾಗಿ, ರಾಷ್ಟೀಕೃತ/ಶೆಡ್ಯೂಲ್‌ ಬ್ಯಾಂಕ್/RBI ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕವೆಚ್ಚದ ಶೇ.50 ಅಥವಾ ಗರಿಷ್ಠ ರೂ.2.00 ಲಕ್ಷ ಸಹಾಯಧನವನ್ನು ನಿಗಮದಿಂದ ಒದಗಿಸಲಾಗುವುದು. ಸಹಾಯಧನವು ಬ್ಯಾಕ್‌ಎಂಡ್‌ ಸಬ್ಸಿಡಿಯಾಗಿದ್ದು ಸ್ವಸಹಾಯ ಸಂಘಗಳು ಆರ್ಥಿಕ ಬ್ಯಾಂಕ್‌ಗಳಿಂದ ಪಡೆದ ಸಾಲದ ಮರುಪಾವತಿಗೆ ಹೊಂದಾಣಿಕೆ ಮಾಡಲಾಗುತ್ತದೆ.

ಇದನ್ನೂ ಓದಿ: Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿಗೆ ನೋಂದಣಿ ಪ್ರಾರಂಭ!

Who Can Apply-ಅರ್ಜಿ ಸಲ್ಲಿಸಲು ನಿಗಮದಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳೇನು?

  • ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಅರ್ಜಿದಾರರು ಮತೀಯ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರಬೇಕು.
  • ಈ ಹಿಂದೆ ನಿಗಮದಿಂದ ಯಾವುದೇ ಯೋಜನೆ ಅಡಿಯಲ್ಲಿ ಸೌಲಭ್ಯವನ್ನು ಪಡೆದಿರಬಾರದು.
  • ಅಭ್ಯರ್ಥಿಯ ವಯಸ್ಸು 18 ರಿಂದ 55 ವರ್ಷದ ಒಳಗಿರಬೇಕು.
  • ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು 4.5 ಲಕ್ಷಕ್ಕಿಂತ ಕಡೆಮೆ ಇರಬೇಕು.

Online Application-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಈ ಮೇಲೆ ವಿವರಿಸಿರುವ ಯೋಜನೆಯ ಪ್ರಯೋಜನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಇದಕ್ಕಾಗಿ ಈ ಕೆಳಗಿನ ಹಂತಗಳನ್ನು ಅನುಸರಿಸಿ.

Step-1: ಅಭ್ಯರ್ಥಿಗಳು ಮೊದಲಿಗೆ Online Application ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ನಿಗಮದ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

Step-2: ಇಲ್ಲಿ ಯೋಜನೆವಾರು ವಿವರ ತೋರಿಸುತ್ತದೆ ಯೋಜನೆಯ ಮುಂದೆ ಕಾಣೂವ "ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ "ಹೊಸ ಬಳದೆಕಾರರ? ಇಲ್ಲಿ ನೋಂದಾಯಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ನಮೂದಿಸಿ OTP ಅನ್ನು ಹಾಕಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಳ್ಳಿ.

Step-3: ಬಳಿಕ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಮತ್ತು ಪಾಸ್ವರ್ಡ್ ಹಾಕಿ ಲಾಗಿನ್ ಅದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.

Documents-ಅರ್ಜಿ ಸಲ್ಲಿಸಲು ದಾಖಲಾತಿಗಳು:

ಕರ್ನಾಟಕದ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯ ಸೌಲಭ್ಯವನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

  • ರೇಷನ್ ಕಾರ್ಡ್
  • ಆಧಾರ್ ಕಾರ್ಡ್
  • ಗುರುತಿನ ಚೀಟಿ
  • ಬ್ಯಾಂಕ್ ಖಾತೆ ಪುಸ್ತಕದ ಪ್ರತಿ
  • ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಯೋಜನಾ ವರದಿ ಹಾಗೂ
  • ಅರ್ಜಿದಾರರ ಹಾಗೂ ಜಾಮೀನುದಾರರ ಎರಡು ಭಾವಚಿತ್ರಗಳನ್ನು ಸಲ್ಲಿಸಬೇಕು.
  • ಕಡ್ಡಾಯವಾಗಿ ಐಎಫ್‍ಎಸ್‍ಸಿ ಕೋಡ್ ಇರುವ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿಯನ್ನು ಸಲ್ಲಿಸಬೇಕು.

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಯೋಜನೆಗಳ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಸಹಾಯವಾಣಿ- 6360753075
ಅಧಿಕೃತ ಮೇಲ್ ವಿಳಾಸ- [email protected]
ಅಧಿಕೃತ ವೆಬ್ಸೈಟ್- Click Here
ಕಚೇರಿ ವಿಳಾಸ- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಉತ್ತರ ವಿಭಾಗ, #40, 2ನೇ ಅಡ್ಡ ರಸ್ತೆ, ಇಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ, 4ನೇ ಮುಖ್ಯ ರಸ್ತೆ, ವಸಂತಪ್ಪ ಬ್ಲಾಕ್, ಗಂಗಾ ನಗರ, ಬೆಂಗಳೂರು-560032

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: