Vasati Yojane-ರಾಜೀವ ಗಾಂಧಿ ವಸತಿ ನಿಗಮದಿಂದ ಕೇವಲ 9.7 ಲಕ್ಷಕ್ಕೆ 1BHK ಫ್ಲಾಟ್ ಪಡೆಯಲು ಅರ್ಜಿ ಆಹ್ವಾನ!

January 17, 2026 | Siddesh
Vasati Yojane-ರಾಜೀವ ಗಾಂಧಿ ವಸತಿ ನಿಗಮದಿಂದ ಕೇವಲ 9.7 ಲಕ್ಷಕ್ಕೆ 1BHK ಫ್ಲಾಟ್ ಪಡೆಯಲು ಅರ್ಜಿ ಆಹ್ವಾನ!
Share Now:

ವಸತಿ ರಹಿತ ನಾಗರಿಕರಿಗೆ ಅತೀ ಕಡಿಮೆ ದರದಲ್ಲಿ ಮನೆಗಳನ್ನು ವಿತರಣೆ ಮಾಡಲು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಬೆಂಗಳೂರು ವ್ಯಾಪ್ತಿಯಲ್ಲಿ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ(Bengaluru Housing Scheme) ಅಡಿಯಲ್ಲಿ ಪ್ಲಾಟ್ ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಮ್ಮ ರಾಜ್ಯದಲ್ಲಿ ಸರ್ವರಿಗೂ ಸ್ವಂತ ಸೂರು ಎನ್ನುವ ಗುರಿಯೊಂದಿಗೆ ಸರಕಾರದಿಂದ ವಸತಿ ರಹಿತ ನಾಗರಿಕರಿಗೆ ಮನೆಯನ್ನು(Bengaluru Housing Scheme Online Application) ಹೊಂದಲು ವಿವಿಧ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಹಾಯಧನ ಒದಗಿಸಲು ಮತ್ತು ನಿಗಮದಿಂದ ನಿರ್ಮಾಣವಾಗಿರುವ ಪ್ಲಾಟ್ ಅನ್ನು ಕಡಿಮೆ ದರದಲ್ಲಿ ವಿತರಣೆ ಮಾಡಲು ರಾಜೀವ ಗಾಂಧಿ ವಸತಿ ನಿಗಮವನ್ನು ಸ್ಥಾಪನೆ ಮಾಡಲಾಗಿದ್ದು ಪ್ರಸ್ತುತ ಈ ನಿಗಮದಿಂದ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಅಡಿಯಲ್ಲಿ ಪ್ಲಾಟ್ ಅನ್ನು ನೀಡಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Vermicompost subsidy-ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣಕ್ಕೆ 20,000 ಸಹಾಯಧನ!

ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಅಡಿಯಲ್ಲಿ(Vasati Yojana) ಪ್ಲಾಟ್ ಅನ್ನು ಪಡೆಯಲು ಅರ್ಜಿ ಸಲ್ಲಿಸಲು ನಿಗಮದಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳಾವುವು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಇನ್ನಿತರೆ ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Bengaluru Housing Scheme-ಬಹುಮಹಡಿ ವಸತಿ ಯೋಜನೆ:

ಬೆಂಗಳೂರು ನಗರ ವ್ಯಾಪ್ತಿಯಲಿ ಬಹುಮಹಡಿ ವಸತಿ ಯೋಜನೆಯನ್ನು ಮುಖ್ಯವಾಗಿ ಕರ್ನಾಟಕ ಸರ್ಕಾರದ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ (RGRHCL) ಮೂಲಕ ನಿರ್ಮಾಣ ಮಾಡಿ ಅನುಷ್ಠಾನಗೊಳಿಸಲಾಗುತ್ತಿದ್ದು, ವಿಶೇಷವಾಗಿ "1 ಲಕ್ಷ ಬಹುಮಹಡಿ ಪ್ಲಾಟ್ ಅನ್ನು ನಿರ್ಮಾಣ ಮಾಡಿ ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡುವ ಯೋಜನೆ ಇದಾಗಿದೆ.

ಈ ಯೋಜನೆಗಳ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಗೆ 1 BHK ಮತ್ತು 2 BHK ಫ್ಲಾಟ್‌ಗಳನ್ನು ವಿತರಣೆ ಮಾಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ.

ಇದನ್ನೂ ಓದಿ: Housing Subsidy-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಸ್ವಂತ ಮನೆ ನಿರ್ಮಾಣಕ್ಕೆ ರೂ 2.0 ಲಕ್ಷ ಸಹಾಯಧನ!

Housing Scheme Details-ಯೋಜನೆಯ ವಿವರ:

ಯೋಜನೆಯ ಹೆಸರು: ಮುಖ್ಯಮಂತ್ರಿ ಬಹುಮಹಡಿ ಬೆಂಗಳೂರು ವಸತಿ ಯೋಜನೆ.

ಅನುಷ್ಠಾನ ಸಂಸ್ಥೆ: ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ (RGRHCL).

ಯಾರಿಗೆ ಅನ್ವಯ: ಆರ್ಥಿಕವಾಗಿ ಹಿಂದುಳಿದ ಮತ್ತು ಮಧ್ಯಮ ವರ್ಗದ ನಾಗರಿಕರಿಗೆ ಅನ್ವಯವಾಗುತ್ತದೆ.

ಪ್ಲಾಟ್ ಪ್ರಕಾರ: 1 BHK ಮತ್ತು 2 BHK ಫ್ಲಾಟ್‌ಗಳು.

ರಿಯಾಯಿತಿ ಪ್ಲಾಟ್ ಬೆಲೆ ಮಾಹಿತಿ: ಪರಿಶಿಷ್ಟ ಜಾತಿ/ಪಂಗಡದವರಿಗೆ ₹9.70 ಲಕ್ಷ ಮತ್ತು ಸಾಮಾನ್ಯ ವರ್ಗದವರಿಗೆ ₹10.50 ಲಕ್ಷದಂತೆ 1 BHK ಫ್ಲಾಟ್‌ಗಳನ್ನು ಮಾರಾಟ ಮಾಡಲಾಗುತ್ತದೆ.

ಇದನ್ನೂ ಓದಿ: Myntra Scholarship-ಮೈಂತ್ರಾ ಕಂಪನಿಯಿಂದ ರೂ 60,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Who Can Apply For Multi Storeyed Bengaluru Housing Scheme-ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳು:

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಬೆಂಗಳೂರು ವ್ಯಾಪ್ತಿಯಲ್ಲಿ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಅಡಿಯಲ್ಲಿ ಪ್ಲಾಟ್ ಅನ್ನು ಪಡೆಯಲು ನಿಗಮದಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪಟ್ಟಿ ಈ ಕೆಳಗಿನಂತಿದೆ:

ಅರ್ಜಿದಾರರು ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು.
ವಸತಿ ರಹಿತ ನಾಗರಿಕರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರು ಅರ್ಜಿ ಸಲ್ಲಿಸಬಹುದು.

Housing Scheme Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ನಾಗರಿಕರು ಅಗತ್ಯ ದಾಖಲೆಗಳ ಸಮೇತ ಈ ಕೆಳಗಿನ ಹಂತಗಳನ್ನು ಅನುಸರಿಸಿ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಅರ್ಜಿದಾರರು ಮೊದಲಿಗೆ ಈ "Housing Scheme Online Application" ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

Vasati Yojane

Step-2: ಇದಾದ ಬಳಿಕ ಇಲ್ಲಿ ಮುಖಪುಟದಲ್ಲಿ ಕಾಣುವ ಮುಖ್ಯಮಂತ್ರಿಗಳ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ "ಆನ್ಲೈನ್ ಅರ್ಜಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

Step-3: ನಂತರ ಈ ಪೇಜ್ ನಲ್ಲಿ "ಅರ್ಜಿ ಸಲ್ಲಿಕೆ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಬಳಿಕ "ಆಧಾರ್ ದೃಢೀಕರಿಸಿ" ಬಟನ್ ಮೇಲೆ ಒತ್ತಿ ನಿಮ್ಮ ಆಧಾರ್ ಸಂಖ್ಯೆ ಮತ್ತು ಹೆಸರನ್ನು ಹಾಗೂ OTP ಅನ್ನು ನಮೂದಿಸಿ ಲಾಗಿನ್ ಅದರೆ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ಅರ್ಜಿ ನಮೂನೆ ತೆರೆದುಕೊಂಡ ಬಳಿಕ ಇಲ್ಲಿ ಕೇಳುವ ಎಲ್ಲಾ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಇದನ್ನೂ ಓದಿ: Drone Pilot Training-ಇಲ್ಲಿದೆ ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

Required Documents For Housing Scheme Application-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಒದಗಿಸಬೇಕಾದ ಅಗತ್ಯ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ:

ಅರ್ಜಿದಾರ ಆಧಾರ್ ಕಾರ್ಡ
ಬ್ಯಾಂಕ್ ಪಾಸ್ ಬುಕ್ ಪ್ರತಿ
ಪೋಟೋ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ವೋಟರ್/ರೇಶನ್ ಕಾರ್ಡ
ಇನ್ನಿತರೆ ಅಗತ್ಯ ದಾಖಲೆಗಳು

ಇದನ್ನೂ ಓದಿ: KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!

Helpline-ಹೆಚ್ಚಿನ ಮಾಹಿತಿ ಪಡೆಯಲು ಸಹಾಯವಾಣಿ ಸಂಖ್ಯೆಗಳು:

ವಾಟ್ಸಾಪ್ ಸಹಾಯವಾಣಿ- 9739774666
ಸಹಾಯವಾಣಿ- 9449470346/9448023918

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: