Udyogini Yojane-ರಾಜ್ಯ ಮಹಿಳಾ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

November 16, 2025 | Siddesh
Udyogini Yojane-ರಾಜ್ಯ ಮಹಿಳಾ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!
Share Now:

2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ(Udyogini Yojane Application)ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸ್ವಂತ ಉದ್ದಿಮೆಯನ್ನು ನಡೆಸುತ್ತಿರುವವರು ಅಥವಾ ಪ್ರಾರಂಭಿಸುವವರಿಗೆ ಸಾಲದ ಮೇಲೆ ಶೇ 50% ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ(Karnataka Mahila Nigama) ವಿವಿಧ ಸಹಾಯಧನ ಆದಾರಿತ ಯೋಜನೆ ಅಡಿ ಸಬ್ಸಿಡಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಇಂದಿನ ಅಂಕಣದಲ್ಲಿ ಉದ್ಯೋಗಿನಿ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Aditya Birla Scholarship-ಆದಿತ್ಯ ಬಿರ್ಲಾ ಫೌಂಡೇಶನ್ ನ ವತಿಯಿಂದ ₹ 30,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

ಪ್ರಸ್ತುತ ಲೇಖನದಲ್ಲಿ ಉದ್ಯೋಗಿನ ಯೋಜನೆ(Udyogini Yojane Online Application) ಎಂದರೇನು? ಈ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ವಿಲೇವಾರಿ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ.

Udyogini Scheme Details-ಏನಿದು ಉದ್ಯೋಗಿನಿ ಯೋಜನೆ:

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಮಹಿಳೆಯರಿಗೆ ತಮ್ಮ ಸ್ವಂತ ಉದ್ದಿಮೆಯನ್ನು ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬನೆ ಜೀವನವನ್ನು ನಡೆಸಲು ಸಾಲ ಮತ್ತು ಸಾಲಕ್ಕೆ ಸಹಾಯಧನವನ್ನು ಒದಗಿಸಲು ಉದ್ಯೋಗಿನಿ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಮಹಿಳೆಯರು ವ್ಯಾಪಾರ ಮತ್ತು ಸೇವಾ ಕ್ಷೇತ್ರಗಳಲ್ಲಿ ಸ್ವ-ಉದ್ಯೋಗ ಪ್ರಾರಂಭಿಸುವುದರ ಮೂಲಕ ಆರ್ಥಿಕ ಅಭಿವೃದ್ಧಿ ಹೊಂದಲು ಅನುಕೂಲವಾಗುವಂತೆ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇಚ್ಚಿಸುವ ಮಹಿಳೆಯರಿಗೆ ಬ್ಯಾಂಕುಗಳ ಮೂಲಕ ಸಾಲ ಮತ್ತು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸಹಾಯಧನವನ್ನು (Backend Subsidy) ನೀಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

ಇದನ್ನೂ ಓದಿ: PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

Who Can Apply For Udyogini Yojane-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಮಹಿಳಾ ಅಭಿವೃದ್ದಿ ನಿಗಮದಿಂದ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಈ ಕೆಳಗಿನ ಅರ್ಹತೆಯನ್ನು ಹೊಂದಿರುವ ಮಹಿಳೆಯರು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

  • ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಅಭ್ಯರ್ಥಿಯ ವಯಸ್ಸು 18 ರಿಂದ 55 ವರ್ಷದ ಒಳಗಿರಬೇಕು.
  • ಆದಾಯೋತ್ಪನ್ನ ಚಟುವಟಿಕೆಗೆ ಸಂಬಂಧಿಸಿದಂತೆ ಚಟುವಟಿಕೆಗಳನ್ನು ಕೈಗೊಳ್ಳುವ ಯೋಜನೆಯನ್ನು ಹೊಂದಿರಬೇಕು.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಇದನ್ನೂ ಓದಿ: Nikon India scholarship-ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Udyogini Yojane 2025

Udyogini Yojane Subsidy-ಉದ್ಯೋಗಿನಿ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ?

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಅರ್ಹ ಫಲಾನುಭವಿಗಳಿಗೆ ಕೆಳಗಿನಂತೆ ಸಹಾಯಧನವನ್ನು ಒದಗಿಸಲಾಗುತ್ತದೆ.

ಒಂದು ಉದ್ದಿಮೆಯ ಒಟ್ಟು ಘಟಕ ವೆಚ್ಚ ಕನಿಷ್ಠ ರೂ 1.00 ಲಕ್ಷದಿಂದ ಗರಿಷ್ಠ ರೂ 3.00 ಶೇ 50% ಸಹಾಯಧನವನ್ನು ಅಂದರೆ ಗರಿಷ್ಠ 1.5 ಲಕ್ಷ ಸಬ್ಸಿಡಿಯನ್ನು ಒದಗಿಸಲಾಗುತ್ತದೆ.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 15 ಡಿಸೆಂಬರ್ 2025 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

How To Apply For Udyogini Yojana-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಜಿದಾರರ ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ತಮ್ಮ ಹತ್ತಿರ ಗ್ರಾಮ ಒನ್ ಕೇಂದ್ರ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನೇರವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕವು ಸಹ ಅರ್ಜಿಯನ್ನು ಸಲ್ಲಿಸಬಹುದು.

Udyogini Yojane Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಕೆಳಗಿನ ವಿಧಾನಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ Udyogini Yojane Online Application ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ.

ಇದನ್ನೂ ಓದಿ: KSRTC Flybus Service-ಬೆಂಗಳೂರು ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭ!

Udyogini Yojane Application

Step-2: ಬಳಿಕ ಈ ಪೇಜ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು OTP ಅನ್ನು ನಮೂದಿಸಿ Submit ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು. ಮೊದಲ ಬಾರಿಗೆ ಸೇವಾ ಸಿಂಧು ಪೋರ್ಟಲ್ ಪ್ರವೇಶ ಮಾಡುತ್ತಿರುವರು "News User? Registre Here" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಬಳಕೆದಾರರ ವಿವರವನ್ನು ನೊಂದಣಿ ಮಾಡಿಕೊಂಡು ಲಾಗಿನ್ ಅಗಬೇಕು.

Step-3: ಲಾಗಿನ್ ಅದ ಬಳಿಕ ಮಹಿಳಾ ಅಭಿವೃದಿ ನಿಗಮ/ಉದ್ಯೋಗಿನ ಯೋಜನೆ ಅರ್ಜಿ ಸರ್ಚ್ ಮಾಡಿ Apply Now ಬಟನ್ ಮೇಲೆ ಕ್ಲಿಕ್ ಮಾಡಿದರೆ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Krishi Mela Bengalure-2025: ಬೆಂಗಳೂರು ಜಿಕೆವಿಕೆಯಲ್ಲಿ ಇಂದಿನಿಂದ 4 ದಿನ ಕೃಷಿ ಮೇಳ!

Required Documents For Udyogini Yojane-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

ಉದ್ಯೋಗಿನ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಒದಗಿಸಬೇಕಾದ ಅಗತ್ಯ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ.

  • ಅರ್ಜಿದಾರರ ಆಧಾರ್ ಕಾರ್ಡ/Adhar.
  • ಅಭ್ಯರ್ಥಿಯ ಪೋಟೋ/Photo
  • ಯೋಜನಾ ವರದಿ/DPR
  • ಪಾನ್ ಕಾರ್ಡ/Pan Card
  • ಬ್ಯಾಂಕ್ ಪಾಸ್ ಬುಕ್/Bank Pass Book
  • ರೇಶನ್/ವೋಟರ್ ಐಡಿ/Voter ID

For More Information-ಹೆಚ್ಚಿನ ಮಾಹಿತಿಗಾಗಿ:

ಮಹಿಳಾ ನಿಗಮದ ಅಧಿಕೃತ ವೆಬ್ಸೈಟ್- Click Here
ಸೇವಾ ಸಿಂಧು ಪೋರ್ಟಲ್- Apply Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: