ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ತೊಗರಿಯನ್ನು ಖರೀದಿ(Togari Kharidi) ಮಾಡಲು ಹಾಗೂ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಾಲ್ ಗೆ ₹450 ರೂ ಅನ್ನು ಪಾವತಿ ಮಾಡಲು ರಾಜ್ಯ ಸರಕಾರದಿಂದ ₹140 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ.
ಬೆಂಬಲ ಬೆಲೆಯಲ್ಲಿ ತೊಗರಿಯನ್ನು(Togari Bembala bele) ಮಾರಾಟ ಮಾಡಲು ರೈತರು ಅನುಸರಿಸಬೇಕಾದ ಕ್ರಮಗಳಾವುವು? ತೊಗರಿಗೆ ಕೇಂದ್ರ ಮತ್ತು ರಾಜ್ಯದ ಸಹಯೋಗದಲ್ಲಿ ನಿಗದಿಪಡಿಸಿದ ಬೆಂಬಲ ಬೆಲೆ ಎಷ್ಟು? ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ರಾಜ್ಯ ಸರಕಾರದಿಂದ ತೆಗೆದುಕೊಂಡಿರುವ ಕ್ರಮಗಳ ಕುರಿತು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Best Savings Scheme-ಅಂಚೆ ಇಲಾಖೆಯಿಂದ ಮಹಿಳೆಯರಿಗೆ ಭರ್ಜರಿ ಗಿಪ್ಟ್! ಎರಡು ವರ್ಷದಲ್ಲಿ ₹30 ಸಾವಿರ ಪಡೆಯಲು ಅವಕಾಶ!
Togari Kharidi-ರಾಜ್ಯ ಸರ್ಕಾರದಿಂದ ತೊಗರಿ ಖರೀದಿಗೆ ₹140 ಕೋಟಿ:
ಕೇಂದ್ರ ಸರಕಾರದಿಂದ ಈಗಾಗಲೇ ತೊಗರಿಯನ್ನು(Togari MSP) ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಬೆಲೆಯನ್ನು ನಿಗದಿಪಡಿಸಿದ್ದು ಇದಕ್ಕಾಗಿ ಹೆಚ್ಚುವರಿಯಾಗಿ ರಾಜ್ಯ ಸರಕಾರದಿಂದ ಪ್ರತಿ ಕ್ವಿಂಟಾಲ್ ಗೆ ₹450 ರೂ ಅನ್ನು ಘೋಷಣೆ ಮಾಡಲಾಗಿದ್ದು ಇದಕ್ಕೆ ₹140 ಕೋಟಿ ಅನುದಾನವನ್ನು ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Togari MSP Price-ಕ್ವಿಂಟಾಲ್‍ಗೆ ಹೆಚ್ಚುವರಿ ₹450 ರೂ ಘೋಷಣೆ:
ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಕೇಂದ್ರದಿಂದ ₹7,550 ರೂ ಅನ್ನು ನಿಗದಿಪಡಿಸಲಾಗಿದ್ದು ಇದಕ್ಕೆ ಹೆಚ್ಚುವರಿಯಾಗಿ ರಾಜ್ಯ ಸರಕಾರದಿಂದ ₹450 ರೂ ಸೇರಿ ಒಟ್ಟು ₹8,000 ರೂ ನಿಗದಿಪಡಿಸಲಾಗಿದೆ.
ರಾಜ್ಯದಲ್ಲಿ ಬೀದರ್ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಯವರೆಗೆ ತೊಗರಿ ಬೆಳೆಯನ್ನು ಬೆಳೆಯಲಾಗುತ್ತಿದ್ದು, ರೈತರು ಬೆಂಬಲ ಬೆಲೆ ಏರಿಕೆ ಮಾಡಬೇಕು ಎಂದು ಅನೇಕ ರೈತರು ಸರಕಾರಕ್ಕೆ ಬೇಡಿಕೆ ಸಲ್ಲಿಸಿದರ ಪರಿಣಾಮದಿಂದ ರೈತರ ಬೇಡಿಕೆಗೆ ರಾಜ್ಯ ಸರಕಾರ ಸಕರಾತ್ಮಕ ಸ್ಪಂದಿಸಿ ಪ್ರತಿ ಕ್ವಿಂಟಾಲ್‍ಗೆ ₹450 ರೂ ಹೆಚ್ಚುವರಿಯಾಗಿ ಪಾವತಿ ಮಾಡಲು ನಿರ್ಧಾರ ಕೈಗೊಂಡಿದೆ ಎಂದು ಸಚಿವರು ಮಾಹಿತಿ ತಿಳಿಸಿದರು.
ಇದನ್ನೂ ಓದಿ: APAAR ID Card-ವಿದ್ಯಾರ್ಥಿಗಳಿಗೆ APAAR ID ಕಾರ್ಡ್! ಎಲ್ಲಿ ಪಡೆಯಬೇಕು? ಇಲ್ಲಿದೆ ಸಂಪೂರ್ಣ ವಿವರ!

ಇದನ್ನೂ ಓದಿ: Bima Sakhi-LIC ಯಿಂದ ಬಿಮಾ ಸಖಿ ಹೊಸ ಯೋಜನೆ! ಮಾಸಿಕ ₹7,000 ಸ್ಟೈಪೆಂಡ್!
Togari Kharidi Kendra-400ಕ್ಕೂ ಅಧಿಕ ಖರೀದಿ ಕೇಂದ್ರ:
ರಾಜ್ಯ ಸರಕಾರದಿಂದ ತೊಗರಿಯನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಕೃಷಿ ಉತ್ಪನ್ನ ಮಾರಾಟ ಇಲಾಖೆ ಮತ್ತು ನಫೆಡ್ ಖರೀದಿ ಏಜನ್ಸಿಯ ಮೂಲಕ ತೊಗರಿಯನ್ನು ಖರೀದಿ ಮಾಡಲು ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Krishi marata ilake-ಕೃಷಿ ಮಾರಾಟ ಮಂಡಳಿಯಿಂದ ರೈತರಿಗೆ ನೀಡಿರುವ ಸೂಚನೆಗಳ ವಿವರ:
1) ಒಬ್ಬ ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಲ್ ರಂತೆ ಗರಿಷ್ಠ 40 ಕ್ವಿಂಟಲ್ ವರೆಗೆ ತೊಗರಿಯನ್ನು ಖರೀದಿ ಮಾಡಲಾಗುತ್ತದೆ.
2) ರೈತ ಬಾಂಧವರು ತಮ್ಮ ಹತ್ತಿರದ PACS/FPO/TAPCMS ಗಳಲ್ಲಿ ತಮ್ಮ ಪ್ರೂಟ್ಸ್ ಐ ಡಿ ಸಂಖ್ಯೆ ನೀಡಿ ನೊಂದಣಿ ಮಾಡಿಕೊಂಡು ತೊಗರಿ ಮಾರಾಟ ಮಾಡಬಹುದಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ ತಿಳಿಸಲಾಗಿದೆ.
ಇದನ್ನೂ ಓದಿ: Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!
How to Apply-ಎಲ್ಲಿ ಅರ್ಜಿ ಸಲ್ಲಿಸಬೇಕು?
ಆಸಕ್ತ ಅರ್ಹ ರೈತರು ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ತಮ್ಮ ಹತ್ತಿರದ ತೊಗರಿ ಖರೀದಿ ಕೇಂದ್ರವನ್ನು ನೇರವಾಗಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಭೇಟಿ ಮಾಡಿ ಮುಂಚಿತವಾಗಿ ನೋಂದಣಿಯನ್ನು ಮಾಡಿಕೊಂಡು ಅವರು ನಿಗದಿಪಡಿಸಿದ ದಿನಾಂಕದಂದು ತೊಗರಿಯನ್ನು ಖರೀದಿ ಕೇಂದ್ರಕ್ಕೆ ತೆಗೆದುಕೊಂಡು ಹೋಗಿ ತೊಗರಿಯನ್ನು ಮಾರಾಟ ಮಾಡಬೇಕು.
Documents-ನೋಂದಣಿಗೆ ಸಲ್ಲಿಸಬೇಕಾದ ದಾಖಲೆಗಳು:
A) ಆಧಾರ್ ಕಾರ್ಡ/Aadhar card
B) ಬ್ಯಾಂಕ್ ಪಾಸ್ ಬುಕ್/Bank Pass book
C) ಪ್ರೂಟ್ಸ್ ಐಡಿ/FID
D) ಮೊಬೈಲ್ ನಂಬರ್/Mobile Number
E) ಪಹಣಿ/RTC
ಹೆಚ್ಚಿನ ಮಾಹಿತಿ ಪಡೆಯಲು ನಿಮ್ಮ ತಾಲ್ಲೂಕಿನ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಕಚೇರಿಯನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆಯಬಹುದು.