Teacher Recruitment-ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,105 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!

July 18, 2026 | Siddesh
Teacher Recruitment-ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,105 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!
Share Now:

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಎದುರು ನೋಡುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಬಂಪರ್ ಕೊಡುಗೆ ನೀಡಿದೆ. 2026-27ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಬರುವ ವಿವಿಧ ವೃಂದದ ಒಟ್ಟು 15,105 ಬೋಧನಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಈ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಎರಡು ಪ್ರಮುಖ ಭಾಗಗಳಾಗಿ ವಿಂಗಡಿಸಲಾಗಿದೆ. ಕಲ್ಯಾಣ ಕರ್ನಾಟಕ (Kalyana Karnataka) ಪ್ರದೇಶದ ಜಿಲ್ಲೆಗಳಿಗೆ ಒಟ್ಟು 6,967 ಹುದ್ದೆಗಳನ್ನು ಮೀಸಲಿಡಲಾಗಿದ್ದು, ಕಲ್ಯಾಣ ಕರ್ನಾಟಕೇತರ (Non Kalyana Karnataka) ಅಂದರೆ ಉಳಿದ ಭಾಗಗಳಿಗೆ ಒಟ್ಟು 8,033 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಆರ್ಥಿಕ ಇಲಾಖೆಯ ಸಹಮತಿಯ ಮೇರೆಗೆ ಜುಲೈ 14, 2026 ರಂದು ಶಾಲಾ ಶಿಕ್ಷಣ ಇಲಾಖೆಯು ಈ ಸಂಬಂಧಿತ ಅಧಿಕೃತವಾಗಿ ಆದೇಶವನ್ನು ಬಿಡುಗಡೆಗೊಳಿಸಿದೆ.

ಇದನ್ನೂ ಓದಿ: GKVK Bakery Training-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಶಿಕ್ಷಕರ ಈ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ಕಾಯ್ದುಕೊಳ್ಳಲು ಸರ್ಕಾರವು ಹೊಸ ನಿಯಮಗಳ ಕರಡು ಅಧಿಸೂಚನೆಯಂತೆ ಪ್ರಕ್ರಿಯೆ ನಡೆಸಲು ಮುಂದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ, ಶಿಕ್ಷಕರ ಅರ್ಹತಾ ಪರೀಕ್ಷೆ (TET) ಹಾಗೂ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಸಂಪೂರ್ಣವಾಗಿ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಜೊತೆಗೆ, ಈ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಸುಸೂತ್ರವಾಗಿ ನಡೆಸಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ 16 ಸದಸ್ಯರ ವಿಶೇಷ ಪರೀಕ್ಷಾ ಪ್ರಾಧಿಕಾರವನ್ನು ರಚಿಸಲಾಗಿದೆ.

Teacher Recruitment in karnataka-ಒಟ್ಟು ಎಷ್ಟು ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ?

ರಾಜ್ಯದ ಸರ್ಕಾರಿ ಶಾಲೆಗಳ ಶ್ರೇಯೋಭಿವೃದ್ಧಿಗಾಗಿ ಒಟ್ಟು 15,105 ಬೋಧನಾ ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಸಂಪೂರ್ಣ ಒಪ್ಪಿಗೆ ನೀಡಿದೆ.

ಅಧಿಕೃತ ಆದೇಶದ ಪ್ರತಿ:

Teacher Recruitment 2026

ಇದನ್ನೂ ಓದಿ: Gruhajoythi Scheme-ಆಧಾರ್ ಅಪ್ಡೇಟ್ ಮಾಡದಿದ್ದರೆ ಗೃಹಜ್ಯೋತಿ ಕ್ಯಾನ್ಸಲ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

Teacher Recruitment in karnataka

ಇದನ್ನೂ ಓದಿ: Cow Mat Subsidy-ಸಬ್ಸಿಡಿಯಲ್ಲಿ ರಬ್ಬರ್ ಮ್ಯಾಟ್ ಹಾಗೂ ಸೈಲೇಜ್ ಬ್ಯಾಗ್ ಪಡೆಯಲು ಅರ್ಜಿ ಆಹ್ವಾನ!

ಕಲ್ಯಾಣ ಕರ್ನಾಟಕ ಭಾಗದ ವಿವರ:

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ 6,967 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರು (GPT) 3,228 ಹಾಗೂ ಸಹ ಶಿಕ್ಷಕರು (AM) 2,214 ಹುದ್ದೆಗಳು ಪ್ರಮುಖವಾಗಿವೆ.

ಕಲ್ಯಾಣ ಕರ್ನಾಟಕೇತರ ಭಾಗದ ವಿವರ:

ರಾಜ್ಯದ ಉಳಿದ ಜಿಲ್ಲೆಗಳ (Non-KK) ಭಾಗದಲ್ಲಿ ಅತಿ ಹೆಚ್ಚು ಅಂದರೆ ಒಟ್ಟು 8,033 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಇದರಲ್ಲಿ 5,272 ಪದವೀಧರ ಪ್ರಾಥಮಿಕ ಶಿಕ್ಷಕರ (GPT) ಹುದ್ದೆಗಳು ಸೇರಿವೆ.

ವಿವಿಧ ವೃಂದದ ಶಿಕ್ಷಕರ ನೇಮಕ:

ಈ ಪ್ರಕ್ರಿಯೆಯಡಿ ಪ್ರಾಥಮಿಕ ಶಿಕ್ಷಕರು (PST), ಪದವೀಧರ ಪ್ರಾಥಮಿಕ ಶಿಕ್ಷಕರು (GPT), ಪ್ರೌಢಶಾಲಾ ಸಹ ಶಿಕ್ಷಕರು (AM), ದೈಹಿಕ ಶಿಕ್ಷಕರು (PET) ಹಾಗೂ ಗಣಕ ವಿಜ್ಞಾನ (Computer Science) ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

ಆಯ್ಕೆ ಪ್ರಕ್ರಿಯೆ ಮತ್ತು ಪ್ರಾಧಿಕಾರ:

ಸಂಪೂರ್ಣ ನೇಮಕಾತಿಯನ್ನು ಟಿಇಟಿ (TET), ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಶೈಕ್ಷಣಿಕ ಮೆರಿಟ್ ಆಧಾರದ ಮೇಲೆ ಮಾಡಲಾಗುತ್ತಿದ್ದು, ಇಲಾಖೆಯ ಆಯುಕ್ತರ ನೇತೃತ್ವದ 16 ಸದಸ್ಯರ ಪರೀಕ್ಷಾ ಪ್ರಾಧಿಕಾರವು ಇದರ ಮೇಲ್ವಿಚಾರಣೆ ನಡೆಸಲಿದೆ.

Karnataka Education Department-ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: