Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!

May 14, 2026 | Siddesh
Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!
Share Now:

ಬೆಂಗಳೂರು: ಗ್ರಾಪ ಪಂಚಾಯತ(Grama Panchayat)ವ್ಯಾಪ್ತಿಯಲ್ಲಿ ವಸತಿ ರಹಿತ ನಾಗರಿಕರು ವಸತಿ ಯೋಜನೆಯಡಿ(Vasati Yojane Subsidy) ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಅವಕಾಶ ನೀಡಲಾಗಿದೆ.

ಸ್ವಂತ ಮನೆಯಿಲ್ಲದೆ ಪರದಾಡುತ್ತಿರುವ ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ವಸತಿ ರಹಿತ ನಾಗರಿಕರು ತಮ್ಮದೇ ಆದ ಸುಂದರ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ 2026ನೇ ಸಾಲಿನ ವಸತಿ ಯೋಜನೆಯಡಿ ಅರ್ಜಿಗಳನ್ನು(Vasati Yojane Application) ಆಹ್ವಾನಿಸಲಾಗಿದೆ. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ ಮತ್ತು ಸೂರು ಇಲ್ಲದ ಅರ್ಹ ಫಲಾನುಭವಿಗಳಿಗೆ ಆಸರೆಯಾಗಲಿದ್ದು, ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಈ ಪ್ರಕ್ರಿಯೆ ಚಾಲನೆಗೊಂಡಿದೆ.

ಇದನ್ನೂ ಓದಿ: Ration Card Correction-ರಾಜ್ಯದ್ಯಂತ ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

ಗ್ರಾಮೀಣ ಭಾಗದ ಜನಸಾಮಾನ್ಯರ ಜೀವನಮಟ್ಟವನ್ನು ಸುಧಾರಿಸುವುದು ಮತ್ತು ಪ್ರತಿಯೊಬ್ಬರಿಗೂ ಗೌರವಯುತವಾದ ವಸತಿ(Ashraya Mane) ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅರ್ಜಿದಾರರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿ ಕಚೇರಿಗಳನ್ನು ಸಂಪರ್ಕಿಸಿ ನಿಗದಿತ ಅವಧಿಯೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯು ವಸತಿ ರಹಿತರ ಪಾಲಿಗೆ ಹೊಸ ಭರವಸೆಯನ್ನು ಮೂಡಿಸಿದ್ದು, ಅರ್ಹ ಕುಟುಂಬಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಲಾಗಿದೆ.

ಯೋಜನೆಯ ಲಾಭ ಪಡೆಯಲು(Vasti Yojane In Karnataka) ಸರ್ಕಾರವು ಕೆಲವು ಸರಳ ಮಾನದಂಡಗಳನ್ನು ಮತ್ತು ದಾಖಲೆಗಳ ಅಗತ್ಯತೆಯನ್ನು ನಿಗದಿಪಡಿಸಿದೆ. ಪಾರದರ್ಶಕವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಗ್ರಾಮ ಸಭೆಗಳ ಮೂಲಕ ಅರ್ಹರನ್ನು ಗುರುತಿಸಲಾಗುತ್ತದೆ. ನೀವು ವಸತಿ ರಹಿತರಾಗಿದ್ದರೆ ಅಥವಾ ನಿಮ್ಮ ಹತ್ತಿರದವರಿಗೆ ಈ ಮಾಹಿತಿ ಅಗತ್ಯವಿದ್ದರೆ ತಪ್ಪದೇ ಈ ಅಂಕಣವನ್ನು ಪೂರ್ತಿ ಓದಿ ಅಗತ್ಯ ಮಾಹಿತಿ ತಿಳಿಯಿರಿ.

ಇದನ್ನೂ ಓದಿ: Gruhalakshmi Amount-ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್!

Who Can Appy-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಕರ್ನಾಟಕ ರಾಜ್ಯದ ನಿವಾಸಿಯಾಗಿರುವ ವಸತಿ ರಹಿತ ಕುಟುಂಬಗಳು.
  • ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿರುವ ಆರ್ಥಿಕವಾಗಿ ಹಿಂದುಳಿದ ವರ್ಗದವರು.
  • ಈ ಹಿಂದೆ ಯಾವುದೇ ಸರ್ಕಾರಿ ವಸತಿ ಯೋಜನೆಯಡಿ ಲಾಭ ಪಡೆಯದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

How To Apply-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ ಕಚೇರಿಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳನ್ನು (PDO) ಸಂಪರ್ಕಿಸಬಹುದು.

ಇದನ್ನೂ ಓದಿ: Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

Ashraya Vasti Yojane Subsidy-ಎಷ್ಟು ಸಹಾಯಧನ ನೀಡಲಾಗುತ್ತದೆ?

ಆಯ್ಕೆಯಾದ ಫಲಾನುಭವಿಗಳಿಗೆ ಮನೆ ನಿರ್ಮಾಣದ ಹಂತಗಳ ಆಧಾರದ ಮೇಲೆ ಸರ್ಕಾರವು ನಿಗದಿಪಡಿಸಿದ ಸಹಾಯಧನವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ (DBT ಮೂಲಕ) ಜಮಾ ಮಾಡಲಾಗುತ್ತದೆ. ಸಹಾಯಧನದ ಮೊತ್ತವು ಪ್ರಸ್ತುತ ಸರ್ಕಾರದ ಮಾರ್ಗಸೂಚಿಗಳಂತೆ ಲಭ್ಯವಿರಲಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹೆಚ್ಚಿನ ಆದ್ಯತೆ ಹಾಗೂ ವಿಶೇಷ ಧನಸಹಾಯದ ಸೌಲಭ್ಯವಿರುತ್ತದೆ. ಸಾಮಾನ್ಯವಾಗಿ ಆಶ್ರಯ ವಸತಿ ಯೋಜನೆ ಅಡಿಯಲ್ಲಿ ₹1.2 ಲಕ್ಷದಿಂದ ₹1.75 ಲಕ್ಷದವರೆಗೆ ಸಹಾಯಧನ ಪಡೆಯಲು ಅವಕಾಶವಿದ್ದು ನಿಖರ ಮಾಹಿತಿಗಾಗಿ ನಿಮ್ಮ ಭಾಗದ ಗ್ರಾಮ ಪಂಚಾಯತಿಯನ್ನು ಭೇಟಿ ಮಾಡಿ.

ಇದನ್ನೂ ಓದಿ: Male Munsuchane-ರಾಜ್ಯಾದ್ಯಂತ ವರುಣನ ಅಬ್ಬರ: ಮೇ 11ರವರೆಗೆ ಹಲವೆಡೆ ಭಾರೀ ಮಳೆ ಮುನ್ಸೂಚನೆ!

Documents For Vasati Yojane-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
  • ವೋಟರ್ ಐಡಿ
  • ರೇಶನ್ ಕಾರ್ಡ
  • ಅರ್ಜಿದಾರರ ಪೋಟೋ
  • ಮೊಬೈಲ್ ನಂಬರ್

ನಮ್ಮ ಅನಿಸಿಕೆ:

ಪ್ರಸ್ತುತ ಸಮಯದಲ್ಲಿ ಮನೆಯನ್ನು ನಿರ್ಮಾಣ ಮಾಡಲು ಅತ್ಯಧಿಕ ವೆಚ್ಚವನ್ನು ಭರಿಸಬೇಕಾಗುತ್ತದೆ ಸರ್ಕಾರದಿಂದ ನೀಡುವ ಈ ಸಹಾಯಧನವು ಅಲ್ಪ ಮೊತ್ತದಾಗಿದ್ದು ಅದರೆ ಏನು ಇಲ್ಲ ಅನ್ನುವುದಕ್ಕಿಂತ ಒಂದಿಷ್ಟು ಆರ್ಥಿಕ ನೆರವು ಬರುತ್ತದೆ ಎನ್ನುವ ದೆಸೆಯಲ್ಲಿ ಈ ಯೋಜನೆಯ ಲಾಭ ಪಡೆಯಲು ನಾಗರಿಕರು ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: