- Advertisment -
HomeAgriculturefree vermicompost and dairy training- ಉಚಿತ ಡೈರಿ ಮತ್ತು ಎರೆಹುಳು ಗೊಬ್ಬರ ಉತ್ಪಾದನೆ ತರಬೇತಿಗೆ...

free vermicompost and dairy training- ಉಚಿತ ಡೈರಿ ಮತ್ತು ಎರೆಹುಳು ಗೊಬ್ಬರ ಉತ್ಪಾದನೆ ತರಬೇತಿಗೆ ಅರ್ಜಿ!

Last updated on September 30th, 2024 at 02:34 pm

ನಿರುದ್ಯೋಗಿ ಯುವಕರಿಗೆ ಸ್ವ-ಉದ್ಯೋಗವನ್ನು ಆರಂಭಿಸಲು ಕೌಶಲ್ಯ ತರಬೇತಿಗಳನ್ನು ನೀಡಲು ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಇವರ ವತಿಯಿಂದ ವಿವಿಧ ಬಗ್ಗೆಯ ಸ್ವ-ಉದ್ಯೋಗವನ್ನು ಪ್ರತಿ ತಿಂಗಳು ಸಹ ನೀಡಲಾಗಿತ್ತಿದ್ದು ಪ್ರಸ್ತುತ ಈ ಕೇಂದ್ರದಿಂದ  ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಿ ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲತಿಗಳೇನು? ತರಬೇತಿ ಪಡೆದ ಬಳಿಕ ಸ್ವ-ಉದ್ಯೋಗವನ್ನು ಮಾಡಲು ಬ್ಯಾಂಕ್ ನಿಂದ ಸಾಲ ಸೌಲಭ್ಯವನ್ನು ಪಡೆಯುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: RVNL Recruitment 2024- ರೈಲು ವಿಕಾಸ ನಿಗಮದಲ್ಲಿ ವ್ಯವಸ್ಥಾಪಕ ಹುದ್ದೆಗಳ ಭರ್ತಿ!ವೇತನ 2 ಲಕ್ಷ ರೂ. ವರೆಗೆ ಸಂಬಳ!

ತರಬೇತಿ ನಡೆಯುವ ದಿನಾಂಕ:

ಈ ತರಬೇತಿಯು ದಿನಾಂಕ: 28 ಆಗಸ್ಟ 2024 ರಿಂದ ಪ್ರಾರಂಭವಾಗಿ 06 ಸೆಪ್ಟೆಂಬರ್ 2024 ವರೆಗೆ ಒಟ್ಟು  10 ದಿನಗಳವರೆಗೆ ನಡೆಯಲಿದ್ದು ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತರಬೇತಿ ವಿಶೇಷತೆಗಳು:

ಈ ತರಬೇತಿಯು ಉಚಿತ ಊಟ ಮತ್ತು ವಸತಿ ಸಹಿತ ಸಂಪೂರ್ಣ ಉಚಿತವಾಗಿರುತ್ತದೆ.

ತರಬೇತಿ ನೀಡುವುದರ ಜೊತೆಗೆ ಈ ಉದ್ಯೋಗವನ್ನು ಆರಂಭಿಸಲು ಬ್ಯಾಂಕ್ ನಿಂದ ಸಾಲವನ್ನು ಪಡೆಯುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿ ಜೊತೆಗೆ ಸರಕಾರಿ ಯೋಜನೆಯಡಿ ಸಹಾಯಧನ ಪಡೆಯಲು ಮಾರ್ಗದರ್ಶನ ನೀಡಲಾಗುತ್ತದೆ.

ಇದನ್ನೂ ಓದಿ: Vidyarthi vethana-2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ಉತ್ಪಾದನೆ ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು.

1) ಅರ್ಜಿದಾರರ ವಯಸ್ಸು ರಿಂದ ರ ಒಳಗೆ ಇರಬೇಕು.
2) ತರಬೇತಿ ಪಡೆದ ಬಳಿಕ ಸ್ವ-ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
3) ಗ್ರಾಮೀಣ ಭಾಗದ ಬಿ.ಪಿ.ಎಲ್ ಕಾರ್ಡ ಹೊಂದಿರುವವರು ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಈ ತರಬೇತಿಯನ್ನು ಪಡೆಯಲು ಎರಡು ವಿಧಾನ ಅನುಸರಿಸಿ ಅರ್ಜಿ ಸಲ್ಲಿಸಲು ಅವಕಾಶವಿದ್ದು ಈ ಲೇಖನದ ಕೆಳಗೆ ನೀಡಿರುವ ಗೂಗಲ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಪಾರ್ಮ್ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತರಬೇತಿ ಪಡೆಯಲು ನೊಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮತ್ತು ತರಬೇತಿಗೆ ಹೆಸರು ನೊಂದಣಿ ಮಾಡಲು ಮೊಬೈಲ್ ಸಂಖ್ಯೆಗಳು: 9449860007, 9538281988, 9916783825, 8880444612(ಕರೆ ಮಾಡಬೇಕಾದ ಸಮಯ ಬೆಳಿಗ್ಗೆ 9.30 ರಿಂದ ಸಂಜೆ 5.30 ರ ವರೆಗೆ)

ಇದನ್ನೂ ಓದಿ: Free job training- PSI ಹಾಗೂ ಪ್ಯಾರಾ ಮಿಲಿಟರಿ ಪೂರ್ವ ನೇಮಕಾತಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ!

ತರಬೇತಿ ಕೇಂದ್ರದ ವಿಳಾಸ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ 

ಅರ್ಜಿ ಸಲ್ಲಿಸಲು ಲಿಂಕ್: Apply Now

- Advertisment -
LATEST ARTICLES

Related Articles

- Advertisment -

Most Popular

- Advertisment -