Vehicle subsidy loan: ಈ ಯೋಜನೆಯಡಿ ನಾಲ್ಕು ಚಕ್ರದ ವಾಹನ ಖರೀದಿಗೆ ಸಿಗುತ್ತೆ 3 ಲಕ್ಷ ಸಹಾಯಧನ!

four wheeler subsidy scheme in karnataka: ನಿರುದ್ಯೋಗಿ ಯುವಕರಿಗೆ ಅರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ನೆರವಾಗುವ ದೇಸೆಯಲ್ಲಿ ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಂದ ನಾಲ್ಕು ಚಕ್ರದ ವಾಹನ ಖರೀದಿ ಮಾಡಲು ಶೇ 50 ರಷ್ಟು ಗರಿಷ್ಠ 3 ಲಕ್ಷ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

Vehicle subsidy loan: ಈ ಯೋಜನೆಯಡಿ ನಾಲ್ಕು ಚಕ್ರದ ವಾಹನ ಖರೀದಿಗೆ ಸಿಗುತ್ತೆ 3 ಲಕ್ಷ ಸಹಾಯಧನ!
four wheeler subsidy scheme in karnataka

four wheeler loan schemes: ನಿರುದ್ಯೋಗಿ ಯುವಕರಿಗೆ ಅರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ನೆರವಾಗುವ ದೇಸೆಯಲ್ಲಿ ಹಿಂದುಳಿದ ವರ್ಗಗಳ ವಿವಿಧ ನಿಗಮಗಳಿಂದ ನಾಲ್ಕು ಚಕ್ರದ ವಾಹನ ಖರೀದಿ ಮಾಡಲು ಶೇ 50 ರಷ್ಟು ಗರಿಷ್ಠ 3 ಲಕ್ಷ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಈ ಹಿಂದೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸಲು 30 ಅಕ್ಟೋಬರ್ 2023 ಕೊನೆಯ ದಿನಾಂಕ ಎಂದು ನಿಗಮಗಳ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು ಅದರೆ ಈಗ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 10 ನವೆಂಬರ್ 2023ರ ವರೆಗೆ ನಿಗದಿಪಡಿಸಲಾಗಿದ್ದು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುಲು ಪ್ರಕಟಣೆಯಲ್ಲಿ ಉಲೇಖಿಸಲಾಗಿದೆ.

vehicle subsidy scheme- ಯಾವೆಲ್ಲ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ?

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(https://dbcdc.karnataka.gov.in), ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ(https://kvcdc.karnataka.gov.in), ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ(https://kvldcl.karnataka.gov.in),ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ(https://kmcdc.karnataka.gov.in),ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ(https://uppardevelopment.karnataka.gov.in), ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ(https://kssd.karnataka.gov.in), ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ(https://ambigaradevelopment.karnataka.gov.in),ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ(https://kmmd.karnataka.gov.in),ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮ(https://bcwd.karnataka.gov.in/#), ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ(https://kvcdcl.karnataka.gov.in)

ಇದನ್ನೂ ಓದಿ: Gruhalakshmi application: ಗೃಹಲಕ್ಷ್ಮಿ ಅರ್ಜಿ ಈ ರೀತಿಯಾದಲ್ಲಿ ನಿಮಗೆ ಹಣ ಬರುವುದಿಲ್ಲ!

four wheeler subsidy scheme in karnataka- ಈ ಯೋಜನೆಯಡಿ ಎಷ್ಟು ಸಹಾಯಧನದ ಪಡೆಯಬವುದು?

ಅರ್ಹ ಫಲಾನುಭವಿಗಳು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು ಖರೀದಿಸಲು ರಾಷ್ಟ್ರೀಕೃತ ಬ್ಯಾಂಕ್‌/ಗ್ರಾಮೀಣ ಬ್ಯಾಂಕ್‌ಗಳು ಮಂಜೂರು ಮಾಡಿದ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ ರೂ.3.00 ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಪಡೆಯಬವುದು. 

ಯೋಜನೆ ಸ್ವಾವಲಂಬಿ ಸಾರಥಿ ಯೋಜನೆ
ಸಹಾಯಧನ ಶೇ.50ರಷ್ಟು ಗರಿಷ್ಠ ರೂ.3.00 ಲಕ್ಷಗಳವರೆಗೆ 
ಅನ್ವಯ ನಾಲ್ಕು ಚಕ್ರಗಳ ವಾಹನ ಖರೀದಿಗೆ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-11-2023
ಅರ್ಜಿ ಸಲ್ಲಿಸಲು ಲಿಂಕ್ Apply now 
ಮಾರ್ಗಸೂಚಿ Click here

How to apply for Swabhimani sarathi scheme- ಎಲ್ಲಿ ಅರ್ಜಿ ಸಲ್ಲಿಸಬೇಕು?

ಈ ಯೋಜನೆಯಡಿ ನಾಲ್ಕು ಚಕ್ರದ ವಾಹನಕ್ಕೆ ಸಹಾಯಧನ ಪಡೆಯಲು ಅರ್ಹ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳ ಸಮೇತ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್ ಅಥವಾ CSC ಸೆಂಟರ್ ಭೇಟಿ ಮಾಡಿ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದು.

ಇದನ್ನೂ ಓದಿ: Ganga kalyana application last date-ಗಂಗಾ ಕಲ್ಯಾಣ,ಸ್ವಾವಲಂಬಿ ಸಾರಥಿ ಸೇರಿದಂತೆ ಇತರೆ 6 ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

required documents for Swabhimani sarathi yojana-ಒದಗಿಸಬೇಕಾದ ಅಗತ್ಯ ದಾಖಲಾತಿಗಳು:

ಅರ್ಜಿದಾರರು ಹಿಂದುಳಿದ ವರ್ಗಗಳಿಗೆ ಸೇರಿರಬೇಕು ಹಾಗೂ ಸಂಬಂಧಿಸಿದ ತಾಲ್ಲೂಕು ತಹಶೀಲ್ದಾರರು/ಕಂದಾಯ ಅಧಿಕಾರಿಗಳಿಂದ ನಿಗಧಿತ ನಮೂನೆಯಲ್ಲಿ ಪಡೆದ ಜಾತಿ/ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ.
ಅರ್ಜಿದಾರರ ವಾಸದ ಪುರಾವೆಗಾಗಿ ಸಕ್ಷಮ ಪ್ರಾಧಿಕಾರಗಳು ನೀಡಿದ ಆಧಾರ ಕಾರ್ಡ್/ಚುನಾವಣಾ ಗುರುತಿನ ಚೀಟಿ/ಪಡಿತರ ಚೀಟಿ.
ಲಘು ವಾಹನ ಚಾಲನಾ ಪರವಾನಗಿಯ ದೃಢೀಕೃತ ಪ್ರತಿ.
ಅರ್ಜಿದಾರರ ಪಾಸ್‌ ಪೋರ್ಟ್‌ ಅಳತೆಯ ಇತ್ತೀಚಿನ ಭಾವಚಿತ್ರ.
ಅರ್ಜಿದಾರರು ನಿರುದ್ಯೋಗಿ ಆಗಿರಬೇಕು. (ಸ್ವಯಂ ಘೋಷಣಾ ಪತ್ರ ಸಲ್ಲಿಸುವುದು).

ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಸಂಬಂಧಪಟ್ಟದ ನಿಗಮಗಳಿಂದ ಈ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿದಾರರಿಂದ ಸೇವಾ ಸಿಂಧು ಪೋರ್ಟಲ್‌ ಮುಖಾಂತರ ಆನ್‌ ಲೈನ್‌ ನಲ್ಲಿ ಅರ್ಜಿಗಳನ್ನು ಸ್ವೀಕರಿಸಿ ತದನಂತರ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಲ್ಲಿಕೆಯಾದ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಸರಿಯಾದ ದಾಖಲೆಗಳನ್ನು ಒದಗಿಸಿದ ಅರ್ಜಿಗಳನ್ನು ಮಾನ್ಯ ಶಾಸಕರು/ಜಿಲ್ಲಾ ಪಂಚಾಯತ್‌ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಇವರುಗಳ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಯ ಸಭೆಯಲ್ಲಿ ಮಂಡಿಸುತ್ತಾರೆ.

ಈ ಸಮಿತಿ ಸಭೆಯಲ್ಲಿ ಆಯಾ ಜಿಲ್ಲೆಗೆ/ವಿಧಾನಸಭಾ ಕ್ಷೇತ್ರಕ್ಕೆ ನಿಗಧಿಪಡಿಸಿದ ಗುರಿಯಂತೆ ಆಯ್ಕೆ ಸಮಿತಿಯ ಮೂಲಕ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ವಾಹನ ಖರೀದಿಸುವ ದರಪಟ್ಟಿಯೊಂದಿಗೆ ಸಾಲ ಮಂಜೂರಾತಿಗಾಗಿ ರಾಷ್ಟ್ರೀಕೃತ ಬ್ಯಾಂಕ್‌ ಗಳಿಗೆ ಶಿಫಾರಸ್ಸು ಮಾಡಲಾಗುತ್ತದೆ.

ಸದರಿ ಬ್ಯಾಂಕ್‌ ಶಾಖೆಯವರು ಈ ಅರ್ಜಿಗಳನ್ನು ಪರಿಶೀಲಿಸಿ ಸಾಲ ಮಂಜೂರಾತಿಗೆ ಪರಿಗಣಿಸಿ ಸಾಲ ಮಂಜೂರು ಮಾಡಿ, ನಿಗಮಗಳಿಂದ ಸಹಾಯಧನ ಬಿಡುಗಡೆಗೆ ಕೋರಿರುವ ಪ್ರಸ್ತಾವನೆಗಳನ್ನು ಮಂಜೂರಾತಿ ಪತ್ರ/ಕ್ಲೈಮ್‌ ಪತ್ರದೊಂದಿಗೆ ಆನ್‌ ಲೈನ್‌ ನಲ್ಲಿ ಜಿಲ್ಲಾ ವ್ಯವಸ್ಥಾಪಕರಿಗೆ ಕಳುಹಿಸಲಾಗುತ್ತದೆ.