HomeGovt SchemesVidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

ಕನಕದಾಸಾರ ಜಯಂತೋತ್ಸವ ಸಮಿತಿಯಿಂದ ಮೈಸೂರಿನಲ್ಲಿ ಏರ್ಪಡಿಸಿದ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯಾಸಿರಿ ಯೋಜನೆಯಡಿ(Vidyasiri scholarship) ನೀಡುತ್ತಿರುವ ವಿದ್ಯಾರ್ಥಿವೇತನವನ್ನು ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸೂಕ್ತ ಮೂಲ ಸೌಕರ್ಯ/ಕಲಿಕ ಸಾಮಗ್ರಿಗಳನ್ನು ಪಡೆದುಕೊಳ್ಳುಲು ಧನ ಸಹಾಯವನ್ನು ಮಾಡಲು ವಿದ್ಯಾಸಿರಿ ಯೋಜನೆಯಡಿಯಲ್ಲಿ ಪ್ರಸ್ತುತ ಒಂದು ವರ್ಷಕ್ಕೆ ರೂ 15,000 ದಂತೆ ಪ್ರತಿ ತಿಂಗಳು ರೂ 1,500 ವಿದ್ಯಾರ್ಥಿವೇತನ ನೀಡಲಾಗುತ್ತಿದೆ ಈ ಮೊತ್ತವನ್ನು ಏರಿಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಇದನ್ನೂ ಓದಿ: Mobile addiction- ನಿಮ್ಮ ಮೊಬೈಲ್ ನಲ್ಲಿ ಈ ಸೆಟ್ಟಿಂಗ್ ಆನ್ ಮಾಡಿ! ನಿಮ್ಮ ಮಕ್ಕಳು ಮೊಬೈಲ್ ಬಳಕೆ ಮಾಡುವುದನ್ನು ತಪ್ಪಿಸಿ!

ವಿದ್ಯಾಸಿರಿ ಯೋಜನೆಯಡಿ ಅರ್ಥಿಕ ನೆರವನ್ನು ಯಾರೆಲ್ಲ ಪಡೆಯಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅಗತ್ಯ ದಾಖಲಾತಿಗಳೇನು? ಈ ಯೋಜನೆ ಮಾರ್ಗಸೂಚಿಯ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.

scholarship- ರೂ 1,500 ರೂ 2,000 ಕ್ಕೆ ಏರಿಕೆ:

ವಿದ್ಯಾಸಿರಿ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಪ್ರತಿ ತಿಂಗಳಿಗೆ ರೂ 1,500 ರೂ 2,000ಕ್ಕೆ ಹೆಚ್ಚಳ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Yuvanidhi application-2024: ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ!

Vidyasiri scholarship guidelines-ವಿದ್ಯಾಸಿರಿ ಯೋಜನೆಯಡಿ ಅರ್ಥಿಕ ನೆರವನ್ನು ಯಾರೆಲ್ಲ ಪಡೆಯಬಹುದು?

1) ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

2) ವಿದ್ಯಾರ್ಥಿಯು ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು.

3) ಕರ್ನಾಟಕ ಶಾಸನಬದ್ದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ/ ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆಗಳು/ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.

4) ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ ತಂದೆ- ತಾಯಿ / ಪೋಷಕರ ಕುಟುಂಬದ ಒಟ್ಟು ವಾರ್ಷಿಕ ಆದಾಯ ( Gross Annual Income) ಈ ಕೆಳಗೆ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು.

A) ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ 2.50ಲಕ್ಷ
B) ಪ್ರವರ್ಗ-2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ರೂ1.00ಲಕ್ಷ

ಇದನ್ನೂ ಓದಿ: Scholarship application- ವಿದ್ಯಾಧನ ರೂ 55,000 ಸಾವಿರ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

scholarship

ಇದನ್ನೂ ಓದಿ: BPL Card guidelines- ರಾಜ್ಯ ಸರಕಾರದಿಂದ ಈ ವರ್ಗಕ್ಕೆ ಸೇರಿದವರ ಬಿಪಿಎಲ್ ಕಾರ್ಡ ರದ್ದುಗೊಳಿಸಲು ಸೂಚನೆ!

4) ಸ್ನಾತಕೋತ್ತರ/ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕೋರ್ಸಿನ ಅವಧಿಯಲ್ಲಿ ಮೆಡಿಕಲ್ ಪ್ರಾಕ್ಟಿಸ್‌ ಮಾಡುತ್ತಿದ್ದಲ್ಲಿ, ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.

5) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ. ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.

6) ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸುಗಳ ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ/ಅನುತ್ತೀರ್ಣರಾದವರು ಅಂಗೀಕೃತ ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮ, ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ.

ಇದನ್ನೂ ಓದಿ: Health Department- ಆರೋಗ್ಯ ಇಲಾಖೆಯಿಂದ ಮತ್ತೊಂದು ಜನಸ್ನೇಹಿ ಯೋಜನೆ ಜಾರಿ!

Vidyasiri scholarship application- ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ:

ಅಗತ್ಯ ದಾಖಲಾತಿಗಳ ಸಮೇತ ಅರ್ಹ ವಿದ್ಯಾರ್ಥಿಗಳು ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರಗಳನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Vidyasiri scholarship amount-ರೂ 1,500 ರೂ 2,000 ಕ್ಕೆ ಏರಿಕೆ ಯಾವಾಗಿನಿಂದ ಜಾರಿ?

ವಿದ್ಯಾಸಿರಿ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಪ್ರತಿ ತಿಂಗಳಿಗೆ ರೂ 1,500 ರೂ 2,000ಕ್ಕೆ ಹೆಚ್ಚಳವನ್ನು ಮುಂದಿನ ವರ್ಷದಿಂದ ಅನುಷ್ಥಾನಕ್ಕೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿಳಿಸಿದ್ದಾರೆ.

scholarship website- ಯೋಜನೆಯ ಅಧಿಕೃತ ವೆಬ್ಸೈಟ್: Click here

Most Popular

Latest Articles

Related Articles