Udyogini Yojana-ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ 1.5 ಲಕ್ಷ ಸಹಾಯಧನ!

October 3, 2026 | Siddesh
Udyogini Yojana-ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ 1.5 ಲಕ್ಷ ಸಹಾಯಧನ!
Share Now:

2026-2027 ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಡಿಯಲ್ಲಿ ಉದೋಗಿನಿ ಯೋಜನೆಯನ್ನು ಜಾರಿಗೆ ತಂದಿದ್ದು, ಸ್ವಂತ ಉದ್ಯಮವನ್ನು ನೆಡೆಸುತ್ತಿರುವವರಿಗೆ ಸಾಲದ ಮೇಲೆ ಶೇ 50 % ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ(Karnataka Mahila Nigama) ವಿವಿಧ ಸಹಾಯಧನ ಆದಾರಿತ ಯೋಜನೆ ಅಡಿ ಸಬ್ಸಿಡಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಇಂದಿನ ಈ ಅಂಕಣದಲ್ಲಿ ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ.

ಇದನ್ನೂ ಓದಿ: New Rules-ನಿಮ್ಮ ಗ್ಯಾಸ್ ಸಬ್ಸಿಡಿ ಮತ್ತು ಬ್ಯಾಂಕ್ ಎಫ್‌ಡಿ ಸುರಕ್ಷಿತವಾಗಿರಬೇಕೇ? ಈ ನಿಯಮವನ್ನು ಪಾಲನೆ ಮಾಡಿ!

ಸಹಾಯಧನವನ್ನು ಪಡೆಯಲು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಉದ್ಯೋಗಿನಿ ಯೋಜನೆ ಎಂದರೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನಗಳಾವುವು? ಕೊನೆಯ ದಿನಾಂಕ ಯಾವುದು? ಇನ್ನಿತರ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Udyogini Yojana-ಉದ್ಯೋಗಿನಿ ಯೋಜನೆ ಎಂದರೇನು?

ಮಹಿಳೆಯರು ವ್ಯಾಪಾರ ಮತ್ತು ಸೇವಾ ಕ್ಷೇತ್ರಗಳಲ್ಲಿ ಸ್ವ-ಉದ್ಯೋಗ ಆರಂಭ ಮಾಡುವುದರ ಮೂಲಕ ಆರ್ಥಿಕ ಅಭಿವೃದ್ಧಿ ಹೊಂದಲು ಅನುಕೂಲವಾಗುವಂತೆ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇಚ್ಚಿಸುವ ಮಹಿಳೆಯರಿಗೆ ಬ್ಯಾಂಕುಗಳ ಮೂಲಕ ಸಾಲ ಮತ್ತು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸಹಾಯಧನವನ್ನು ನೀಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಹ ಮತ್ತು ಆಸಕ್ತ ಮಹಿಳಾ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 31 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: Muskaan Scholarship-ಪಿಯುಸಿ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿವೇತನ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Udyogini Yojane Subsidy-ಉದ್ಯೋಗಿನಿ ಯೋಜನೆಯಡಿ ಎಷ್ಟು ಸಹಾಯಧನ ಪಡೆಯಬಹುದು?

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಅರ್ಹ ಫಲಾನುಭವಿಗಳಿಗೆ ಒಂದು ಉದ್ದಿಮೆಯ ಒಟ್ಟು ಘಟಕ ವೆಚ್ಚ ರೂ.50,000 ದಿಂದ 3 ಲಕ್ಷಗಳವರೆಗೆ

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ರೂ. ಶೇ 2 ಲಕ್ಷ ದವರೆಗೆ ಶೇ.75 ರಷ್ಟು ಸಹಾಯಧನ

ಇತರೆ ವರ್ಗದ ಫಲಾನುಭವಿಗಳಿಗೆ ರೂ. ಶೇ 1.5 ಲಕ್ಷದ ವರೆಗೆ ಶೇ. 30% ಗರಿಷ್ಟ 90,000 ದವರೆಗೆ ಸಹಾಯಧನವನ್ನು ಪಡೆಯಬಹುದು.

ಇದನ್ನೂ ಓದಿ: MBBS Scholorship-ಕಾನ್ಸೆಂಟ್ರಿಕ್ಸ್ ವಿದ್ಯಾರ್ಥಿವೇತನದ ಅಡಿಯಲ್ಲಿ MBBS ವಿದ್ಯಾರ್ಥಿನಿಯರಿಗೆ 65,000 ವಿದ್ಯಾರ್ಥಿವೇತನ!

Who Can Apply For Udyogini Yojane-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ಪ್ರಜೆಯಾಗಿರಬೇಕು.

ಅರ್ಜಿದಾರ ಅಭ್ಯರ್ಥಿಯ ವಯಸ್ಸು 21 ರಿಂದ 55 ವರ್ಷದ ಒಳಗಿರಬೇಕು.

ಆದಾಯೋತ್ಪನ್ನ ಚಟುವಟಿಕೆಗೆ ಸಂಬಂಧಿಸಿದಂತೆ ಚಟುವಟಿಕೆಗಳನ್ನು ಕೈಗೊಳ್ಳುವ ಯೋಜನೆಯನ್ನು ಹೊಂದಿರಬೇಕು.

ಅರ್ಜಿದಾರರ ಎಲ್ಲಾ ಮೂಲಗಳಿಂದ ಆದಾಯದ ಮಿತಿಯು 1.5 ಲಕ್ಷಕ್ಕಿಂತ ಕಡಿಮೆ ಇರಬೇಕು, SC/ST ಅರ್ಜಿದಾರರಿಗೆ 2 ಲಕ್ಷ ದ ಒಳಗಿರಬೇಕು.

ಇದನ್ನೂ ಓದಿ: Arivu Scheme 2026-ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ 5 ಲಕ್ಷದವರೆಗೆ ಕಡಿಮೆ ಬಡ್ಡಿ ಸಾಲ!

Documents For Udyogini Yojane-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗೆ ತಿಳಿಸಿರುವ ದಾಖಲಾತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು.

ಅರ್ಜಿದಾರರ ಆಧಾರ್ ಕಾರ್ಡ/Adhar Card

ಯೋಜನಾ ವರದಿ/DPR

ಪಾನ್ ಕಾರ್ಡ/Pan Card

ಅಭ್ಯರ್ಥಿಯ ಪೋಟೋ/Photo

ರೇಶನ್/ವೋಟರ್ ಐಡಿ/Voter ID

ಬ್ಯಾಂಕ್ ಪಾಸ್ ಬುಕ್/Bank Pass Book

ಇದನ್ನೂ ಓದಿ: Aditya Birla Capital Scholarship-ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್‌ನ ವತಿಯಿಂದ 60,000 ವಿದ್ಯಾರ್ಥಿವೇತನ!

udyogini yojana

ಇದನ್ನೂ ಓದಿ: Scholarship Amount-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇನ್ಫೋಸೆಪ್ಟ್ಸ್ ಇನ್ನೋವೇಟ್ ವತಿಯಿಂದ 50,000 ವಿದ್ಯಾರ್ಥಿವೇತನ!

Udyogini Yojane Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗೆ ಅರ್ಜಿ ಸಲ್ಲಿಸಬಹುದು.

Step-1: ಮೊದಲು ಇಲ್ಲಿ ನೀಡಿರುವ ಈ ಲಿಂಕ್ ಮೇಲೆ ಕ್ಲಿಕ್ Udyogini Yojane Online Application ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ.

Step-2: ಬಳಿಕ ಈ ಪೇಜ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು OTP ಅನ್ನು ನಮೂದಿಸಿ Submit ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು. ಮೊದಲ ಬಾರಿಗೆ ಸೇವಾ ಸಿಂಧು ಪೋರ್ಟಲ್ ಪ್ರವೇಶ ಮಾಡುತ್ತಿರುವರು "News User? Registre Here" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಬಳಕೆದಾರರ ವಿವರವನ್ನು ನೊಂದಣಿ ಮಾಡಿಕೊಂಡು ಲಾಗಿನ್ ಅಗಬೇಕು.

Step-3: ಲಾಗಿನ್ ಅದ ಬಳಿಕ ಮಹಿಳಾ ಅಭಿವೃದಿ ನಿಗಮ/ಉದ್ಯೋಗಿನ ಯೋಜನೆ ಅರ್ಜಿ ಸರ್ಚ್ ಮಾಡಿ Apply Now ಬಟನ್ ಮೇಲೆ ಕ್ಲಿಕ್ ಮಾಡಿದರೆ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Raman Kant Munjal Scholarship-BBA, BFIA, B.Com,B.A. ವಿದ್ಯಾರ್ಥಿಗಳಿಗೆ 40,000 ವಿದ್ಯಾರ್ಥಿವೇತನ!

More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್ ಭೇಟಿ ನೀಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here
ಸೇವಾ ಸಿಂಧು ಪೋರ್ಟಲ್ ಅನ್ನು ಭೇಟಿ ಮಾಡಲು: Apply Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: