UPSC Free Coaching-ಉಚಿತ UPSC ಮತ್ತು KAS ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ!

August 17, 2025 | Siddesh
UPSC Free Coaching-ಉಚಿತ UPSC ಮತ್ತು KAS ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ!
Share Now:

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಉಚಿತ UPSC ಮತ್ತು KAS ಸೇರಿದಂತೆ ಇತರೆ(Free UPSC Coaching) ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿಯನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ(Free KAS Coaching) ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಗುರಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಉನ್ನತ ಮಟ್ಟದ ತರಬೇತಿಯನ್ನು ಉಚಿತವಾಗಿ ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸ್ತುತ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Kotak Mahidra Scholarship-ಮಹೀಂದ್ರ ಗ್ರೂಪ್ ನಿಂದ ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ ₹1.5 ಲಕ್ಷ ಸ್ಕಾಲರ್‌ಶಿಪ್!

ಇಂದಿನ ಈ ಅಂಕಣದಲ್ಲಿ ಉಚಿತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಯನ್ನು(Free Coaching Application) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಈ ಎಲ್ಲಾ ವಿಷಯಗಳ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

Last Date For Free Coaching Application-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಯಾವುದು?

ಪ್ರಸ್ತುತ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಉಚಿತ UPSC ಮತ್ತು KAS ಸೇರಿದಂತೆ ಇತರೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಹಿಂದೆ 11 ಆಗಸ್ಟ್ 2025 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು ಅದರೆ ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ದಿನಾಂಕವನ್ನು ಇಲಾಖೆಯಿಂದ 26 ಆಗಸ್ಟ್ 2025 ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಇದನ್ನೂ ಓದಿ: Hero Scholarship-ಹೀರೋ ಕಂಪನಿ ವತಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Who Can Apply For Free UPSC And KAS Coaching-ಅರ್ಜಿ ಸಲ್ಲಿಸಲು ಅರ್ಹರು ಯಾರು?

UPSC ಮತ್ತು KAS ಸೇರಿದಂತೆ ಇತರೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಕೆಳಗೆ ತಿಳಿಸಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವುದು ಕಡ್ದಾಯವಾಗಿದೆ.

ಅಭ್ಯರ್ಥಿಯು ನಮ್ಮ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿಗದಿಪಡಿಸಿರುವ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಆರ್ಥಿಕವಾಗಿ ಹಿಂದುಳಿದ ವರ್ಗೆಕ್ಕೆ ಸೇರಿದ ಕುಟುಂಬದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಈ ಹಿಂದಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಈ ಯೋಜನೆಯಡಿ ಪ್ರಯೋಜನ ಪಡೆದಿದ್ದರೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Free Phenyl Soap Making Training-ಉಚಿತ ಫಿನಾಯಿಲ್,ಸೋಪ್ ಗೃಹ ಬಳಕೆ ವಸ್ತು ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

UPSC

Free Competitive Exams Coaching In Karnataka-ಯಾವೆಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ?

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಈ ಕೆಳಗಿನ ಪಟ್ಟಿಯಲ್ಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ.

  • ಯು.ಪಿ.ಎಸ್.ಸಿ/UPSC
  • ಕೆ.ಎ.ಎಸ್/KAS
  • ಗೆಜೆಟೆಡ್ ಪ್ರೊಬೇಷನರ್/Gazetted Probationers.
  • ಗ್ರೋಪ್ ಸಿ/Group C.
  • ಆರ್.ಆರ್.ಬಿ/RRB
  • ಎಸ್.ಎಸ್.ಸಿ/SSC

How to Apply For Free UPSC And KAS Coaching-ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯಿಂದ ನಿಗದಿಪಡಿಸಿರುವ ಅಂತಿಮ ದಿನಾಂಕ ಮುಗಿಯುವುದರ ಒಳಗಾಗಿ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿಯನು ಸಲ್ಲಿಸಿ ಉಚಿತ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

Step-1: ಅಭ್ಯರ್ಥಿಯು ಮೊದಲಿಗೆ ಇಲ್ಲಿ ಕ್ಲಿಕ್ "Free UPSC And KAS Coaching" ಮಾಡಿ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Best Farmer Award-ಕೃಷಿ ಇಲಾಖೆಯಿಂದ ಕೃಷಿ ಪ್ರಶಸ್ತಿ ವಿತರಣೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Free Competitive Exams Coaching

Step-2: ಇಲ್ಲಿ ಮುಖಪುಟದಲ್ಲಿ ಮೇಲೆ ಕಾಣುವ "ಇಲಾಖೆಗಳು ಮತ್ತು ಸೇವೆಗಳು" ಬಟನ್ ಮೇಲೆ ಕ್ಲಿಕ್ ಮಾಡಿ Search ಕಾಲಂ ನಲ್ಲಿ "ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ಪರೀಕ್ಷೆಯ ತರಬೇತಿ" ಎಂದು ಬರೆದು ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-3: ಈ ಬಟನ್ ಮೇಲೆ ಕ್ಲಿಕ್ ಮಾಡಿ "ಆನ್ಲೈನ್ ಅರ್ಜಿ ಸಲ್ಲಿಸಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ Login ID ಮತ್ತು Password ಅನ್ನು ಹಾಕಿ Get OTP ಬಟನ್ ಮೇಲೆ ಕ್ಲಿಕ್ ಮಾಡಿ ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ "Login" ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

Step-4: ಲಾಗಿನ್ ಅದ ನಂತರ ಅರ್ಜಿ ನಮೂನೆ ತೆರೆಯುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: Business Loan-ರಾಜ್ಯದ SC ST ಸಮುದಾಯದವರಿಗೆ ಗುಡ್ ನ್ಯೂಸ್! ಸ್ವಂತ ಉದ್ದಿಮೆಗೆ ₹2.0 ಲಕ್ಷ ಸಬ್ಸಿಡಿ!

Documents For Free Competitive Exams Coaching-ನೋಂದಣಿ ಮಾಡಿಕೊಳ್ಳಲು ಅವಶ್ಯಕ ದಾಖಲೆಗಳೇನು?

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿಯನ್ನು ಪಡೆಯುವ ಯೋಜನೆಯ ಪ್ರಯೋಜನವನ್ನು ತೆಗೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ:

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಪೋಟೋ
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಹತೆ ಅಂಕಪಟ್ಟಿ
  • ಮೊಬೈಲ್ ನಂಬರ್

For More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು:

Helpline Number-ಇಲಾಖೆಯ ಸಹಾಯವಾಣಿ- 8277799990
Minority Welfare Department Website- ಇಲಾಖೆಯ ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: