Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 25, 2026 | Siddesh

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಟ್ಯಾಕ್ಸಿ,ಸರಕು ವಾಹನ ಅಥವಾ ಆಟೋ ರಿಕ್ಷಾ ಖರೀದಿ ಮಾಡಲು ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರತಿ ವರ್ಷದಂತೆ ಈ ಸಾಲಿನಲ್ಲಿಯು ಸಹ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವನ್ನು ಮಾಡಿಕೊಡಲಾಗಿದ್ದು ಪ್ರಸ್ತುತ ಲೇಖನದಲ್ಲಿ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳುವುದರ ಬಗ್ಗೆ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ!

ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಪ್ರಯೋಜನ ಪಡೆಯುವುದು ಹೇಗೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

Swavalambi Sarathi Scheme Amount-ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

ಪ್ರಸ್ತುತ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು ಅಥವಾ ಗರಿಷ್ಠ ರೂ. 3,00,000/- ರ ವರೆಗೆ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ ರೂ. 75,000/- ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ನಿಗಮದ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Free Media Kit-ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಮೀಡಿಯಾ ಕಿಟ್: ಅರ್ಜಿ ಅಹ್ವಾನ!

Application Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಸೆಪ್ಟೆಂಬರ್ 2026

Swavalambi Sarathi Scheme Eligibility-ಯಾರೆಲ್ಲ ಅರ್ಜಿ ಸಲ್ಲಿಸಲು ಅವಕಾಶವಿದೆ?

  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ವರ್ಗಕ್ಕೆ ಸೇರಿದವರಾಗಿರಬೇಕು.
  • ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
  • ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಅರ್ಜಿದಾರರ ಆದಾಯವು ರೂ. 6,00,000/- ಕ್ಕಿಂತ ಕಡಿಮೆ ಇರಬೇಕು.
  • ಅರ್ಜಿದಾರರು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಚಾಲನಾ ಪರವಾನಗಿ ಹೊಂದಿರಬೇಕು.
  • ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ಉದ್ಯೋಗಿಯಾಗಬಾರದು.
  • ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Sheep Farming Training-ಬೆಂಗಳೂರು ಕೃಷಿ ವಿವಿಯಿಂದ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Documents For Application-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯವಿರುವ ಅಗತ್ಯ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

  • ಆಧಾರ್ ಕಾರ್ಡ್ ಪ್ರತಿ/Aadhar
  • ವಾಹನ ಚಾಲನಾ ಪರವಾನಗಿ ಪ್ರತಿ/DL
  • ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass
  • ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ ಮತ್ತು ಆದಾಯ ಪ್ರಮಾಣಪತ್ರ/Caste And Income
  • ಖರೀದಿಸಲು ಇಚ್ಚಿಸಿರುವ ವಾಹನದ ಅಂದಾಜು ದರಪಟ್ಟಿ/Vehicle Quotation
  • ಸ್ವಯಂ ಘೋಷಣೆ ಪತ್ರ(ನಿಗಮದ ಅಧಿಕೃತ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಿ)
  • ಮೊಬೈಲ್ ನಂಬರ್/Mobile Number

ಇದನ್ನೂ ಓದಿ: Parivartan Programme-ಪರಿವರ್ತನ್ ECSS ಕಾರ್ಯಕ್ರಮ ವತಿಯಿಂದ ₹18,000 ವಿದ್ಯಾರ್ಥಿವೇತನ!ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Swavalambi Sarathi Online Application-ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದು?

ಅರ್ಜಿದಾರರು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅಥವಾ ಅರ್ಜಿ ಸಲ್ಲಿಕೆ ಕುರಿತು ಗೊಂದಲವಿದ್ದಲ್ಲಿ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

Step-1: ಮೊದಲಿಗೆ ಈ Apply Now ವೆಬ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Reliance Foundation Scholarship-ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷದವರೆಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

Taxi Subsidy Scheme

ಇದನ್ನೂ ಓದಿ: Farmer Award Application-ಮುಂಗಾರು ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ!ರೂ 50,000/- ದ ವರೆಗೆ ಬಹುಮಾನ ನಿಗದಿ!

Step-2: ನಂತರ ಇಲ್ಲಿ ಮುಖಪುಟದಲ್ಲಿ ಕೆಳಗೆ ಕಾಣಿಸುವ "ಸ್ವಾವಲಂಬಿ ಸಾರಥಿ ಯೋಜನೆ" ಬಟನ್ ಮೇಲೆ ಕ್ಲಿಕ್ ಮಾಡಿ "ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ಬಳಿಕ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನ್ ನಮೂದಿಸಿ OTP ಅನ್ನು ಪಡೆದು ಬಳಿಕ ಲಾಗಿನ್ ಅಗಿ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

Alpasankyatha Nigama Helpline Number-ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ- 8277799990

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: